ದೇವೇಗೌಡರ ಮೇಲೆ ಗೆದ್ದ ಬಸವರಾಜು ಮುಂದಿನ ಎಲೆಕ್ಷನ್ ಸ್ಪರ್ಧಿಸಲ್ಲ
Recommended Video
ತುಮಕೂರು, ಜೂನ್ 3: ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಆಯ್ಕೆಯಾದ ಜಿ.ಎಂ.ಸಿದ್ದೇಶ್ವರ, ಇದೇ ನನ್ನ ಕೊನೆ ಚುನಾವಣೆ. ಮುಂದೆ ಸ್ಪರ್ಧೆ ಮಾಡುವುದಿಲ್ಲ ಎಂದಿದ್ದಾರೆ. ಇದೀಗ ತುಮಕೂರು ಲೋಕಸಭಾ ಕ್ಷೇತ್ರದಿಂದ ದೇವೇಗೌಡರನ್ನು ಮಣಿಸಿ, ಗೆದ್ದಿರುವ ಜಿ.ಎಸ್.ಬಸವರಾಜು ಅವರು, ಇದು ನನ್ನ ಕೊನೆ ಚುನಾವಣೆ. ಮುಂದೆ ಸ್ಪರ್ಧೆ ಮಾಡುವುದಿಲ್ಲ ಎಂದಿದ್ದಾರೆ.
ನಾನು ಕಾಂಗ್ರೆಸ್ ಗೆ ಹೋಗುವುದಿಲ್ಲ. ಅವರನ್ನೂ ಇಲ್ಲಿಗೆ ಕರೆತರುವುದಿಲ್ಲ ಎಂದಿದ್ದು, ಕೆ.ಎನ್.ರಾಜಣ್ಣ ಸೇರಿದಂತೆ ಕಾಂಗ್ರೆಸ್ ನ ಹಲವು ನಾಯಕರು ನನ್ನ ಗೆಲುವಿಗೆ ಸಹಕಾರ ನೀಡಿದ್ದಾರೆ. ಮುಂದಿನ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದಿಲ್ಲ. ಬೇರೆ ಯಾರನ್ನಾದರೂ ತಯಾರು ಮಾಡುತ್ತೇನೆ. ಆರೋಗ್ಯ ಚೆನ್ನಾಗಿದರೆ ಯಾರನ್ನಾದರೂ ಸ್ಪರ್ಧೆಗೆ ನಿಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

ಮಧುಗಿರಿಯ ಹಾಲಿ ಶಾಸಕ ವೀರಭದ್ರಯ್ಯ ಅವರ ಕಾರ್ಯ ವೈಖರಿ ನೋಡಿ, ಜನರು ನನಗೆ ಮತ ಚಲಾಯಿಸಿದ್ದಾರೆ. ಇನ್ನು ಕೆ.ಎನ್.ರಾಜಣ್ಣ ಅವರ ಬೆಂಬಲಿಗರು ಅನುಕಂಪದ ಆಧಾರದಲ್ಲಿ ನನ್ನ ಪರವಾಗಿ ಮತ ಚಲಾಯಿಸಿದ್ದಾರೆ ಎಂದು ಜಿ.ಎಸ್.ಬಸವರಾಜು ಅವರು ಹೇಳಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಎಚ್.ಡಿ.ದೇವೇಗೌಡರ ವಿರುದ್ಧ ಬಿಜೆಪಿಯ ಬಸವರಾಜು ಜಯ ಸಾಧಿಸಿದ್ದಾರೆ.












Click it and Unblock the Notifications