ಪ್ರತ್ಯೇಕ ಲಿಂಗಾಯತ ಧರ್ಮ ಶಿಫಾರಸು ಸ್ವಾಗತಿಸಿದ ಸಿದ್ದಗಂಗಾ ಮಠ

ತುಮಕೂರು, ಮಾರ್ಚ್ 20: ರಾಜ್ಯ ಸರ್ಕಾರ ಸೋಮವಾರ ನಡೆದ ಸಂಪುಟ ಸಭೆಯ ನಂತರ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಶಿಫಾರಸು ಮಾಡಿದೆ. ಸರಕಾರದ ಈ ತೀರ್ಮಾನವನ್ನು ತುಮಕೂರಿನ ಸಿದ್ದಗಂಗಾ ಮಠ ಸ್ವಾಗತಿಸಿದೆ. ವೀರಶೈವ ಮತ್ತು ಲಿಂಗಾಯತ ಇಬ್ಬರನ್ನು ಸೇರಿಸಿ ಶಿಫಾರಸು ಮಾಡಿರುವುದು ಸ್ವಾಗತಾರ್ಹ ಎಂದು ಮಠ ಹೇಳಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಸರಕಾರದ ತೀರ್ಮಾನದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಜೈನ ಧರ್ಮದವರೂ ಕೆಲವು ಹಿಂದೂ ಧರ್ಮದ ಆಚರಣೆಗಳನ್ನು ಅನುಸರಿಸುತ್ತಿದ್ದಾರೆ. ಆದರೆ ಅವರು ಹಿಂದೂಗಳಲ್ಲ. ಇದೇ ರೀತಿ ಲಿಂಗಾಯತ ಕೂಡ," ಎಂದು ಹೇಳಿದ್ದಾರೆ.

"ಹಿಂದೂ ಧರ್ಮ ಆಳವಾಗಿ ಬೇರುಬಿಟ್ಟಿದೆ. ಲಿಂಗಾಯತ ಧರ್ಮ ಪ್ರತ್ಯೇಕವಾದ ತಕ್ಷಣ ಹಿಂದೂ ಧರ್ಮಕ್ಕೆ ಧಕ್ಕೆ ಆಗುವುದಿಲ್ಲ," ಎಂದು ಹೇಳಿದ ಅವರು, ಎಲ್ಲರನ್ನೂ ಒಳಗೊಂಡು ಪ್ರತ್ಯೇಕ ಧರ್ಮವಮಾಗಬೇಕು ಎಂಬುದು ನಮ್ಮ ಆಶಯವಾಗಿತ್ತು. ಸಚಿವ ಸಂಪುಟದ ನಿರ್ಣಯವನ್ನು ಸ್ವಾಗತಿಸುತ್ತೇವೆ ಎಂದಿದ್ದಾರೆ.

Siddaganga Math welcomes separate Lingayat religion recommendation

ಕೆಲವು ಸ್ವಾಮೀಜಿಗಳು ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ವಿರೋಧ ವ್ಯಕ್ತಪಡಿಸಿರಬಹುದು, ಅದು ಅವರ ವೈಯಕ್ತಿಕ ನಿರ್ಧಾರ ಎಂದ ಸ್ವಾಮೀಜಿಗಳು, ಪ್ರತ್ಯೇಕ ಲಿಂಗಾಯತ ಧರ್ಮದಿಂದ ಅಲ್ಪಸಂಖ್ಯಾತರ ಸೌಲಭ್ಯಗಳು ಸಿಕ್ಕಿದರೆ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+