ನಾಪತ್ತೆಯಾಗಿದ್ದ ತುಮಕೂರು ವಿವಿ ಪ್ರಾಧ್ಯಾಪಕ ಶವವಾಗಿ ಪತ್ತೆ

ತುಮಕೂರು, ಜನವರಿ 10 : ನಾಪತ್ತೆಯಾಗಿದ್ದ ತುಮಕೂರು ವಿಶ್ವವಿದ್ಯಾಲಯದ ಪ್ರಾಧ್ಯಪಕ ಈಶ್ವರ್ ಶವವಾಗಿ ಪತ್ತೆಯಾಗಿದ್ದಾರೆ. ಡಿಸೆಂಬರ್ 9ರಂದು ಅವರು ನಾಪತ್ತೆಯಾಗಿದ್ದರು.

57 ವರ್ಷದ ಈಶ್ವರ್ ಶವ ತುಮಕೂರಿನ ಇಸ್ರೋ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಗುರುವಾರ ಪತ್ತೆಯಾಗಿದೆ. ಹೊಸ ಬಡಾವಣೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Tumakuru university lecturer found dead

ಡಿಸೆಂಬರ್ 9ರಂದು ಈಶ್ವರ್ ಅವರು ಮುಂಜಾನೆ ವಾಯು ವಿಹಾರಕ್ಕೆ ತೆರಳಿದ್ದರು. ಬಳಿಕ ಅವರ ನಾಪತ್ತೆಯಾಗಿದ್ದರು. ಇಂದು ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದು ಕೊಲೆಯೇ, ಆತ್ಮಹತ್ಯೆಯೇ? ಎಂದು ಪೊಲಿಸರು ತನಿಖೆ ನಡೆಸುತ್ತಿದ್ದಾರೆ.

ತುಮಕೂರು ವಿಶ್ವವಿದ್ಯಾಲಯದಲ್ಲಿ ಈಶ್ವರ್ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದರು. ಕೆಲವು ದಿನಗಳ ಹಿಂದೆ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿತ್ತು. ಸಹೋದ್ಯೋಗಿಗಳೇ ಈ ಆರೋಪವನ್ನು ಮಾಡಿದ್ದರು.

ಆರೋಪಗಳಿಂದ ಮನನೊಂದು ಅವರು ಆತ್ಮಹತ್ಯೆ ಮಾಡಿಕೊಂಡರೇ ಅಥವ ಅವರನ್ನು ಕೊಲೆ ಮಾಡಲಾಗಿದೆಯೇ? ಎಂದು ತನಿಖೆ ನಡೆಸಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+