• search
ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಂಕಾಪುರ ಆಂಜನೇಯಸ್ವಾಮಿಗೆ ಕಲ್ಯಾಣೋತ್ಸವ, ಮಾನಸಿಕ ಸಮಸ್ಯೆಗೆ ಪರಿಹಾರ

By ಕೆ.ಜೆ. ಪ್ರಣವ ವಸಿಷ್ಠ, ಪಾವಗಡ
|

ಆಂಜನೇಯಸ್ವಾಮಿ ಬ್ರಹ್ಮಚಾರಿ ಅಲ್ಲವೇ? ಆದರೆ ತುಮಕೂರು ಜಿಲ್ಲೆ ಪಾವಗಡ ತಾಲೂಕು ನಲಿಗಾನಹಳ್ಳಿ ಬಳಿಯ ಸಂಕಾಪುರದ ಸುವರ್ಚಲಾ ಆಂಜನೇಯ ಸ್ವಾಮಿ ದೇಗುಲದಲ್ಲಿ ಪ್ರತಿ ಜ್ಯೇಷ್ಠ ಮಾಸದಲ್ಲಿ ಆಂಜನೇಯ ಸ್ವಾಮಿಗೆ ಕಲ್ಯಾಣೋತ್ಸವ ನಡೆಯುತ್ತದೆ.

500 ವರ್ಷಕ್ಕೂ ಮೀರಿದ ಇತಿಹಾಸವಿರುವ ದೇಗುಲದ ವಿಗ್ರಹವನ್ನು ವ್ಯಾಸ ಮಹರ್ಷಿಗಳು ಪ್ರತಿಷ್ಠಾಪಿಸಿದ್ದಾರೆ ಎಂಬುದು ನಂಬಿಕೆ. ಇಲ್ಲಿನ ಗುಂಡ್ಲಹಳ್ಳಿ ದೊಡ್ಡ ಕೆರೆಗೆ ಸಂಬಂಧಿಸಿದ ಶಾಸನವೂ ಕೆಲ ಐತಿಹಾಸಿಕ ಕುರುಹುಗಳನ್ನು ನೀಡುತ್ತದೆ.

ಕೇರಳ, ತಮಿಳುನಾಡು ಸೇರಿದಂತೆ ಹಲ ಪ್ರದೇಶಗಳಿಂದ ದೇಗುಲಕ್ಕೆ ಭಕ್ತರು ವಿವಿಧ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಇಲ್ಲಿಗೆ ಬರುತ್ತಾರೆ. ಸಾಕಷ್ಟು ಪ್ರಚಾರ ಪಡೆಯದಿದ್ದರೂ ದೇಗುಲದ ಬಗ್ಗೆ ತಿಳಿದಿರುವ ಭಕ್ತಾದಿಗಳು ಮಂಗಳವಾರ, ಶನಿವಾರ, ಹುಣ್ಣಿಮೆ, ಅಮಾವಾಸ್ಯೆ ಹಾಗೂ ವಿಶೇಷ ದಿನಗಳಂದು ಹೆಚ್ಚಿನ ಸಂಖ್ಯೆಯಲ್ಲಿ ದೇಗುಲಕ್ಕೆ ಬರುತ್ತಾರೆ.

95 ಕೋಟಿ ಸಂಗ್ರಹಿಸಿರುವ ಕುಕ್ಕೆ ಸುಬ್ರಹ್ಮಣ್ಯ ರಾಜ್ಯದ ಶ್ರೀಮಂತ ದೇಗುಲ

ಇಲ್ಲಿನ ಆಂಜನೇಯ ಸ್ವಾಮಿ ಹೆಸರೇ ಸುವರ್ಚಲಾ ಆಂಜನೇಯಸ್ವಾಮಿ. ಸುವರ್ಚಲಾ ದೇವಿ ಸೂರ್ಯ ಪುತ್ರಿ. ವಾಯು ಪುತ್ರ ಆಂಜನೇಯಸ್ವಾಮಿ. ಪರಾಶರ ಸಂಹಿತೆಯಲ್ಲಿ ಲೋಕ ಕಲ್ಯಾಣಕ್ಕಾಗಿ ಸುವರ್ಚಲಾ ದೇವಿ, ಆಂಜನೇಯಸ್ವಾಮಿ ಕಲ್ಯಾಣ ನಡೆಯುತ್ತದೆ. ವಿವಾಹವಾದರೂ ಆಂಜನೇಯಸ್ವಾಮಿ ಬ್ರಹ್ಮಚಾರಿಯಾಗಿಯೇ ಉಳಿಯುತ್ತಾರೆ.

ಪುರಾಣಗಳು, ಪರಾಶರ ಸಂಹಿತೆಯಲ್ಲಿನ ಉಲ್ಲೇಖದ ಪ್ರಕಾರ ಜ್ಯೇಷ್ಠ ಮಾಸದ ನವಮಿಯಂದು ಸುವರ್ಚಲಾ ದೇವಿ ಹಾಗೂ ಆಂಜನೇಯಸ್ವಾಮಿ ಕಲ್ಯಾಣೋತ್ಸವ ಭಕ್ತಿ- ಶ್ರದ್ಧೆಯಿಂದ ನಡೆಸಲಾಗುತ್ತದೆ.

ಸುವರ್ಚಲಾ- ಆಂಜನೇಯಸ್ವಾಮಿ ರಥೋತ್ಸವ

ಸುವರ್ಚಲಾ- ಆಂಜನೇಯಸ್ವಾಮಿ ರಥೋತ್ಸವ

ವೈಶಾಖ ಮಾಸದ ದಶಮಿಯಂದು ಪರಿವಾರ ರಾಮ, ಸುವರ್ಚಲಾ- ಆಂಜನೇಯಸ್ವಾಮಿ ರಥೋತ್ಸವ ನಡೆಯುತ್ತದೆ. ಉಳಿದಂತೆ ವಿಶೇಷ ದಿನಗಳಲ್ಲಿ ಪವಮಾನ, ಮನ್ಯುಸೂಕ್ತ ಹೋಮ, ಮೂಲ ಮಂತ್ರ ಇತ್ಯಾದಿ ಹೋಮ, ಹವನ, ವಿಶೇಷ ಪೂಜೆಗಳು ನಡೆಯುತ್ತವೆ. ಬೃಹತ್ ಗಾತ್ರದ ಮರ, ಗಿಡಗಳನ್ನೊಳಗೊಂಡ ಪ್ರಾಕೃತಿಕ ಸಂಪತ್ತು ದೇಗುಲದ ಸೊಬಗನ್ನು ಇಮ್ಮಡಿಗೊಳಿಸಿದೆ. ದೇಗುಲ ಪ್ರಾಂಗಣದಲ್ಲಿ ಸತ್ಯನಾರಾಯಣಸ್ವಾಮಿ, ಪರಿವಾರ ರಾಮ ದೇವರು, ಮಹಾಬಲೇಶ್ವರ, ಗಣಪತಿ, ದತ್ತಾತ್ರೇಯ, ಸುಬ್ರಹ್ಮಣ್ಯ, ನವಗ್ರಹ, ಶಾರಾದಾಂಬೆ, ಶಂಕರಾಚಾರ್ಯರು, ದೇವಿ ದೇಗುಲಗಳಿವೆ. ದೇಗುಲಕ್ಕೆ ಕಾಲಿಟ್ಟ ಕೂಡಲೇ ಹೊರ ಜಗತ್ತಿನ ಸುಃಖ- ದುಃಖಗಳ ನೆನಪು ಅಳಿಸಿ, ಭಕ್ತಿ ಭಾವ ಮೂಡುತ್ತದೆ. ಪ್ರದೇಶದಲ್ಲಿ ಸಿಗುವ ತಣ್ಣನೆಯ ಶುದ್ಧ ಗಾಳಿ, ಮರ-ಗಿಡಗಳನ್ನು ಹೊದ್ದಿರುವ ಹಸಿರು ಮನಸ್ಸನ್ನು ಪ್ರಫುಲ್ಲಗೊಳಿಸುತ್ತದೆ.

ಧರ್ಮಯ್ಯ ಅವರಿಗೆ ದೈವ ಪ್ರೇರಣೆ

ಧರ್ಮಯ್ಯ ಅವರಿಗೆ ದೈವ ಪ್ರೇರಣೆ

ದಶಕಗಳ ಹಿಂದೆ ದೇಗುಲವಿದ್ದ ಪ್ರದೇಶವು ಸೀಮೆ ಜಾಲಿಯಿಂದ ಆವೃತಗೊಂಡಿತ್ತು. ದೇಗುಲದ ಧರ್ಮಕರ್ತರಾದ ಧರ್ಮಯ್ಯ ಅವರಿಗೆ ಸೀಮೆ ಜಾಲಿಗಳ ನಡುವಲ್ಲಿ ಆಂಜನೇಯಸ್ವಾಮಿ ವಿಗ್ರಹ ಇರುವ ವಿಚಾರ ದೈವ ಪ್ರೇರಣೆಯಿಂದಲೇ ತಿಳಿಯಿತಂತೆ. ಆ ನಂತರ ಆಂಜನೇಯ ಸ್ವಾಮಿ ವಿಗ್ರಹವನ್ನು ಮಳೆ, ಬಿಸಿಲಿನಿಂದ ರಕ್ಷಿಸಲು ಗರಿಯ ಚಪ್ಪರ ಹಾಕಿಸಿ, ಮೂಲ ವಿಗ್ರಹಕ್ಕೆ ಮಂಟಪ ಕಟ್ಟಿಸಿ ಪೂಜೆ ಆರಂಭಿಸಲಾಯಿತು. ದೇಗುಲದ ಸಮೀಪದಲ್ಲಿಯೇ ಬಾವಿ ತೋಡಿಸಿ, ದೇವರಿಗೆ ಜಲಾಭಿಷೇಕಕ್ಕೆ ಏರ್ಪಾಡು ಮಾಡಲಾಯಿತು. ಕಾಲಾ ನಂತರ ದೇಗುಲ ಸಾಕಷ್ಟು ಅಭಿವೃದ್ಧಿಯಾಗಿದೆ.

ಮಾನಸಿಕ ಸಮಸ್ಯೆ ಇರುವವರಿಂದ ಭೇಟಿ

ಮಾನಸಿಕ ಸಮಸ್ಯೆ ಇರುವವರಿಂದ ಭೇಟಿ

ನೂರಾರು ವರ್ಷಗಳ ಈ ಆಂಜನೇಯ ವಿಗ್ರಹಕ್ಕೆ ಸಾಂಪ್ರದಾಯಿಕ ಪೂಜೆ ಸಲ್ಲಿಸಲು ಧರ್ಮಯ್ಯ ಕುಟುಂಬದವರು ಕಟಿಬದ್ಧರಾಗಿದ್ದಾರೆ. ಧರ್ಮಯ್ಯ ಅವರು ತೀರಿಕೊಂಡ ನಂತರ ಅವರ ಮಗ ಎಂ.ಡಿ. ಅನಿಲ್ ಕಮಾರ್, ಸಹೋದರ, ಸಹೋದರಿಯರು ದೇವಸ್ಥಾನದ ನಿರ್ವಹಣೆ ಜವಾಬ್ದಾರಿ ಹೊತ್ತಿದ್ದಾರೆ. ದೇಗುಲದ ಬಳಿ ಹಸುಗಳನ್ನು ಸಾಕಿದ್ದು, ಪುಟ್ಟ ಗೋಶಾಲೆಯನ್ನು ನಿರ್ವಹಿಸಲಾಗುತ್ತಿದೆ. ಈ ದೇಗುಲಕ್ಕೆ ಕೇರಳ, ತಮಿಳುನಾಡು, ಬೆಂಗಳೂರು, ತುಮಕೂರಿನಿಂದ ಮಾನಸಿಕ ಸಮಸ್ಯೆ ಇರುವವರು ಭೇಟಿ ನೀಡುತ್ತಾರೆ. ಅವರ ನಂಬಿಕೆ ಪ್ರಕಾರ ಈ ದೇಗುಲಕ್ಕೆ ಭೇಟಿ ನೀಡಿದರೆ ಸಮಸ್ಯೆ ಬಗೆಹರಿಯುತ್ತದೆ.

ಮಧ್ಯರಾತ್ರಿ ವೇಳೆ ಗಂಟೆ- ಜಾಗಟೆ ಸದ್ದು ಕೇಳುತ್ತದಂತೆ

ಮಧ್ಯರಾತ್ರಿ ವೇಳೆ ಗಂಟೆ- ಜಾಗಟೆ ಸದ್ದು ಕೇಳುತ್ತದಂತೆ

ಇನ್ನು ಗ್ರಹ ಚೇಷ್ಟೆಯಿಂದ ಬಳಲುತ್ತಿರುವವರು ಗ್ರಹ ಚೇಷ್ಟೆ ಬಿಡುಗಡೆ ವೇಳೆಯಲ್ಲಿ ದೇಗುಲ ಮುಂಭಾಗದ ವೃಕ್ಷಕ್ಕೆ ಕೈ, ತಲೆಯಿಂದ ಮೊಳೆ ಹೊಡೆಯುವುದನ್ನು ಪ್ರತ್ಯಕ್ಷವಾಗಿ ಕಾಣಬಹುದು. ಮಧ್ಯ ರಾತ್ರಿಯ ವೇಳೆ ದೇಗುಲದಲ್ಲಿ ಗಂಟೆ- ಜಾಗಟೆ ಸದ್ದು ಕೇಳಿಸುತ್ತದೆ ಎಂದು ಕೆಲವರು ಹೇಳುತ್ತಾರೆ. ಈಗಲೂ ಋಷಿಮುನಿ ಸಂಚಾರ ಈ ಪ್ರದೇಶದಲ್ಲಿ ಇದೆ ಎಂದು ಹೇಳಲಾಗುತ್ತದೆ. ಇವೆಲ್ಲ ಅವರವರ ಅನುಭವ ಆದರೂ ಬ್ರಹ್ಮಚಾರಿ ಆಂಜನೇಯನಿಗೆ ಕಲ್ಯಾಣೋತ್ಸವ ಎಂಬುದು ಅಚ್ಚರಿಯ ಸಂಗತಿ. ಇದನ್ನು ಕಣ್ಣಾರೆ ನೋಡುವ ಅವಕಾಶ ನಿಮಗೂ ಇದೆ.

lok-sabha-home

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Unique ritual of Kalyanotsava performs in Sankapura Anjaneya temple, Pavagada taluk, Tumakuru district. People believe that, this temple visit will be solution for many problems.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more