ಏಷ್ಯಾದ ಅತಿ ದೊಡ್ಡ ಕೈಗಾರಿಕಾ ಹಬ್ ಆಗಿ ತುಮಕೂರು ಅಭಿವೃದ್ಧಿ

ತುಮಕೂರು, ಆಗಸ್ಟ್ 25: "ತುಮಕೂರು ಜಿಲ್ಲೆಯನ್ನು ಗ್ರೇಟರ್ ಬೆಂಗಳೂರನ್ನಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದ್ದು, ಮುಂದಿನ ದಿನಗಳಲ್ಲಿ ಏಷ್ಯಾ ಖಂಡದ ಅತಿ ದೊಡ್ಡ ಕೈಗಾರಿಕಾ ಹಬ್ ಆಗಿ ತುಮಕೂರು ಹೊರಹೊಮ್ಮಲಿದೆ" ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು.

ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ವಿವಿಧ ಕೈಗಾರಿಕೋದ್ಯಮಿಗಳೊಂದಿಗೆ ಸಚಿವರು ಸಭೆ ನಡೆಸಿದರು. "ತುಮಕೂರು ಜಿಲ್ಲೆಯಲ್ಲಿ ಹೂಡಿಕೆ ಮಾಡಲು ದೊಡ್ಡ-ದೊಡ್ಡ ಕಂಪನಿಗಳಿಗೆ ಮೂಲಸೌಕರ್ಯಗಳೊಂದಿಗೆ ಅವಕಾಶ ಕಲ್ಪಿಸಲಾಗಿದೆ" ಎಂದು ಸಚಿವರು ಹೇಳಿದರು.

Tumakuru To Be Developed As Aisas Big Industrial Hub

"ವಸಂತನರಸಾಪುರ, ಹಿರೇಹಳ್ಳಿ ಮತ್ತು ಅಂತರಸನಹಳ್ಳಿ ಕೈಗಾರಿಕಾ ಪ್ರದೇಶಗಳಲ್ಲಿ ಹೂಡಿಕೆ ಮಾಡಿ ಕಾರ್ಯನಿರ್ವಹಿಸುತ್ತಿರುವ ಕಂಪನಿ/ ಕೈಗಾರಿಕೆಗಳು ಸಿಎಸ್‌ಆರ್ ನಿಧಿಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿವೇಚನೆ ಮೇರೆಗೆ ಶಿಕ್ಷಣ, ಆರೋಗ್ಯ ಮತ್ತು ಮಹಿಳಾ ಮತ್ತು ಮಕ್ಕಳ ಏಳಿಗೆಗಾಗಿ ವ್ಯಯಿಸಲು ಹೆಚ್ಚಿನ ಒತ್ತು ನೀಡಬೇಕೆಂದು ಕೈಗಾರಿಕೋದ್ಯಮಿಗಳಿಗೆ ಕರೆ ನೀಡಿದರು.

ಹೆಚ್‌ಎಎಲ್ ಘಟಕ; ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ಹೆಚ್‌ಎಎಲ್ ಹೆಲಿಕಾಪ್ಟರ್ ಉತ್ಪಾದನಾ ಘಟಕ ಸ್ಥಾಪನೆ ಮಾಡಲಾಗಿದೆ. ಈ ಮೂಲಕ ಇಲ್ಲಿನ ಜನರಿಗೆ ಉದ್ಯೋಗಾವಕಾಶವನ್ನು ಕಲ್ಪಿಸಿ ಕೊಡಲಾಗಿದೆ. ಇಡೀ ವಿಶ್ವದಲ್ಲೇ ಅತಿ ದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ಘಟಕವಾಗಿ ಇದು ಹೊರಹೊಮ್ಮಲಿದೆ ಎಂದು ಸಚಿವರು ಹೇಳಿದರು.

ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ಕೇಬಲ್ ಕಾಮಗಾರಿಯು ಪ್ರಗತಿಯಲ್ಲಿದ್ದು, ಅಕ್ಟೋಬರ್ ಒಳಗೆ ಪೂರ್ಣಗೊಳ್ಳಲಿದೆ. ನಂತರ ವಿದ್ಯುತ್ ಸಮಸ್ಯೆ ಇರುವುದಿಲ್ಲ. ಈ ಕೈಗಾರಿಕಾ ವಲಯದ ಸುತ್ತ-ಮುತ್ತ ಹೋಟೆಲ್‌ಗಳು ಸಾಕಷ್ಟು ಸಂಖ್ಯೆಯಲ್ಲಿ ಇರುವುದಿಲ್ಲ. ಆದ್ದರಿಂದ ತ್ರಿ-ಸ್ಟಾರ್ ಹೋಟೆಲ್‌ಗಳು ಸೇರಿದಂತೆ ಹೋಟೆಲ್‌ಗಳ ಸಂಖ್ಯೆ ಹೆಚ್ಚಬೇಕು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು.

ಸಿಎಸ್‌ಆರ್ ಅನುದಾನ ಬಳಕೆ; ಕಂಪನಿ/ ಕೈಗಾರಿಕೆಗಳ ಸಿಎಸ್‌ಆರ್ ಅನುದಾನವನ್ನು ಗ್ರಾಮೀಣ ಭಾಗದ ಶಾಲೆ, ಆರೋಗ್ಯ ಇನ್ನಿತರ ಸೇವೆಗಳಿಗಾಗಿ ಸಮರ್ಪಕವಾಗಿ ಬಳಕೆ ಮಾಡಿದಾಗ ಮಾತ್ರ ಸ್ಥಳೀಯರಿಗೆ ಅನುಕೂಲವಾಗುತ್ತದೆ ಎಂದು ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.

ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಇಎಸ್‌ಐ ಆಸ್ಪತ್ರೆ ನಿರ್ಮಾಣ ಮಾಡಲು 3 ಎಕರೆ ಜಾಗವನ್ನು ಗುರುತಿಸಲಾಗಿದೆ. ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳವನ್ನು ಸ್ಥಾಪಿಸಲು ಸಹ ಜಾಗ ಮಂಜೂರು ಮಾಡಲಾಗಿದ್ದು, ಪೊಲೀಸ್ ಠಾಣೆ ಹಾಗೂ ಪೊಲೀಸ್ ವಸತಿ ಸಮುಚ್ಛಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿ ಎಂದು ಸಚಿವರು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ಕೊಟ್ಟರು.

ಕೈಗಾರಿಕಾ ಪ್ರದೇಶದಲ್ಲಿ ಪೊಲೀಸ್ ಔಟ್ ಪೋಸ್ಟ್ ಸ್ಥಾಪಿಸಲಾಗುವುದು. ಕೈಗಾರಿಕಾ ವಲಯದ ಕಾರ್ಮಿಕರು ಎರಡನೇ ಪಾಳಿಯಲ್ಲಿ ಕರ್ತವ್ಯ ಮುಗಿಸಿ ಮನೆಗೆ ತೆರಳುವ ಸಂದರ್ಭದಲ್ಲಿ ಅವರಿಗೆ ಆಗುವ ಸಮಸ್ಯೆಗಳನ್ನು ತಪ್ಪಿಸಲು ರಾತ್ರಿ ಪಾಳಿಯಲ್ಲಿ ಹೆಚ್ಚಾಗಿ ಪೊಲೀಸ್ ಪೇದೆಗಳನ್ನು ಕರ್ತವ್ಯಕ್ಕೆ ನೇಮಿಸಿ ಎಂದು ಪೊಲೀಸರಿಗೆ ನಿರ್ದೇಶನ ನೀಡಿದರು.

ರಾಷ್ಟ್ರೀಯ ಹೆದ್ದಾರಿ ಕ್ಯಾತ್ಸಂದ್ರ ಬಸ್ ನಿಲ್ದಾಣದಿಂದ ನಗರಕ್ಕೆ ಸಾವಿರಾರು ಮಕ್ಕಳು ಪ್ರತಿದಿನ ಶಾಲೆಗೆ ತೆರಳುತ್ತಾರೆ. ಮಳೆ, ಬಿಸಿಲು ಇದ್ದಾಗ ಅವರು ಕುಳಿತುಕೊಳ್ಳುವುದಕ್ಕಾಗಿ ಒಂದು ತಂಗುದಾಣವನ್ನು ತುರ್ತಾಗಿ ನಿರ್ಮಿಸುವಂತೆ ಹಾಗೂ ಜಿಲ್ಲೆಯ ಸಂಸ್ಕೃತಿಗೆ ಹೊಂದುವ ರೀತಿಯಲ್ಲಿ ಸ್ವಾಗತ ಫಲಕಗಳನ್ನು ಅಳವಡಿಸಬೇಕೆಂದು ಸಚಿವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಮಾತನಾಡಿದ ತುಮಕೂರು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, "ಕೈಗಾರಿಕಾ ಪ್ರದೇಶಗಳಲ್ಲಿ ದುರಸ್ತಿಗೆ ಒಳಪಟ್ಟಿರುವ ರಸ್ತೆಗಳನ್ನು ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳಿಂದ ಅಭಿವೃದ್ಧಿಪಡಿಸಲಾಗುವುದು. ಕೈಗಾರಿಕಾ ಪ್ರದೇಶಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು" ಎಂದರು.

ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತಿ ಸಿಇಒ ಜಿ. ಪ್ರಭು, "ಜಿಲ್ಲೆಯಲ್ಲಿರುವ 4,200 ಶಾಲೆಗಳಲ್ಲಿ 2.5 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಶಾಲೆಗಳಿಗೆ ಪ್ರಮುಖವಾಗಿ ಮೂಲಭೂತ ಸೌಲಭ್ಯಗಳಾದ ಕೊಠಡಿ, ಶೌಚಾಲಯ, ಆಟದ ಮೈದಾನವನ್ನು ಸಿಎಸ್‌ಆರ್ ಅನುದಾನದಲ್ಲಿ ಅಭಿವೃದ್ಧಿಪಡಿಸಬೇಕು" ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+