ಶಿರಾ ಉಪ ಚುನಾವಣೆ ಫಲಿತಾಂಶ; ಕಾಂಗ್ರೆಸ್, ಬಿಜೆಪಿ ನೇರ ಪೈಪೋಟಿ

ತುಮಕೂರು, ನವೆಂಬರ್ 10: ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ನಡುವೆ ನೇರ ಪೈಪೋಟಿ ನಡೆಯುತ್ತಿದೆ.

ಮಂಗಳವಾರ ತುಮಕೂರು ನಗರದ ಪಾಲಿಟೆಕ್ನಕ್ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಒಟ್ಟು 24 ಸುತ್ತಿನಲ್ಲಿ ಎಣಿಕೆ ಕಾರ್ಯ ನಡೆಯಲಿದೆ. 4ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ನೇರ ಹಣಾಹಣಿ ಏರ್ಪಟ್ಟಿದೆ.

ಬೆಳಗ್ಗೆ 1.30ರ ಮಾಹಿತಿ ಅನ್ವಯ ಶಿರಾದಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ 8,642 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್‌ನ ಟಿ. ಬಿ. ಜಯಚಂದ್ರ 7,339 ಮತ ಪಡೆದಿದ್ದಾರೆ. ಜೆಡಿಎಸ್‌ನ ಅಮ್ಮಾಜಮ್ಮ ಪಡೆದ ಮತಗಳು 4,657.

Sira By Election Result 2020 Direct Fight Between BJP And Congress

2018ರಲ್ಲಿ ಜೆಡಿಎಸ್‌ನ ಬಿ. ಸತ್ಯನಾರಾಯಣ ಗೆಲುವು ಸಾಧಿಸಿದ ಕ್ಷೇತ್ರ ಶಿರಾ. ಅವರ ಅಕಾಲಿಕ ನಿಧನದಿಂದಾಗಿ ಉಪ ಚುನಾವಣೆ ಎದುರಾಗಿತ್ತು. ಜೆಡಿಎಸ್‌ ಸತ್ಯನಾರಾಯಣ ಪತ್ನಿ ಅಮ್ಮಾಜಮ್ಮಗೆ ಟಿಕೆಟ್ ನೀಡಿದರೂ ಸಹ ಅನುಕಂಪದ ಮತಗಳು ಬಂದಿಲ್ಲ ಎಂಬ ಚಿತ್ರಣ ಕಾಣುತ್ತಿದೆ.

ಕಾಂಗ್ರೆಸ್‌ನ ಟಿ. ಬಿ. ಜಯಚಂದ್ರ ಶಿರಾ ಕ್ಷೇತ್ರದಿಂದ 2008, 2013ರಲ್ಲಿ ಗೆಲುವು ಸಾಧಿಸಿದ್ದಾರೆ. 2018ರಲ್ಲಿ ಜೆಡಿಎಸ್‌ನ ಬಿ. ಸತ್ಯನಾರಾಯಣ ವಿರುದ್ಧ ಸೋತಿದ್ದರು. ಈಗ ಉಪ ಚುನಾವಣೆಯಲ್ಲಿ ಬಿಜೆಪಿಗೆ ಪೈಪೋಟಿ ನೀಡುತ್ತಿದ್ದಾರೆ.

ಶಿರಾದಲ್ಲಿ ಬಿಜೆಪಿ ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ತಯಾರಿಯನ್ನು ಆರಂಭಿಸಿತ್ತು. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ.ವಿಜಯೇಂದ್ರ ಪ್ರಚಾರದ ಉಸ್ತುವಾರಿ ವಹಿಸಿಕೊಂಡಿದ್ದರು.

ಬಿಜೆಪಿ ಶಿರಾ ಕ್ಷೇತ್ರದಲ್ಲಿ ಇದುವರೆಗೂ ಗೆದ್ದಿಲ್ಲ. ಉಪ ಚುನಾವಣೆಯಲ್ಲಿ ಗೆದ್ದರೆ ಡಾ. ರಾಜೇಶ್ ಗೌಡ ಮತ್ತು ಬಿಜೆಪಿಯದ್ದು ಕ್ಷೇತ್ರದಲ್ಲಿ ಮೊದಲ ಗೆಲುವು ಆಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+