ಶಿರಾದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಿದ್ದರಾಮಯ್ಯ
ತುಮಕೂರು, ಡಿಸೆಂಬರ್ 28 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಮಕೂರು ಜಿಲ್ಲೆಯ ಶಿರಾದಲ್ಲಿ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ ಮಾಡಿದರು.
ನವ ಕರ್ನಾಟಕ ನಿರ್ಮಾಣಕ್ಕಾಗಿ ರಾಜ್ಯ ಪ್ರವಾಸ ಕೈಗೊಂಡಿರುವ ಸಿದ್ದರಾಮಯ್ಯ ಗುರುವಾರ ತುಮಕೂರು ಜಿಲ್ಲೆಗೆ ಆಗಮಿಸಿದ್ದಾರೆ. ಶಿರಾ ತಾಲೂಕಿನಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿ ಉಪಹಾರ ಸವಿದರು.

ಶಿರಾ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಸಣ್ಣ ನೀರಾವರಿ ಸಚಿವ ಟಿ.ಬಿ.ಜಯಚಂದ್ರ ಅವರ ಸ್ವಕ್ಷೇತ್ರ. ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿದ ಬಳಿಕ ಶಿರಾದಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಸಿದ್ದರಾಮಯ್ಯ ಮಾತನಾಡಿದರು.
ಕರ್ನಾಟಕ ಸರ್ಕಾರ ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ಬೆಂಗಳೂರು ನಗರದಲ್ಲಿ ಇಂದಿರಾ ಕ್ಯಾಂಟೀನ್ ಆರಂಭವಾಗಿದೆ. ಇದೇ ಮೊದಲ ಬಾರಿಗೆ ಬೆಂಗಳೂರು ನಗರ ಹೊರತುಪಡಿಸಿ ಬೇರೆ ಜಿಲ್ಲೆಯಲ್ಲಿ ಕ್ಯಾಂಟೀನ್ ಆರಂಭಿಸಲಾಗಿದೆ.

ಜನವರಿ 1ರಿಂದ ರಾಜ್ಯದ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭವಾಗಲಿದೆ. ಒಟ್ಟು 247 ಕ್ಯಾಂಟೀನ್‌ಗಳು ಹೊರ ಜಿಲ್ಲೆಗಳಲ್ಲಿ ಆರಂಭವಾಗಲಿವೆ.












Click it and Unblock the Notifications