ತಿಪಟೂರು: ಲಂಚಕೋರ ಕಾನೂನು ಸಲಹೆಗಾರ ಎಸಿಬಿ ಬಲೆಗೆ
ತಿಪಟೂರು, ಜುಲೈ 10: ಗ್ರಾಮ ಪಂಚಾಯಿತಿಯೊಂದರ ವ್ಯಾಪ್ತಿಯ ಭೂ ಪರಿವರ್ತನೆ, ಖಾತೆ ಹಂಚಿಕೆ ರದ್ದು ಕುರಿತಂತೆ ತಾಲ್ಲೂಕು ಪಂಚಾಯತ್ನ ಕಾನೂನು ತಜ್ಞರೊಬ್ಬರು ಸಲಹೆ ನೀಡಲು 2 ಲಕ್ಷ ರು ಲಂಚ ನೀಡುವಂತೆ ಬೇಡಿಕೆ ಒಡ್ಡಿದ್ದ ಕಾನೂನು ಸಲಹೆಗಾರರನ್ನು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.
ತುಮಕೂರು ನಗರ, ಕ್ಯಾತ್ಸಂದ್ರ ನಿವಾಸಿಯೊಬ್ಬರು ತಿಪಟೂರಿನ ಹುಚ್ಚಗೊಂಡನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ 2 ಎಕರೆ ಜಮೀನನ್ನು ಭೂಪರಿವರ್ತನೆ ಮಾಡಿಸಿ, ಒಟ್ಟು 43 ನಿವೇಶನಗಳನ್ನು ವಿಂಗಡಿಸಿ, ನಿವೇಶನಗಳಿಗೆ ಗ್ರಾಮ ಪಂಚಾಯ್ತಿ ಖಾತೆಯನ್ನು ಹೊಂದಿರುತ್ತಾರೆ. ಸದರಿ ನಿವೇಶನಗಳಿಗೆ ಸಂಬಂಧಪಟ್ಟಂತೆ ಖಾತೆಗಳನ್ನು ರದ್ದುಪಡಿಸುವಂತೆ ತಕರಾರು ಅರ್ಜಿಯು ತಾಲ್ಲೂಕು ಪಂಚಾಯ್ತಿಗೆ ಸ್ವೀಕೃತವಾಗಿರುತ್ತದೆ.

ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಈ ಬಗ್ಗೆ ದೂರುದಾರರಿಂದ ದಾಖಲೆಗಳನ್ನು ಪಡೆದು, ತಾಲ್ಲೂಕು ಪಂಚಾಯತ್ನ ಕಾನೂನು ತಜ್ಞರ ಅಭಿಪ್ರಾಯಕ್ಕಾಗಿ ಕಳುಹಿಸಿಕೊಟ್ಟಿರುತ್ತಾರೆ. ತಿಪಟೂರಿನ ತಾಲೂಕು ಪಂಚಾಯತ್ ಕಾನೂನು ಸಲಹೆಗಾರರಾದ ಬಸಪ್ಪ ಎಂಬುವರು ಕಾನೂನು ಅಭಿಪ್ರಾಯ ವರದಿಯನ್ನು ನೀಡಲು ರೂ.2,00,000/- ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ.
ಬಸಪ್ಪ ಅವರು ಮಂಗಳವಾರ(ಜುಲೈ 09)ದಂದು ದೂರುದಾರರಿಂದ ರೂ.1,00,000/- ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ತುಮಕೂರು ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಿಗೆ ಸಿಕ್ಕಿಬಿದ್ದಿರುತ್ತಾರೆ. ಇವರನ್ನು ದಸ್ತಗಿರಿ ಮಾಡಿ, ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದೆ, ತನಿಖೆ ಮುಂದುವರೆದಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications