• search
  • Live TV
ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿರಾ ಉಪ ಚುನಾವಣೆ; ಬಿಜೆಪಿ ಅಭ್ಯರ್ಥಿ ಘೋಷಣೆ

|

ತುಮಕೂರು, ಅಕ್ಟೋಬರ್ 13: ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ನಾಮಪತ್ರವನ್ನು ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನವಾಗಿದೆ.

ಮಂಗಳವಾರ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ನಿರೀಕ್ಷೆಯಂತೆ ಡಾ. ರಾಜೇಶ್ ಗೌಡ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ನವೆಂಬರ್ 3ರಂದು ಉಪ ಚುನಾವಣೆ ನಡೆಯಲಿದೆ.

ಶಿರಾ ಉಪ ಚುನಾವಣೆ; ಬಿಜೆಪಿ ಗೆಲುವು ಅಷ್ಟು ಸುಲಭವಲ್ಲ!

ಡಾ. ರಾಜೇಶ್ ಗೌಡ ಅವರ ತಂದೆ ಮೂಡಲಗಿರಿಯಲ್ಲ ಕಾಂಗ್ರೆಸ್ ಸದಸ್ಯರಾಗಿದ್ದರು. ಕುಂಚಿಟಿಗ ಒಕ್ಕಲಿಗ ಸಮುದಾಯಕ್ಕೆ ಸೇರಿರುವ ರಾಜೇಶ್ ಗೌಡ ಅವರು ಕೆಲವೇ ದಿನಗಳ ಹಿಂದೆ ಬಿಜೆಪಿ ಸೇರಿದ್ದರು. ಈಗ ಟಿಕೆಟ್ ನೀಡಲಾಗಿದೆ.

ಶಿರಾ ಉಪ ಚುನಾವಣೆ; ನಾಮಪತ್ರ ಸಲ್ಲಿಸಿದ ಟಿ. ಬಿ. ಜಯಚಂದ್ರ

2018ರ ಚುನಾವಣೆಯಲ್ಲಿ ಶಿರಾ ಕ್ಷೇತ್ರದಲ್ಲಿ ಜೆಡಿಎಸ್‌ನ ಬಿ. ಸತ್ಯನಾರಾಯಣ ಗೆಲವು ಸಾಧಿಸಿದ್ದರು. ಅವರ ಅಕಾಲಿಕ ನಿಧನದಿಂದಾಗಿ ಉಪ ಚುನಾವಣೆ ಎದುರಾಗಿದೆ. ಜೆಡಿಎಸ್ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮಗೆ ಟಿಕೆಟ್ ನೀಡಿದೆ.

ಶಿರಾ, ಆರ್. ಆರ್. ನಗರ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ಶಿರಾ ಕ್ಷೇತ್ರದಲ್ಲಿ 2008 ಮತ್ತು 2013ರ ಚುನಾವಣೆಯಲ್ಲಿ ಬಿ. ಕೆ. ಮಂಜುನಾಥ್ ಅಭ್ಯರ್ಥಿಯಾಗಿದ್ದರು. 2018ರ ಚುನಾವಣೆಯಲ್ಲಿ ಎಸ್. ಆರ್. ಗೌಡ ಅಭ್ಯರ್ಥಿಯಾಗಿದ್ದರು. ಈ ಬಾರಿ ಪುನಃ ಪಕ್ಷ ಅಭ್ಯರ್ಥಿಯನ್ನು ಬದಲಾವಣೆ ಮಾಡಿ ಕ್ಷೇತ್ರದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದೆ.

ಬಿಜೆಪಿ ಅಭ್ಯರ್ಥಿಗಳು ಕ್ಷೇತ್ರದಲ್ಲಿ 2008ರಲ್ಲಿ 24,025 ಮತ, 2013ರಲ್ಲಿ 18,884 ಮತ, 2018ರಲ್ಲಿ 16,959 ಮತಗಳನ್ನು ಪಡೆದಿದ್ದಾರೆ. ಆದರೆ, ಈಗ ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರದಲ್ಲಿ ಇರುವುದರಿಂದ ಉಪ ಚುನಾವಣೆ ಗೆಲ್ಲುವ ಉತ್ಸಾಹದಲ್ಲಿ ಪಕ್ಷವಿದೆ.

ಟಿಕೆಟ್ ನೀಡಲು ವಿರೋಧ : ಬಿ. ಕೆ. ಮಂಜುನಾಥ್‌ ಡಾ. ರಾಜೇಶ್ ಗೌಡಗೆ ಟಿಕೆಟ್ ನೀಡಲು ವಿರೋಧ ವ್ಯಕ್ತಪಡಿಸಿದ್ದರು. "ಬೇರೆ ಪಕ್ಷದ ಅಭ್ಯರ್ಥಿಗೆ ಟಿಕೆಟ್ ಕೊಡುವುದಕ್ಕೆ ನಮ್ಮ ವಿರೋಧವಿದೆ. ಹೊರಗಿನಿಂದ ಬಂದವರಿಗೆ ಟಿಕೆಟ್ ಕೊಟ್ಟರೆ ನಾವು ಕೆಲಸ ಮಾಡಲ್ಲ" ಎಂದು ಹೇಳಿದ್ದರು.

ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ. ಬಿ. ಜಯಚಂದ್ರ. ಮಾಜಿ ಸಚಿವ ಜಯಚಂದ್ರ 2008, 2013ರಲ್ಲಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಆದರೆ, 2018ರ ಚುನಾವಣೆಯಲ್ಲಿ ಸೋತಿದ್ದರು. ಈ ಬಾರಿಯೂ ಅವರಿಗೆ ಪಕ್ಷ ಟಿಕೆಟ್ ನೀಡಿದೆ.

English summary
BJP announced candidate for Tumakuru district Sira by election scheduled on November 3, 2020. Dr. Rajesh gowda party candidate for by poll.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X