ಕಾಂಗ್ರೆಸ್ ಶಾಸಕನಿಂದ ತಮ್ಮದೇ ಪಕ್ಷದ ಜನಪ್ರತಿನಿಧಿಗೆ ಬೆದರಿಕೆ
ತುಮಕೂರು, ಏಪ್ರಿಲ್ 03: ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ತಮ್ಮದೇ ಪಕ್ಷದ ಜಿಲ್ಲಾ ಪಂಚಾಯತ್ ಸದಸ್ಯನಿಗೆ ಫೋನ್ ಮೂಲಕ ಧಮ್ಕಿ ಹಾಕಿರುವ ಆಡಿಯೋ ವೈರಲ್ ಆಗಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ಕಾಂಗ್ರೆಸ್ ಪಕ್ಷದ ಹೊನ್ವಳ್ಳಿ ಜಿಲ್ಲಾ ಪಂಚಾಯತ್ ಸದಸ್ಯ ನಾರಾಯಣ್ ಅವರಿಗೆ ಕರೆ ಮಾಡಿರುವ ಶಾಸಕ ಷಡಕ್ಷರಿ ಅವರು ಅವಾಚ್ಯ ಶಬ್ದಗಳನ್ನು ಬಳಸಿ ಬೈದಿರುವುದಲ್ಲದೆ ಹೊಡೆಸುವುದಾಗಿ, ನಾಲಿಗೆ ಕೀಳಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಶಾಸಕರು ಬೈದಿರುವುದು ರೆಕಾರ್ಡ್ ಆಗಿದ್ದು, ಈಗ ಅದು ಸಾಮಾಜಿಕ ಜಾಲತಾಣಗಳಲ್ಲಿ, ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ಶಾಸಕ ಷಡಕ್ಷರಿ ಅವರಿಗೆ ಈ ಬಾರಿ ಟಿಕೆಟ್ ದೊರಕುವುದಿಲ್ಲ ಎಂದು ನಾರಾಯಣಸ್ವಾಮಿ ಅಪಪ್ರಚಾರ ಮಾಡುತ್ತಿದ್ದಾರೆ ಎಂಬ ಸುದ್ದಿ ಕೇಳಿ ಸಿಟ್ಟಿಗೆದ್ದಿದ್ದ ಷಡಕ್ಷರಿ ಅವರು ನಾರಾಯಣಸ್ವಾಮಿ ಅವರಿಗೆ ಕರೆ ಮಾಡಿದ್ದಾರೆ, ಅತ್ತಲಿನಿಂದ ಅವರ ಸಹಾಯಕನೊಬ್ಬ ಫೋನ್ ರಿಸೀವ್ ಮಾಡಿ ನಾರಾಯಣಸ್ವಾಮಿ ಇಲ್ಲ ಎಂದಿದ್ದಾರೆ.

ಆದರೂ ಬಿಡದೆ 'ನನ್ನ ಬಗ್ಗೆ ಎಲ್ಲಾದರೂ ಮಾತನಾಡಿದರೆ ನಾಲಿಗೆ ಕೀಳಿಸಿ ಬಿಡುತ್ತೇನೆ ಎಂದು ಹೇಳು ಅವನಿಗೆ, ಬೆಂಬಲಿಗರಿಗೆ ಹೇಳಿ ಹೊಡೆಸುತ್ತೇನೆ, ಪಾರ್ಟಿ ಮೀಟಿಂಗ್‌ನಲ್ಲಿ ಹೇಳುತ್ತೇನೆ, ನನ್ನ ಹೆಸರು ಎತ್ತಿದರೆ ಅವನಿಗೆ ಹೊಡೆಯಿರಿ' ಎಂದು ಫೋನಿನಲ್ಲಿ ಗುಟುರು ಹಾಕಿದ್ದಾರೆ.
'ಮಗನಂತೆ ಇರುತ್ತೇನೆ ಎಂದು ಆಣೆ ಮಾಡಿದ್ದ ಅವನು ಇಂದು ನನ್ನ ವಿರುದ್ಧವೇ ಮಾತನಾಡುತ್ತಿದ್ದಾನೆ, ನನ್ನ ವಿರುದ್ಧ ಷಡ್ಯಂತ್ರ ಮಾಡಿದವರೆಲ್ಲಾ ಇಂದು ಸತ್ತು ಹೋಗಿದ್ದಾರೆ, ನನ್ನ ಇನ್ನೊಂದು ಮುಖ ನೋಡಿಲ್ಲ ನೀವು' ಎಂದು ಷಡಕ್ಷರಿ ಅವರು ಫುಲ್ ಆವಾಜ್ ಹಾಕಿದ್ದಾರೆ.
ಶಾಸಕರ ಧಮ್ಕಿಯಿಂದ ಬೇಸರಗೊಂಡಿರುವ ನಾರಾಯಣಸ್ವಾಮಿ ಅವರು ಕೆಪಿಸಿಸಿಗೆ ಷಡಕ್ಷರಿ ವಿರುದ್ಧ ದೂರು ನೀಡಲು ನಿರ್ಧರಿಸಿದ್ದಾರೆ.
-
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ












Click it and Unblock the Notifications