ತುಮಕೂರಿನಲ್ಲಿ ಪ್ರಸಾದ ಸೇವಿಸಿ ವಾಂತಿ, ಭೇದಿ: ಮೂರು ಜನ ಸಾವು!

ತುಮಕೂರು ಆಗಸ್ಟ್ 27: ಶ್ರಾವಣ ಶನಿವಾರದ ಹಿನ್ನೆಲೆ ದೇವಸ್ಥಾನದಲ್ಲಿ ಪ್ರಸಾದ ಸೇವಿಸಿ ವಾಂತಿ ಭೇದಿಯಿಂದ ಮೂವರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಶನಿವಾರ ಮಧುಗಿರಿ ತಾಲೂಕಿನ ಬುಳಸಂದ್ರ ಗ್ರಾಮದಲ್ಲಿ ದೇವರ ಉತ್ಸವ ಆಯೋಜಿಸಲಾಗಿತ್ತು. ಇದರಲ್ಲಿ ಗ್ರಾಮಸ್ಥರೆಲ್ಲರೂ ಪಾಲ್ಗೊಳ್ಳುವುದರಿಂದ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.

ಈ ಪ್ರಸಾದ ಸೇವಿಸಿದ ಹನ್ನೊಂದಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ ಮೂರು ಜನರಿಗೆ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ. ಗ್ರಾಮದ 40 ವರ್ಷದ ತಿಪ್ಪಮ್ಮ, 85 ವರ್ಷದ ತಿಮ್ಮಕ್ಕ, 75 ವರ್ಷದ ಗಿರಿಯಮ್ಮ ಮೃತ ದುರ್ದೈವಿಗಳಾಗಿದ್ದಾರೆ.

Three people died due to vomiting and dysentery after eating prasad in Tumkuru

ಶ್ರಾವಣ ಶನಿವಾರ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಮುತ್ತರಾಯಸ್ವಾಮಿ, ಕರಿಯಮ್ಮ ಭೂತಪ್ಪ ದೇವರ ಆರತಿ ಉತ್ಸವ ಆಯೋಜಿಸಲಾಗಿತ್ತು. ಈ ಉತ್ಸವದಲ್ಲಿ ಭಾಗಿಯಾಗಿದ್ದವರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಪ್ರಸಾದ ಸೇವಿಸಿದ ಹನ್ನೊದಕ್ಕೂ ಹೆಚ್ಚು ಜನರಿಗೆ ಕಳೆದ ರಾತ್ರಿ ವಾಂತಿ, ಭೇದಿ ಕಾಣಿಸಿಕೊಂಡಿದೆ.

ಇದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೂವರು ಸಾವನ್ನಪ್ಪಿದ್ದಾರೆ. ದೇವಸ್ಥಾನದಲ್ಲಿ ಸೇವಿಸಿದ ಪ್ರಸಾದದಿಂದಲೇ ಮೂವರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಗ್ರಾಮಕ್ಕೆ ಸದ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆರೋಗ್ಯ ಅಧಿಕಾರಿಗಳು ಪರಿಶೀಲನೆ ನಡೆಸಿ ಮೇಲ್ನೋಟಕ್ಕೆ ಇದು ಫುಡ್ ಪಾಯಿಸನ್ ನಿಂದಾಗಿ ಎಂದಿದ್ದಾರೆ. ಪ್ರಸಾದದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಸಿಲಾಗಿದೆ. ಅದರ ವರದಿಗಾಗಿ ಬರಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+