ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಕೊಂಚ ಏರುಪೇರು

ತುಮಕೂರು, ಜನವರಿ 26: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ದಗಂಗಾ ಮಠ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಕೊಂಚ ಏರು ಪೇರಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಶ್ರೀಮಠದ ಸಿಬ್ಬಂದಿ ಹೇಳಿದ್ದಾರೆ.

110 ವರ್ಷ ವಯಸ್ಸಿನ ಶ್ರೀಗಳಿಗೆ ಗುರುವಾರ ಸಂಜೆ ವೇಳೆ ಜ್ವರ ಕಾಣಿಸಿಕೊಂಡಿತ್ತು. ಆಂಟಿಬಯೋಟಿಕ್ಸ್ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನಿಂದ ಬೆಂಗಳೂರಿಗೆ ಕರೆದೊಯ್ಯಲು ನಿರ್ಧರಿಸಲಾಯಿತು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಅವರು ಖಾಸಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

Siddaganga Seer Suffering from illness admitted to BGS Hospital

ಶುಕ್ರವಾರ ಬೆಳಗ್ಗೆ 5 ಗಂಟೆಗೆ ಎದ್ದು ನಿತ್ಯಪೂಜೆ ಪೂರೈಸಲು ಮುಂದಾಗಿದ್ದ ಶ್ರೀಗಳ ಮನ ಓಲೈಸಿದ ಆಪ್ತರು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಕರೆದುಕೊಂಡು ಬರುತ್ತಿದ್ದಾರೆ.

ಬೆಳಗ್ಗೆ 8 ಗಂಟೆ ವೇಳೆಗೆ ಆಸ್ಪತ್ರೆಗೆ ಬರುವ ನಿರೀಕ್ಷೆಯಿದೆ. ಎರಡು ದಿನಗಳ ಹಿಂದೆ ಮತ್ತೆ ಶೀತ, ಕಫ, ಜ್ವರ ಕಾಣಿಸಿಕೊಂಡಿತ್ತು. ಶ್ವಾಸಕೋಶ, ಜಠರ ಹಾಗೂ ಮೂತ್ರದಲ್ಲಿ ಸೋಂಕು ಇರುವ ಶಂಕೆಯಿದ್ದು, ರಕ್ತದ ಮಾದರಿಯನ್ನು ಪರೀಕ್ಷಿಸಲಾಗಿದೆ. 5 ಜನ ವೈದ್ಯರ ತಂಡ ಶ್ರೀಗಳ ಆರೋಗ್ಯದ ಮೇಲೆ ನಿಗಾವಹಿಸಲಿದ್ದಾರೆ ಎಂದು ತಜ್ಞ ವೈದ್ಯ ಡಾ.ವೆಂಕಟರಮಣ ತಿಳಿಸಿದ್ದಾರೆ.

ಏಪ್ರಿಲ್ 01, 1908ರಂದು ಜನಿಸಿದ ಶಿವಕುಮಾರ ಸ್ವಾಮೀಜಿ ಅವರಿಗೆ 2015ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವಿರಕ್ತಾಶ್ರಮ ದೀಕ್ಷೆ ಪಡೆದು 1930ರಲ್ಲಿ ಸಿದ್ಧಗಂಗಾ ಕ್ಷೇತ್ರ ಪ್ರವೇಶಿಸಿದರು. ಅಂದಿನಿಂದ ಸಿದ್ಧಗಂಗಾ ಮಠಕ್ಕೆ ಹೊಸ ಬೆಳಕು ಮೂಡಿಬಂತು. ಜಂಗಮ ಮೂರ್ತಿಗಳಾದ ಶಿವಕುಮಾರ ಮಹಾಸ್ವಾಮಿಗಳು ಉದ್ಧಾನ ಶಿವಯೋಗಿಗಳ ಅಣತಿಯಂತೆ 1941ರಲ್ಲಿ ಸಿದ್ಧಗಂಗಾ ಮಠದ ಉತ್ತರಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡರು. ನಂತರ ಸಿದ್ಧಗಂಗಾ ಕ್ಷೇತ್ರದ ಸ್ವರೂಪ ಆಮೂಲಾಗ್ರವಾಗಿ ಬದಲಾವಣೆಯಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+