ಇದೀಗ ಬಂದ ಸುದ್ದಿ: ಚಿಂತೆ ಬೇಡ, ಶ್ರೀಗಳು ಆರೋಗ್ಯವಾಗಿದ್ದಾರೆ
ತುಮಕೂರು, ಜನವರಿ 21: ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಆರೋಗ್ಯವಾಗಿದ್ದಾರೆ. ಭಕ್ತರು ಚಿಂತೆಪಡುವ ಅಗತ್ಯವಿಲ್ಲ ಎಂದು ಸಿದ್ದಗಂಗಾ ಮಠದ ಆಡಳಿತ ಮಂಡಳಿ ತನ್ನ ಫೇಸ್ ಬುಕ್ ಪುಟದಲ್ಲಿ ಹೇಳಿಕೊಂಡಿದೆ.
"ಶ್ರೀಗಳು ಆರೋಗ್ಯವಾಗಿದ್ದಾರೆ ಭಕ್ತರಿಗೆ ಎಂದಿನಂತೆ ದರ್ಶನಕ್ಕೆ ಅವಕಾಶವಿದೆ" ಎಂದು ಶ್ರೀ ಸಿದ್ದಗಂಗಾ ಮಠ ತನ್ನ ಪೇಸ್ ಬುಕ್ ಪುಟದಲ್ಲಿ ಹೇಳಿಕೊಂಡಿದೆ.
ಆದರೆ ಶ್ರೀಗಳ ಆರೋಗ್ಯ ಗಂಭೀರವಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಮಠದ ಸುತ್ತ ಮುತ್ತ ಮಾತ್ರವಲ್ಲದೆ ಇಡೀ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಮಠಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದರಿಂದ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದ್ದು, ಮಠದಲ್ಲೇ ಪೊಲೀಸ್ ಕಂಟ್ರೋಲ್ ರೂಂ ತಯಾರಿಸಲಾಗಿದೆ.
ವಿವಿಐಪಿಗಳು, ಸಾಕಷ್ಟು ಭಕ್ತರು ಮಠಕ್ಕೆ ಆಗಮಿಸುತ್ತಿರುವುದರಿಂದ ಆತಂಕ ಮತ್ತಷ್ಟು ಹೆಚ್ಚಿತ್ತು.












Click it and Unblock the Notifications