ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿರಾ ಕ್ಷೇತ್ರದ ಟಿಕೆಟ್; ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

|
Google Oneindia Kannada News

ತುಮಕೂರು, ಅಕ್ಟೋಬರ್ 02 : ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಬಿಜೆಪಿಯಲ್ಲಿ ಭಿನ್ನಮತ ಉಂಟಾಗಿದೆ. ನವೆಂಬರ್ 3ರಂದು ಮತದಾನ ನಡೆಯಲಿದ್ದು, ಪಕ್ಷದ ಅಭ್ಯರ್ಥಿ ಯಾರು? ಎಂಬುದು ಇನ್ನೂ ಘೋಷಣೆಯಾಗಿಲ್ಲ.

ಹೊರಗಿನಿಂದ ಬಂದವರನ್ನು ಅಭ್ಯರ್ಥಿಯನ್ನಾಗಿ ಮಾಡಿದರೆ ನಾವು ಕೆಲಸ ಮಾಡಲ್ಲ ಎಂಬುದು ಸ್ಥಳೀಯ ನಾಯಕರ ಎಚ್ಚರಿಕೆಯಾಗಿದೆ. 2013, 2018ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ 3ನೇ ಸ್ಥಾನ ಪಡೆದಿದ್ದರು.

ಶಿರಾ ಉಪ ಚುನಾವಣೆ; ಬಿಜೆಪಿ ಟಿಕೆಟ್‌ಗೆ 8ಕ್ಕೂ ಅಧಿಕ ಆಕಾಂಕ್ಷಿಗಳು ಶಿರಾ ಉಪ ಚುನಾವಣೆ; ಬಿಜೆಪಿ ಟಿಕೆಟ್‌ಗೆ 8ಕ್ಕೂ ಅಧಿಕ ಆಕಾಂಕ್ಷಿಗಳು

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿ ಇರುವ ಕಾರಣಕ್ಕೆ ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಬಹುದು ಎಂಬ ಲೆಕ್ಕಾಚಾರವಿದೆ. ಪಕ್ಷ ಈಗಾಗಲೇ ಕ್ಷೇತ್ರದಲ್ಲಿ ಬೂತ್ ಮಟ್ಟದ ಸಭೆಗಳನ್ನು ಮಾಡುವ ಮೂಲಕ ಉಪ ಚುನಾವಣೆ ಪ್ರಚಾರ ಕೈಗೊಂಡಿದೆ.

ಶಿರಾ, ಆರ್‌ಆರ್‌ ನಗರ ಉಪ ಚುನಾವಣೆಗೆ ದಿನಾಂಕ ಪ್ರಕಟ!ಶಿರಾ, ಆರ್‌ಆರ್‌ ನಗರ ಉಪ ಚುನಾವಣೆಗೆ ದಿನಾಂಕ ಪ್ರಕಟ!

ಕ್ಷೇತ್ರದ ಶಾಸಕರಾಗಿದ್ದ ಬಿ. ಸತ್ಯನಾರಾಯಣ ಅವರ ನಿಧನದಿಂದಾಗಿ ಉಪ ಚುನಾವಣೆ ಎದುರಾಗಿದೆ. ಕಾಂಗ್ರೆಸ್‌ನಿಂದ ಮಾಜಿ ಸಚಿವ ಟಿ. ಬಿ. ಜಯಚಂದ್ರ ಅಭ್ಯರ್ಥಿ. ಜೆಡಿಎಸ್‌ ಸಹ ಇನ್ನೂ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ.

ಶಿರಾ ಉಪ ಚುನಾವಣೆ ಗೆಲ್ಲಲು ಬಿಜೆಪಿ ಹೊಸ ಕಾರ್ಯತಂತ್ರ! ಶಿರಾ ಉಪ ಚುನಾವಣೆ ಗೆಲ್ಲಲು ಬಿಜೆಪಿ ಹೊಸ ಕಾರ್ಯತಂತ್ರ!

ಹೊರಗಿನ ಅಭ್ಯರ್ಥಿ ಬೇಡ

ಹೊರಗಿನ ಅಭ್ಯರ್ಥಿ ಬೇಡ

ಶಿರಾ ಕ್ಷೇತ್ರದ ಉಪ ಚುನಾವಣೆಗೆ ಬಿ. ಕೆ. ಮಂಜುನಾಥ್ ಆಕಾಂಕ್ಷಿಯಾಗಿದ್ದಾರೆ. 2013ರ ಚುನಾವಣೆಯಲ್ಲಿ ಅವರು ಕಣಕ್ಕಿಳಿದು 18,884 ಮತಗಳನ್ನು ಪಡೆದು ಕಾಂಗ್ರೆಸ್‌ನ ಟಿ. ಬಿ. ಜಯಚಂದ್ರ ವಿರುದ್ಧ ಸೋತಿದ್ದರು. ಆದರೆ, 2018ರ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ. ಎಸ್. ಆರ್. ಗೌಡ ಅಭ್ಯರ್ಥಿಯಾಗಿದ್ದರು. 16,959 ಮತಗಳನ್ನು ಪಡದು 3ನೇ ಸ್ಥಾನ ಪಡೆದಿದ್ದರು.

ಟಿಕೆಟ್ ಕೈ ತಪ್ಪುವ ಭೀತಿ

ಟಿಕೆಟ್ ಕೈ ತಪ್ಪುವ ಭೀತಿ

ಜೆಡಿಎಸ್‌ನಲ್ಲಿರುವ ಡಾ. ರಾಜೇಶ್ ಗೌಡರನ್ನು ಪಕ್ಷಕ್ಕೆ ಕರೆತಂದು ಟಿಕೆಟ್ ಕೊಡಲು ಬಿಜೆಪಿ ಬಯಸಿದೆ ಎಂಬ ಸುದ್ದಿ ಹಬ್ಬಿದೆ. ಇದರಿಂದಾಗಿ ಬಿ. ಕೆ. ಮಂಜುನಾಥ್‌ಗೆ ಟಿಕೆಟ್ ಕೈ ತಪ್ಪುವ ಭೀತಿ ಎದುರಾಗಿದೆ. ಆದ್ದರಿಂದ, ಬೇರೆ ಪಕ್ಷದ ಅಭ್ಯರ್ಥಿಗೆ ಟಿಕೆಟ್ ಕೊಟ್ಟರೆ ನಮ್ಮ ವಿರೋಧವಿದೆ. ಹೊರಗಿನಿಂದ ಬಂದವರಿಗೆ ಟಿಕೆಟ್ ಕೊಟ್ಟರೆ ನಾವು ಕೆಲಸ ಮಾಡಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಜಾತಿ ಲೆಕ್ಕಾಚಾರ ಮುಂದಿಟ್ಟ ನಾಯಕರು

ಜಾತಿ ಲೆಕ್ಕಾಚಾರ ಮುಂದಿಟ್ಟ ನಾಯಕರು

ಒಬಿಸಿ ಪರಿಗಣಿಸಿ ಟಿಕೆಟ್ ನೀಡುವುದಾದರೆ ನನಗೆ ಕೊಡಿ. ಜಾತಿ ಲೆಕ್ಕಾಚಾರದ ಮೇಲೆ ಕೊಡವುದಾದರೆ ಎಸ್. ಆರ್. ಗೌಡಗೆ ಟಿಕೆಟ್ ಕೊಡಿ. ಹೊರಗಿನವರಿಗೆ ಟಿಕೆಟ್ ಕೊಡುವುದು ಬೇಡ. ಟಿಕೆಟ್ ಕೊಟ್ಟರೆ ನಾವು ಬೇರೆ ಆಲೋಚನೆ ಮಾಡಬೇಕಾಗುತ್ತದೆ ಎಂದು ಬಿಜೆಪಿ ನಾಯಕರಿಗೆ ಸ್ಪಷ್ಟ ಸಂದೇಶವನ್ನು ರವಾನೆ ಮಾಡಿದ್ದಾರೆ.

ಉಸ್ತುವಾರಿಗಳ ನೇಮಕ

ಉಸ್ತುವಾರಿಗಳ ನೇಮಕ

ಶಿರಾ ಉಪ ಚುನಾವಣೆ ಬಗ್ಗೆ ಚರ್ಚಿಸಲು ಬೆಂಗಳೂರಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಗುರುವಾರ ನಡೆಯಿತು. ಶಿರಾ ಕ್ಷೇತ್ರಕ್ಕೆ ಚುನಾವಣೆ ಉಸ್ತುವಾರಿಗಳಾಗಿ ಗೋವಿಂದ ಕಾರಜೋಳ, ಡಾ. ಅಶ್ವತ್ಥ ನಾರಾಯಣ, ಎನ್. ರವಿ ಕುಮಾರ್, ಬಿ. ವೈ. ವಿಜಯೇಂದ್ರ, ಪಿ. ಸಿ. ಮೋಹನ್, ಎ. ನಾರಾಯಣಸ್ವಾಮಿ, ಪೂರ್ಣಿಮಾ ಶ್ರೀನಿವಾಸ್, ತಿಪ್ಪೇಸ್ವಾಮಿ ಅವರನ್ನು ನೇಮಿಸಲಾಗಿದೆ.

English summary
Tumakuru district Sira seat by election will be held on November 3, 2020. BJP leaders demand for ticket for local candidates.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X