ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಾವಗಡ ಖಾಸಗಿ ಬಸ್ ಅಪಘಾತ: ಮೃತ ಕುಟುಂಬಕ್ಕೆ, ಗಾಯಾಳುಗಳಿಗೆ ಪರಿಹಾರ ಘೋಷಣೆ

|
Google Oneindia Kannada News

ತುಮಕೂರು, ಮಾರ್ಚ್ 19: ಕರ್ನಾಟಕದ ಪಾಲಿಗೆ ಶನಿವಾರ ಕರಾಳ ದಿನವಾಗಿದ್ದು, ಇಂದು ಬೆಳಗ್ಗೆಯೇ ತುಮಕೂರು ಜಿಲ್ಲೆ ಪಾವಗಡದಲ್ಲಿ ಬಸ್ ಪಲ್ಟಿಯಾಗಿ 5 ಜನರು ಸಾವನ್ನಪ್ಪಿ, 50ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಖಾಸಗಿ ಬಸ್ ಅಪಘಾತದಲ್ಲಿ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ಸಾರಿಗೆ ಸಚಿವ ಬಿ. ಶ್ರೀರಾಮುಲು ಘೋಷಿಸಿದ್ದಾರೆ.

ಖಾಸಗಿ ಬಸ್ ಪಲ್ಟಿ: ಮೃತರ ಕುಟುಂಬಸ್ಥರು, ಗಾಯಾಳುಗಳಿಗೆ ಪರಿಹಾರ: ಸಾರಿಗೆ ಸಚಿವಖಾಸಗಿ ಬಸ್ ಪಲ್ಟಿ: ಮೃತರ ಕುಟುಂಬಸ್ಥರು, ಗಾಯಾಳುಗಳಿಗೆ ಪರಿಹಾರ: ಸಾರಿಗೆ ಸಚಿವ

ಶನಿವಾರ ಬೆಳಗ್ಗೆ ಶ್ರೀನಿವಾಸ್ ಮೂರ್ತಿ ಒಡೆತನದ ಎಸ್‌ವಿಟಿ ಖಾಸಗಿ ಬಸ್ ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಹೋಗುತ್ತಿತ್ತು. ಬಸ್ ಟಾಪ್‌ನಲ್ಲಿ 50ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಕುಳಿತಿದ್ದರು. ಆದರೆ ಬಸ್ ಓವರ್ ಲೋಡ್ ಹಾಗೂ ಚಾಲಕನ ನಿರ್ಲಕ್ಷ್ಯದಿಂದ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಯ ಕೆರೆ ಏರಿ ಮೇಲೆ ಬಸ್ ಉರುಳಿತ್ತು.

Tumakuru Private Bus Accident: Transport Minister Declared of Compensation for Deceased Family Members

ಖಾಸಗಿ ಬಸ್ ಅಪಘಾತಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ಬಿ. ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದು, ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಬಸ್ ಫಿಟ್‌ನೆಟ್ ಸೇರಿದಂತೆ ಎಲ್ಲ ದಾಖಲೆಗಳ ಪರಿಶೀಲಿಸಲಾಗುತ್ತದೆ. ಪರಿಶೀಲನೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮೃತರ ಕುಟುಂಬಸ್ಥರು, ಗಾಯಾಳುಗಳಿಗೆ ಆರ್ಥಿಕ ಸಹಾಯ ಮಾಡುತ್ತೇವೆ. RTO ಅಧಿಕಾರಿಗಳ ತಪ್ಪಿದ್ದರೂ ಕೂಡಲೇ ಕ್ರಮಕೈಗೊಳ್ಳುತ್ತೇವೆ ಎಂದು ಸಾರಿಗೆ ಇಲಾಖೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದರು.

English summary
Tumakuru Private Bus Accident: Transport Minister B Sriramulu Declared Rs 5 Laksh compensation for Deceased Family Members and Rs 50 Thousand compensation for Injured.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X