• search
  • Live TV
ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷರ ರಾಜೀನಾಮೆ

|
Google Oneindia Kannada News

ತುಮಕೂರು, ಸೆಪ್ಟೆಂಬರ್ 27: ಮಾಜಿ ಶಾಸಕ, ಬಿಜೆಪಿ ನಾಯಕ ಬಿ. ಸುರೇಶ್ ಗೌಡ ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜನರು ತೋರಿಸಿದ ಪ್ರೀತಿ, ಕೊಟ್ಟ ಸಹಕಾರಕ್ಕೆ ಧನ್ಯವಾದ ಸಲ್ಲಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.

ಸೋಮವಾರ ಬಿ. ಸುರೇಶ್ ಗೌಡ ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾತ್ರಿ ಈ ಕುರಿತು ಅವರು ಫೇಸ್‌ಬುಕ್ ಪೋಸ್ಟ್‌ ಹಾಕಿದ್ದಾರೆ.

ಕೇರಳದಲ್ಲಿ ಬಿಜೆಪಿ ಅಧ್ಯಕ್ಷ ಸ್ಥಾನ ಬದಲು; ಸ್ಟಾರ್ ನಟನಿಗೆ ಮಣೆ? ಕೇರಳದಲ್ಲಿ ಬಿಜೆಪಿ ಅಧ್ಯಕ್ಷ ಸ್ಥಾನ ಬದಲು; ಸ್ಟಾರ್ ನಟನಿಗೆ ಮಣೆ?

'ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ. ಜಿಲ್ಲೆಯ ಜನರ ಸಹಕಾರಕ್ಕೆ ಧನ್ಯವಾದ ಪಕ್ಷದ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಾನು ಇಂದು ರಾಜೀನಾಮೆ ನೀಡಿದ್ದು, ಜಿಲ್ಲೆಯ ಜನರು ತೋರಿಸಿದ ಪ್ರೀತಿ, ಬೆಂಬಲಕ್ಕೆ ಅಭಾರಿಯಾಗಿದ್ದೇನೆ' ಎಂದು ಪೋಸ್ಟ್‌ನಲ್ಲಿ ಹೇಳಿದ್ದಾರೆ.

'ಒಂದೂವರೆ ವರ್ಷದ ಹಿಂದೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷನಾದ ಬಳಿಕ ಹಲವು ಸವಾಲುಗಳು ಎದುರಾದವು. ಅದರಲ್ಲಿ ಲೋಕಸಭಾ ಚುನಾವಣೆ ಜತೆಗೆ, ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯೂ ಒಂದಾಗಿತ್ತು. ಇದಕ್ಕೆಲ್ಲ ನನ್ನ ಗ್ರಾಮಾಂತರ ಕ್ಷೇತ್ರದ ಜನರ ಆರ್ಶೀವಾದ, ಕೊಟ್ಟ ಸಹಕಾರ, ಧೈರ್ಯವೇ ಕಾರಣ, ಈ ಸಂದರ್ಭದಲ್ಲಿ ನನ್ನ ಈ ಎಲ್ಲಾ ಜನರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ' ಎಂದು ಬಿ. ಸುರೇಶ್ ಗೌಡ ತಿಳಿಸಿದ್ದಾರೆ.

 ತುಮಕೂರು: 'ನಿನ್ ಯೋಗ್ಯತೆಗೆ ಬೆಂಕಿ ಹಾಕಾ'; ಪರಸ್ಪರ ಕಿತ್ತಾಡಿಕೊಂಡ ಸಂಸದ- ಶಾಸಕ ತುಮಕೂರು: 'ನಿನ್ ಯೋಗ್ಯತೆಗೆ ಬೆಂಕಿ ಹಾಕಾ'; ಪರಸ್ಪರ ಕಿತ್ತಾಡಿಕೊಂಡ ಸಂಸದ- ಶಾಸಕ

'ನಾನು ಎರಡು ಸಲ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕನಾಗಿ, ಎರಡು ಸಲ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷನಾಗಿ. ರಾಜ್ಯ ಘಟಕದ ಕಾರ್ಯದರ್ಶಿಯಾಗಿ ಯಶಸ್ವಿಯಾಗಲು, ನನ್ನ ಕ್ಷೇತ್ರದ ಜನರು ತೋರಿದ ಪ್ರೀತಿ, ಸಹಕಾರ, ಬೆಂಬಲ ಕಾರಣವಾಗಿತ್ತೇ ಹೊರತು ಬೇರೇನು ಅಲ್ಲ'

ತುಮಕೂರು-ಶಿವಮೊಗ್ಗ 4 ಪಥದ ರಸ್ತೆ ಕಾಮಗಾರಿಗೆ ಸಿಗಲಿದೆ ವೇಗ ತುಮಕೂರು-ಶಿವಮೊಗ್ಗ 4 ಪಥದ ರಸ್ತೆ ಕಾಮಗಾರಿಗೆ ಸಿಗಲಿದೆ ವೇಗ

'ಜಿಲ್ಲಾ ಘಟಕದ ಅಧ್ಯಕ್ಷನಾದ ಮೇಲೆ ಪಕ್ಷದ ಕೆಲಸಗಳ ಕಾರಣ ನನ್ನ ಕ್ಷೇತ್ರದ ಜನರೊಂದಿಗೆ ಹೆಚ್ಚು ಸಮಯ ಕಳೆಯಲಾಗುತ್ತಿಲ್ಲ ಎಂಬ ಕೊರಗು ಸದಾ ನನ್ನನ್ನು ಕಾಡುತ್ತಿತ್ತು, ಅವರ ಕಷ್ಟಸುಖಗಳಲ್ಲಿ ಭಾಗಿಯಾಗಲು ಹೆಚ್ಚು ಸಮಯವೇ ಸಿಗುತ್ತಿರಲಿಲ್ಲ. ಕೋವಿಡ್ ನಿಂದ ಆರ್ಥಿಕ ಹಿಂಜರಿತ, ನೀರಾವರಿ ಸಮಸ್ಯೆಯಿಂದ ಜನರು ಅನುಭವಿಸುತ್ತಿರುವ ಬವಣೆ, ಶಿಕ್ಷಣದ ಗುಣಮಟ್ಟದ ಕುಸಿತದಿಂದ ಕ್ಷೇತ್ರದ ಮಕ್ಕಳು ಅನುಭವಿಸುತ್ತಿರುವ ಯಾತನೆಯ ಹಿನ್ನೆಲೆಯಲ್ಲಿ ಅವರೊಂದಿಗೆ ಸದಾ ಸಮಯ ಇರಬೇಕೆಂದು ಮನಸ್ಸು ಹೇಳುತ್ತಿತ್ತು'

'ನನ್ನ ಕ್ಷೇತ್ರದ ಜನರೇ ನನಗೆ ಎಲ್ಲವೂ ಆಗಿರುವುದರಿಂದ ಅವರೊಂದಿಗೆ ಇರಲು ರಾಜೀನಾಮೆ ನಿರ್ಧಾರ ಮಾಡಿದೆ ಎಂಬುದನ್ನು ನನ್ನ ಕ್ಷೇತ್ರದ ಜನರಿಗೆ ಈ ಮೂಲಕ ತಿಳಿಸಲು ಬಯಸುತ್ತೇನೆ. ಜಿಲ್ಲಾ ಘಟಕದ ಅಧ್ಯಕ್ಷನಾಗಿದ್ದಾಗ ಜಿಲ್ಲೆಯ ಮೂಲೆಮೂಲೆಗಳಿಂದ ಎಲ್ಲಾ ಜಾತಿಗಳ, ಧರ್ಮಗಳ ಜನರು ನನಗೆ ತೋರಿಸಿದ ಪ್ರೀತಿ, ಕೊಟ್ಟ ಸಹಕಾರಕ್ಕೆ ಧನ್ಯವಾದವನ್ನು ಈ ಮೂಲಕ ಅರ್ಪಿಸುತ್ತಿದ್ದೇನೆ. ಇದೇ ರೀತಿಯ ಪ್ರೀತಿ, ಹಾರೈಕೆ, ಬೆಂಬಲ ಇನ್ನೂ ಮುಂದೆಯೂ ನೀಡುವಂತೆ ಈ ಮೂಲಕ ಕೇಳಿಕೊಳ್ಳುತ್ತೇನೆ' ಎಂದು ಫೇಸ್ ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

English summary
B. Suresh Gowda Bharatiya Janata Party (BJP) district president of Tumakuru resigned.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X