• search
  • Live TV
ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಹುಅಂಗಾಂಗ ವೈಫಲ್ಯ; ಶಿರಾ ಶಾಸಕ ಬಿ.ಸತ್ಯನಾರಾಯಣ ನಿಧನ

By ತುಮಕೂರು ಪ್ರತಿನಿಧಿ
|
Google Oneindia Kannada News

ತುಮಕೂರು, ಆಗಸ್ಟ್‌ 04: ಶಿರಾ ಶಾಸಕ ಹಾಗೂ ಮಾಜಿ ಸಚಿವ, ಜೆಡಿಎಸ್ ಹಿರಿಯ ಮುಖಂಡ ಬಿ. ಸತ್ಯನಾರಾಯಣ ಅವರು ಬಹುಅಂಗಾಂಗ ವೈಫಲ್ಯದಿಂದ ಮಂಗಳವಾರ, ಜುಲೈ 04ರ ರಾತ್ರಿ 10.45ಕ್ಕೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಈಚೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ನಿನ್ನೆ ರಾತ್ರಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಸತ್ಯನಾರಾಯಣ ಅವರಿಗೆ ಐವರು ಹೆಣ್ಣುಮಕ್ಕಳು ಹಾಗೂ ಒಬ್ಬ ಪುತ್ರ ಇದ್ದಾರೆ.

ಸತ್ಯನಾರಾಯಣ ಅವರ ನಿಧನಕ್ಕೆ ಜೆಡಿಎಸ್ ನಾಯಕ ಎಚ್.ಡಿ.ದೇವೇಗೌಡ ಅವರು ಸಂತಾಪ ಸೂಚಿಸಿದ್ದಾರೆ. "ಶಾಸಕ ಹಾಗೂ ನನ್ನ ಮಿತ್ರರಾದ ಸತ್ಯನಾರಾಯಣ್ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಸತ್ಯನಾರಾಯಣ್ ಮತ್ತು ನನ್ನ ಸ್ನೇಹ ಸುಮಾರು 3 ದಶಕಗಳದ್ದು. ಅವರಿಲ್ಲದ ದಿನಗಳನ್ನು ನೆನೆಯಲು ಕಷ್ಟವಾಗುತ್ತದೆ" ಎಂದಿದ್ದಾರೆ.

English summary
Tumakuru shira mla B.Sathyanarayana dies of failure of treatment on tuesday night. He was suffering from multi organ failure,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X