ನಾಳೆ ಸಿದ್ಧಗಂಗಾ ಶ್ರೀಗಳ 111ನೇ ಜನ್ಮದಿನ: ಮಠದಲ್ಲಿ ಸಂಭ್ರಮ
ತುಮಕೂರು, ಮಾರ್ಚ್ 31: ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳು ಏಪ್ರಿಲ್ 1ರಂದು 111ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.
ಶ್ರೀಗಳ ಹುಟ್ಟುಹಬ್ಬ ಆಚರಣೆಗೆ ಮಠ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ. ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಮಠಕ್ಕೆ ಆಗಮಿಸುವ ಕಾರಣ ಬೆಳಗ್ಗೆ 7 ಗಂಟೆಯಿಂದಲೇ ಸಿದ್ಧಗಂಗಾ ಶ್ರೀಗಳು ಭಕ್ತರಿಗೆ ದರ್ಶನ ನೀಡಲಿದ್ದಾರೆ.
ಶ್ರೀಗಳ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಡೀ ತುಮಕೂರಿನಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ರಸ್ತೆಯದ್ದಕ್ಕೂ ಶ್ರೀಗಳ ಕಟೌಟ್, ಬ್ಯಾನರ್ ಗಳು ರಾರಾಜಿಸುತ್ತಿವೆ. ರಾಜ್ಯದ ಮೂಲೆ ಮೂಲೆ ಗಳಿಂದ ಬರುವ ಭಕ್ತರಿಗೆ 9ಕಡೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಭಾನುವಾರ ಬೆಳಗ್ಗೆ 7ಗಂಟೆಗೆ ಆರಂಭವಾಗುವ ಪ್ರಸಾದ ಸೇವೆ ರಾತ್ರಿ 11ರವರೆಗೆ ನಿರಂತರೌಆಗಿ ನಡೆಯಲಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಮಠಕ್ಕೆ ಬರುವ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಲಿದೆ ಎಂದು ಅಂದಾಜಿಸಲಾಗಿದೆ. ಶ್ರೀಗಳ ಜನ್ಮ ದಿನದ ಪ್ರಯತ್ನ ದಿನವಿಡೀ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.












Click it and Unblock the Notifications