V Somanna: ಹೊರಗಿನಿಂದ ಬಂದು ತುಮಕೂರಿನ ಚುಕ್ಕಾಣಿ ಹಿಡಿದ್ರಾ ವಿ. ಸೋಮಣ್ಣ!?
ತುಮಕೂರು, ಜೂನ್. 04: ಕಲ್ಪತರು ನಾಡು ತುಮಕೂರಿನಲ್ಲಿ ಬಿದ್ದಾ ಜಿದ್ದಿನ ಪೈಪೋಟಿ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ವಿ ಸೋಮಣ್ಣ ಕಣಕ್ಕಿಳಿದಿದ್ದು, ಆರಂಭಿಕ ಮತ ಎಣಿಕೆ ಪ್ರಕಾರ ಬರೋಬ್ಬರಿ 68,998 ಮತಗಳ ಅಂತದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ತುಮಕೂರಿನಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಪ್ರಸ್ತುತ ಬಿಜೆಪಿಯ ವಿ. ಸೋಮಣ್ಣ ಮುನ್ನಡೆಯಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ 2,71,431 ಮತಗಳನ್ನು ಪಡೆದಿದ್ದರೇ, ಕಾಂಗ್ರೆಸ್ ಅಭ್ಯರ್ಥಿ ಎಸ್ ಪಿ ಮುದ್ದಹನುಮೇಗೌಡ 2,02,433 ಸಾವಿರ ಮತಗಳನ್ನು ಪಡೆದಿದ್ದಾರೆ. ಇಬ್ಬರ ನಡುವೆ 68,998 ಮತಗಳ ಅಂತರವಿದೆ.

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಎರಡನೇ ಹಂತದ ಚುನಾವಣೆಯಲ್ಲಿ ಏಪ್ರಿಲ್ 26 ರಂದು ಮತದಾನ ನಡೆದಿದೆ. ಬೆಂಗಳೂರಿನಿಂದ ಬಂದು ತುಮಕೂರಿನಲ್ಲಿ ಚುನಾವಣೆಗೆ ನಿಂತಿರುವ ವಿ ಸೋಮಣ್ಣ ಒಂದೆಡೆಯಾದರೇ, ಕಾಂಗ್ರೆಸ್‌ನಿಂದ ಮಾಜಿ ಸಂಸದ ಮುದ್ದಹನುಮೇಗೌಡ ಕಣಕ್ಕಿಳಿದಿದ್ದಾರೆ.
ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಅವರಿಗೆ ಟಿಕೆಟ್ ನೀಡದ ಕಾರಣ ತುಮಕೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ, ಆಯ್ಕೆಯನ್ನು ಪಕ್ಷದವರೇ ವಿರೋಧಿಸಿದ್ದರು. ಆದರೂ ಕೂಡ ಸೋಮಣ್ಣ ಮುನ್ನಡೆ ಕಾಯ್ದುಕೊಂಡಿದ್ದಾರೆ. ಗೆಲ್ಲುವ ಅಭ್ಯರ್ಥಿ ಎನ್ನಲಾಗಿದ್ದ ಮುದ್ದಹನುಮೇಗೌಡ ಭಾರಿ ಹಿನ್ನಡೆ ಅನುಭವಿಸಿದ್ದಾರೆ.












Click it and Unblock the Notifications