ಶಿರಾ ಉಪ ಚುನಾವಣೆ; ಶುಕ್ರವಾರ ಯಡಿಯೂರಪ್ಪ ಪ್ರಚಾರ

ತುಮಕೂರು, ಅಕ್ಟೋಬರ್ 28: ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನವೆಂಬರ್ 3ರಂದು ನಡೆಯಲಿದೆ. ವಿವಿಧ ಪಕ್ಷಗಳು ಚುನಾವಣಾ ಪ್ರಚಾರವನ್ನು ಬಿರುಸಿನಿಂದ ನಡೆಸುತ್ತಿವೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಶುಕ್ರವಾರ ಪ್ರಚಾರ ನಡೆಸಲಿದ್ದಾರೆ.

ನವೆಂಬರ್ 3ರಂದು ಶಿರಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಯಡಿಯೂರಪ್ಪ ಪ್ರಚಾರ ಕಣದಿಂದ ದೂರ ಉಳಿದಿದ್ದರು. ಈಗ ಎರಡು ದಿನಗಳ ಕಾಲ ಉಪ ಚುನಾವಣೆ ಪ್ರಚಾರ ನಡೆಸಲು ತೀರ್ಮಾನಿಸಿದ್ದಾರೆ.

ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ತುಮಕೂರು ಜಿಲ್ಲೆಯ ಶಿರಾದಲ್ಲಿ ಒಂದು ದಿನದ ಕಾಲ ಪ್ರಚಾರ ಮುಖ್ಯಮಂತ್ರಿಗಳು ಪ್ರಚಾರ ನಡೆಸಲಿದ್ದಾರೆ. ಅಕ್ಟೋಬರ್ 30ರಂದು ಶಿರಾದಲ್ಲಿ ರೋಡ್ ಶೋ ನಡೆಸುವ ಮೂಲಕ ಅವರು ಪಕ್ಷದ ಅಭ್ಯರ್ಥಿ ಡಾ. ರಾಜೇಶ್ ಗೌಡ ಪರವಾಗಿ ಮತಯಾಚನೆ ಮಾಡಲಿದ್ದಾರೆ.

Sira By Elections CM Yediyurappa Campaign On October 30

ಶುಕ್ರವಾರ ಬೆಳಗ್ಗೆ 11 ಗಂಟೆಗೆ ಶಿರಾ ತಾಲೂಕಿನ ಮದಲೂರು ಎಂಬಲ್ಲಿ ಯಡಿಯೂರಪ್ಪ ಪ್ರಚಾರವನ್ನು ನಡೆಸಲಿದ್ದಾರೆ. ಅಲ್ಲಿಂದ ಶಿರಾ ಟೌನ್‌ಗೆ ತೆರಳಿದ್ದು, ಅಲ್ಲಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ರಸ್ತೆ ಮೂಲಕ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಶಿರಾ ಕ್ಷೇತ್ರದಲ್ಲಿ ಕಳೆದ 3 ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಮೂರನೇ ಸ್ಥಾನ ಪಡೆದಿದ್ದಾರೆ. 25 ಸಾವಿರ ಮತಗಳನ್ನು ಪಡೆಯಲು ಸಹ ವಿಫಲರಾಗಿದ್ದಾರೆ. ಆದ್ದರಿಂದ, ಕ್ಷೇತ್ರದಲ್ಲಿ ಬಿಜೆಪಿ ಉಪ ಚುನಾವಣೆ ಪ್ರಚಾರವನ್ನು ಬಿರುಸಿನಿಂದ ನಡೆಸುತ್ತಿದೆ.

ಬಿಜೆಪಿ ರಾಜ್ಯ ಉಪಾಧ್ಯಕ್ಷ, ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ ಅವರು ಕ್ಷೇತ್ರದಲ್ಲಿಯೇ ವಾಸ್ತವ್ಯ ಹೂಡಿದ್ದು, ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರದಲ್ಲಿ ತೊಡಗಿದ್ದಾರೆ. ಬಹಿರಂಗ ಪ್ರಚಾರಕ್ಕೆ ಭಾನುವಾರ ತೆರೆ ಬೀಳಲಿದ್ದು, ಅದಕ್ಕೂ ಮೊದಲು ಯಡಿಯೂರಪ್ಪ ಒಂದು ದಿನ ಪ್ರಚಾರ ಮಾಡಲಿದ್ದಾರೆ.

ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಟಿ. ಬಿ. ಜಯಚಂದ್ರ, ಜೆಡಿಎಸ್‌ನಿಂದ ಅಮ್ಮಾಜಮ್ಮ ಅಭ್ಯರ್ಥಿಗಳು. 2013ರಲ್ಲಿ ಟಿ. ಬಿ. ಜಯಚಂದ್ರ ಗೆಲುವು ಸಾಧಿಸಿದ್ದರು. 2018ರಲ್ಲಿ ಜೆಡಿಎಸ್‌ನ ಬಿ. ಸತ್ಯನಾರಾಯಣ ಗೆದ್ದಿದ್ದರು. ಬಿ. ಸತ್ಯನಾರಾಯಣ ಅವರ ಅಕಾಲಿಕ ನಿಧನದಿಂದಾಗಿ ಉಪ ಚುನಾವಣೆ ಎದುರಾಗಿದೆ.

ಶಿರಾ ಕ್ಷೇತ್ರದಲ್ಲಿ ಗೆಲ್ಲುವುದನ್ನು ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ನವೆಂಬರ್ 3ರಂದು ಮತದಾನ ನಡೆಯಲಿದ್ದು, ನವೆಂಬರ್ 10ರಂದು ಫಲಿತಾಂಶ ಪ್ರಕಟವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+