'ಮತಾಂತರ ತಪ್ಪಲ್ಲ ಅಂದರೆ ಮರು ಮತಾಂತರ ತಪ್ಪೇ?'
ತುಮಕೂರು, ಜ. 12 : ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದ 'ಘರ್ ವಾಪಸಿ' ಕಾರ್ಯಕ್ರಮವನ್ನು ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಸಮರ್ಥಿಸಿಕೊಂಡಿದ್ದಾರೆ. 'ಮತಾಂತರ ತಪ್ಪಲ್ಲ ಅನ್ನುವುದಾದದರೆ ಮರು ಮತಾಂತರ ಹೇಗೆ ತಪ್ಪಾಗುತ್ತದೆ?' ಎಂದು ಅವರು ಪಶ್ನಿಸಿದ್ದಾರೆ.
ತುಮಕೂರಿನಲ್ಲಿ ಹೊಯ್ಸಳ ಕರ್ನಾಟಕ ಸಂಘದ ವಾರ್ಷಿಕೋತ್ಸವದಲ್ಲಿ ಭಾನುವಾರ ಪಾಲ್ಗೊಂಡಿದ್ದ ಎಸ್.ಎಲ್.ಭೈರಪ್ಪ ಅವರು ಕಾರ್ಯಕ್ರಮದ ನಂತರ ಮಾಧ್ಯಮಗಳೊಂದಿಗೆ ಹಲವಾರು ವಿಚಾರಗಳ ಬಗ್ಗೆ ಮಾತನಾಡಿದರು.

ಮರು ಮತಾಂತರ : 'ಘರ್ ವಾಪಸಿ' ಕಾರ್ಯಕ್ರಮದ ಬಗ್ಗೆ ಮಾತನಾಡಿದ ಭೈರಪ್ಪ ಅವರು, 'ಆಸೆ, ಆಮಿಷ ತೋರಿಸಿ ಮತಾಂತರ ಮಾಡುವುದು ತಪ್ಪು. ಆದರೆ, ಯಾವುದೇ ಮತದ ನಂಬಿಕೆಗಳನ್ನು ಒಪ್ಪಿ, ಅದಕ್ಕೆ ಸೇರ್ಪಡೆಯಾಗುವುದು ತಪ್ಪಲ್ಲ ಎಂದು ಅಭಿಪ್ರಾಯಪಟ್ಟರು. [ಭೈರಪ್ಪಗೆ ರಾಷ್ಟ್ರೀಯ ಪ್ರೊಫೆಸರ್ ಗೌರವ]
ಪ್ರತಿಭಟನೆಯಿಂದ ಪ್ರಯೋಜನವಿಲ್ಲ : ಜಾತಿ ವ್ಯವಸ್ಥೆ ಬಗ್ಗೆ ಮಾತನಾಡಿದ ಎಸ್.ಎಲ್.ಭೈರಪ್ಪ ಅವರು, 'ಜಾತಿ ಹೋಗಬೇಕೆಂದು ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಪ್ರತಿಭಟನೆ ಮಾಡುವುದರಿಂದ ಪ್ರಯೋಜನವಿಲ್ಲ. ಶೇ 15 ರಷ್ಟು ಮಂದಿ ಅಂತರ್ಜಾತಿ ವಿವಾಹವಾದರೆ ಕ್ರಮೇಣ ಜಾತಿ ನಾಶವಾಗಲಿದೆ' ಎಂದು ಹೇಳಿದರು. [ಘರ್ ವಾಪಸಿ ಕರೀನಾ ಕಪೂರ್ ಚಿತ್ರ : ಸೈಫ್ ಗರಂ]
ಸಾಹಿತ್ಯ ಸಮ್ಮೇಳನಗಳು : ಸಾಹಿತ್ಯ ಸಮ್ಮೇಳನಗಳ ವೇದಿಕೆಗಳ ಮೇಲೆ ರಾಜಕಾರಣಿಗಳಿಗೆ ಅವಕಾಶ ನೀಡಬಾರದು ಎಂದು ಹೇಳಿದ ಭೈರಪ್ಪ ಅವರು ಮಹಾರಾಷ್ಟ್ರದ ಉದಾಹರಣೆ ನೀಡಿದರು. ಮಹಾರಾಷ್ಟ್ರದಲ್ಲಿ ನಡೆದ ಸಮ್ಮೇಳನದಲ್ಲಿ ರಾಜಕಾರಣಿಗಳಿಗೆ ವೇದಿಕೆ ಮೇಲೆ ಅವಕಾಶ ಇರುವುದಿಲ್ಲ. ಒಂದು ವೇಳೆ ಇದ್ದರೂ ಅಲ್ಲಿ ಭಾಷಣ ಮಾಡುವುದಿಲ್ಲ ಎಂದು ತಿಳಿಸಿದರು. [ಅರಿವಿನ ಪರಿಧಿಯ ಹೊರಗೆ ಉಡಾಯಿಸುವ ವಿಮಾನ 'ಯಾನ']
ಊಟ-ತಿಂಡಿ ದೊಡ್ಡ ವಿಚಾರವಲ್ಲ : 'ನೆರೆಯ ರಾಜ್ಯಗಳಲ್ಲಿ ಸಾಹಿತ್ಯ ಸಮ್ಮೇಳನಗಳಲ್ಲಿ ಅತಿಥಿ ಸಾಹಿತಿಗಳನ್ನು ತುಂಬ ಚೆನ್ನಾಗಿ ನೋಡಿಕೊಳ್ಳುತ್ತಾರೆ. ಸಮ್ಮಳೇನದಲ್ಲಿ ಊಟ-ತಿಂಡಿ ದೊಡ್ಡ ವಿಚಾರ ಆಗಿರುವುದಿಲ್ಲ'. 'ನಮ್ಮ ರಾಜ್ಯದಲ್ಲಿ ಸಮ್ಮೇಳನಕ್ಕೆ ಒಂದು ತಿಂಗಳ ಹಿಂದೆಯೇ ಅಲ್ಲಿಂದ ಚಪಾತಿ, ರೊಟ್ಟಿ ಬಂತು ಎಂದು ಸುದ್ದಿ ಬರಲು ಆರಂಭವಾಗುತ್ತದೆ' ಇದು ನಿಲ್ಲಬೇಕು ಎಂದು ಅಭಿಪ್ರಾಯಪಟ್ಟರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications