V Somanna: ವಲಸೆ ಬಂದು ಕಲ್ಪತರು ನಾಡಿನಲ್ಲಿ ಗೂಡು ಕಟ್ಟಿಕೊಂಡ ವಿ. ಸೋಮಣ್ಣ
ತುಮಕೂರು, ಜೂನ್. 04: ಕಲ್ಪತರು ನಾಡು ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ವಿ ಸೋಮಣ್ಣ ಭರ್ಜರಿ ಗೆಲುವು ಕಂಡಿದ್ದಾರೆ. ಬೆಂಗಳೂರಿನಿಂದ ವಲಸೆ ಬಂದು ತುಮಕೂರಿನಲ್ಲಿ ಬರೋಬ್ಬರಿ 1,75,594 ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ. ಮಾಜಿ ಸಂಸದ ಅಲ್ಲಿನವರೆ ಆದ ಮುದ್ದಹನುಮೇಗೌಡ ಸೋಲು ಕಂಡಿದ್ದಾರೆ.
ಮತ ಎಣಿಕೆಯಲ್ಲಿ ಬಿಜೆಪಿಯ ವಿ. ಸೋಮಣ್ಣ ಮೊದಲಿನಿಂದಲೂ ಮುನ್ನಡೆ ಕಾಯ್ದುಕೊಂಡಿದ್ದರು. ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ 7,20,946 ಮತಗಳನ್ನು ಪಡೆದರೇ, ಕಾಂಗ್ರೆಸ್ ಅಭ್ಯರ್ಥಿ ಎಸ್ ಪಿ ಮುದ್ದಹನುಮೇಗೌಡ 5,45,352 ಸಾವಿರ ಮತಗಳನ್ನು ಪಡೆದಿದ್ದಾರೆ. ಇಬ್ಬರ ನಡುವೆ 1,75,594 ಮತಗಳ ಅಂತರವಿದೆ. ಕ್ಷೇತ್ರದಲ್ಲಿ ನೋಟಾಗೆ 6460 ಮತಗಳು ಬಿದ್ದಿವೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಎರಡನೇ ಹಂತದ ಚುನಾವಣೆಯಲ್ಲಿ ಏಪ್ರಿಲ್ 26 ರಂದು ಮತದಾನ ನಡೆದಿತ್ತು.

2024ರ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ 18 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. 2019 ರಲ್ಲಿ ಈ ಸ್ಥಾನಕ್ಕೆ ಸ್ಪರ್ಧಿಸಿದವರ ಸಂಖ್ಯೆ 15 ಆಗಿದ್ದರೆ, 2014 ರಲ್ಲಿ 16 ಅಭ್ಯರ್ಥಿಗಳಿದ್ದರು ಮತ್ತು 2009 ರ ಚುನಾವಣೆಯಲ್ಲಿ ಈ ಸಂಖ್ಯೆ 10 ಆಗಿತ್ತು. ಈ ಬಾರಿಯೇ ಅತಿಹೆಚ್ಚು ಮಂದಿ ಸ್ಪರ್ಧಿಸಿದ್ದರು.
2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು
1. ವಿ ಸೋಮಣ್ಣ, ಭಾರತೀಯ ಜನತಾ ಪಕ್ಷ (ಬಿಜೆಪಿ)
2. ಪ್ರದೀಪ್ ಕುಮಾರ್ ದೊಡ್ಡಮುದ್ದೇಗೌಡ, ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್)
3. ಬಿ ದೇವರಾಜ್, ಸ್ವತಂತ್ರ
4. ಕಪನಿಗೌಡ, ಸ್ವತಂತ್ರ
5. ಎಸ್ ಎನ್ ಸ್ವಾಮಿ, ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) (
6. ಸಿದ್ದರಾಮೇಗೌಡ ಟಿ ಬಿ, ಸ್ವತಂತ್ರ
7. ಆರ್ ನಾರಾಯಣಪ್ಪ, ಸ್ವತಂತ್ರ
8. ಪ್ರಕಾಶ್ ಆರ್ ಎ ಜೈನ್, ಸ್ವತಂತ್ರ
9. ರಾಜಸಿಂಹ ಜೆ ಎನ್, ಬಹುಜನ ಸಮಾಜ ಪಕ್ಷ (ಬಿಎಸ್ಪಿ)
10. ಬಸವರಾಜು ಎಚ್ ಆರ್, ರಾಷ್ಟ್ರೀಯ ಮಹಾ ಸಭಾ ಪಕ್ಷ (ಎನ್ಎಂಎಸ್ಪಿ)
11. ರಂಗನಾಥ ಆರ್ ಎಸ್, ಸ್ವತಂತ್ರ
12. ಎಸ್ ಪಿ ಮುದ್ದಹನುಮೇಗೌಡ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್
13. ಆರ್ ಪುಷ್ಪಾ, ಸ್ವತಂತ್ರ
14. ಮಲ್ಲಿಕಾರ್ಜುನಯ್ಯ, ಸ್ವತಂತ್ರ
15. ಜೆ ಕೆ ಸಾಮಿ, ಸ್ವತಂತ್ರ
16. ಎಚ್ ಎಲ್ ಮೋಹನ್ ಕುಮಾರ್, ಸ್ವತಂತ್ರ
17. ಡಾ ಎಚ್ ಬಿ ಎಂ ಹಿರೇಮಠ, ಕನ್ನಡ ಪಕ್ಷ (ಕೆಎನ್‌ಪಿ)
18. ನೀಲಕಂಠೇಶ ಎಚ್ ಎಸ್, ಸ್ವತಂತ್ರ
2019 ರ ಚುನಾವಣೆಯಲ್ಲಿ, ಬಿಜೆಪಿ ಅಭ್ಯರ್ಥಿ ಜಿಎಸ್ ಬಸವರಾಜ್ 596,127 ಮತಗಳನ್ನು ಗಳಿಸಿ ಜಯಶೀಲರಾಗಿದ್ದರು. 582,788 ಮತಗಳನ್ನು ಗಳಿಸಿದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸೋಲು ಕಂಡಿದ್ದರು. 2014ರ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ 4,29,868 ಮತಗಳನ್ನು ಪಡೆದಿದ್ದರು.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications