Lokayukta Raid: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ
ತುಮಕೂರು, ಮಾರ್ಚ್ 12: ಲಂಚ ಸ್ವೀಕರಿಸುವ ವೇಳೆಯೇ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ತುಮಕೂರಿನಲ್ಲಿ ನಡೆದಿದೆ. ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಮಂಜುನಾಥ್ ವಿ.ಕೆ ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ಎಂದು ತಿಳಿದು ಬಂದಿದೆ.
ತುಮಕೂರಿನ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಮಂಜುನಾಥ್ ವಿ.ಕೆ, ಜಿಎಸ್‌ಟಿ ಹಣ ಕಡಿತಗೊಳಿಸಲು ವ್ಯಕ್ತಿಯೊಬ್ಬರ ಬಳಿ ಬರೋಬ್ಬರಿ 50 ಸಾವಿರ ಲಂಚಕ್ಕೆ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಅಧಿಕಾರಿಯ ಲಂಚ ಆಸೆಗೆ ಬೇಸತ್ತ ವ್ಯಕ್ತಿ ಈ ವಿಚಾರವನ್ನು ಲೋಕಾಯುಕ್ತ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಇಂದು (ಮಾರ್ಚ್ 12) ಮಂಗಳವಾರ ತುಮಕೂರಿನ ಕಚೇರಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಮಂಜುನಾಥ್ ವಿ.ಕೆ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಅಧಿಕಾರಿ 40 ಸಾವಿರ ಹಣ ತೆಗೆದುಕೊಳ್ಳುವಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ವರದಿಯಾಗಿದೆ.
ವ್ಯಕ್ತಿಯೊಬ್ಬರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಡಿವೈಎಸ್ ಪಿ. ಉಮಾಶಂಕರ್ ನೇತೃತ್ವದ ತಂಡ ದಾಳಿ ನಡೆಸಿ, ಲಂಚದ ಹಣದೊಂದಿಗೆ ಭ್ರಷ್ಟ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಐತಿಹಾಸಿಕ ಶ್ರೀಕಲ್ಲೇಶ್ವರ ಸ್ವಾಮಿ ರಥಕ್ಕೆ ಬೆಂಕಿ
ತುಮಕೂರು: ಐತಿಹಾಸಿಕ ಶ್ರೀ ಕಲ್ಲೇಶ್ವರ ಸ್ವಾಮಿ ಅವರ ರಥಕ್ಕೆ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿರುವ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರುಪುರ ಗ್ರಾಮದಲ್ಲಿ ನಡೆದಿದೆ. ಬೆಂಕಿ ಇಟ್ಟ ಕಿಡಿಗೇಡಿಯನ್ನ ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶ ರಾಜ್ಯದ ಘೋರಕ್ ಪುರದ ಉದಾರಿ(32) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಆರೋಪಿ ಉದಾರಿತೆಂಗಿನ ಗರಿಗಳನ್ನು ರಥದ ಪಕ್ಕ ಹಾಕಿ ಬೆಂಕಿ ಹಚ್ಚಿದ್ದಾನೆ ಎಂದು ಪ್ರತ್ಯಕ್ಷ ಸಾಕ್ಷಿಗಳು ತಿಳಿಸಿದ್ದು, ಸದ್ಯ ಆರೋಪಿಯನ್ನು ಬಂಧಿಸಿ ಪೊಲೀಸರಿಗೆ ಒಪ್ಪಿಸಲಾಗಿದೆ.
ಸುಮಾರು 800 ವರ್ಷಗಳ ಇತಿಹಾಸ ಇರುವಂತಹ ಶ್ರೀ ಕಲ್ಲೇಶ್ವರ ಸ್ವಾಮಿ ದೇವಾಲಯಕ್ಕೆ ಭಕ್ತಾದಿಗಳು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ವಿಶೇಷ ರಥ ಸಿದ್ಧಪಡಿಸಿದ್ದರು. ಶ್ರೀ ಕಲ್ಲೇಶ್ವರ ಸ್ವಾಮಿಯ ಅನ್ನಪೂರ್ಣೇಶ್ವರಿ ರಥೋತ್ಸವಕ್ಕೆ ಕೇವವೇ ದಿನ ಬಾಕಿ ಇರುವ ಹೊತ್ತಲೇ ಇಂತಹ ಅವಘಡ ನಡೆದಿದೆ.












Click it and Unblock the Notifications