• search
  • Live TV
ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ತುಮಕೂರು: ಗೋಡೆಕೆರೆ ಮಠದ ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ ನಿಧನ

|

ತುಮಕೂರು, ಅಕ್ಟೋಬರ್ 4: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಮಠದ ಶ್ರೀಗಳಾದ ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ (65) ನಿಧನ ಇಂದು ನಿಧನರಾಗಿದ್ದಾರೆ.

ಭಾನುವಾರ ಬೆಳಿಗ್ಗೆ ತೀವ್ರ ಹೃದಯಾಘಾತದಿಂದಾಗಿ ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆಂದು ಮಠದ ಮೂಲಗಳು ತಿಳಿಸಿವೆ.

ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿಯು ಗೋಡೆಕೆರೆ ಶ್ರೀ ಮಠಕ್ಕೆ 9 ನೇ ಗುರುಗಳಾಗಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ಧಾರ್ಮಿಕವಾಗಿ ಸಾಕಷ್ಟು ಕೆಲಸ ಕಾರ್ಯದಲ್ಲಿ ತೊಡಗಿದ್ದರು. ಶ್ರೀ ಮಠದಿಂದ ಶಾಲಾ-ಕಾಲೇಜುಗಳು, ವಸತಿ ನಿಲಯ ಹಾಗೂ ಅನಾಥಾಶ್ರಮಗಳನ್ನು ತೆರೆದು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ನೆರವಾಗಿದ್ದರು.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಮಠದ ಸ್ಥಿರ ಪಟ್ಟಾಧ್ಯಕ್ಷರಾಗಿದ್ದ ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿಗಳ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮ ದೇಶಿಕೇಂದ್ರ ಶ್ರೀಗಳ ಅಕಾಲಿಕ ಅಗಲಿಕೆ ನೋವು ತಂದಿದೆ ಎಂದಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು, ಶ್ರೀಗಳ ಆತ್ಮಕ್ಕೆ ಸದ್ಗತಿ ದೊರೆಯಲಿ ಹಾಗೂ ಅವರ ಅಪಾರ ಭಕ್ತ ವೃಂದಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

English summary
Siddarama Deshikendra Swamiji (65) of the Godekere Math in Chikkanayanahalli taluk of Tumkur district has passed away today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X