Tumkur Lok Sabha Election 2024 Results LIVE : ಒಳಗಿನವV/s ಹೊರಗಿನವ ಹೋರಾಟದಲ್ಲಿ ವಿ ಸೋಮಣ್ಣಗೆ ಸಿಕ್ತಾ ಕಲ್ಪತರು ನಾಡು?
ತುಮಕೂರು, ಜೂನ್. 04: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಲ್ಪತರು ನಾಡು ತುಮಕೂರಿನಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ವಿ ಸೋಮಣ್ಣ ಕಣಕ್ಕಿಳಿದಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸೋಲು ಕಂಡಿರುವ ಅವರಿಗೆ ಇದು ರಾಜಕೀಯ ಅಗ್ನಿ ಪರೀಕ್ಷೆಯ ಸರಿ. ಹಾಗಾದರೇ ತುಮಕೂರಿನ ಜನ ಅವರ ಕೈ ಹಿಡಿದರೇ ಎಂಬುದು ಇಲ್ಲಿದೆ.
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಎರಡನೇ ಹಂತದ ಚುನಾವಣೆಯಲ್ಲಿ ಏಪ್ರಿಲ್ 26 ರಂದು ಮತದಾನ ನಡೆದಿದೆ. ಈ ಬಾರಿಯ ಚುನಾವಣೆ ಒಳಗಿನವ ಮತ್ತು ಹೊರಗಿನವ ಎಂಬ ಹಣಾಹಣಿಗೆ ಸಾಕ್ಷಿಯಾಗಿದೆ. ಬೆಂಗಳೂರಿನಿಂದ ಬಂದು ತುಮಕೂರಿನಲ್ಲಿ ಚುನಾವಣೆಗೆ ನಿಂತಿರುವ ವಿ ಸೋಮಣ್ಣ ಒಂದೆಡೆಯಾದರೇ, ಕಾಂಗ್ರೆಸ್‌ನಿಂದ ಮಾಜಿ ಸಂಸದ ಮುದ್ದಹನುಮೇಗೌಡ ಕಣಕ್ಕಿಳಿದಿದ್ದಾರೆ. ಹೀಗಾಗಿ ಇದು ತೀವ್ರ ಕುತೂಹಲ ಕೆರಳಿಸಿದೆ. ಮತ ಏಣಿಕೆ ನಡೆಯುತ್ತಿದ್ದು, ಇನ್ನೇನು ಕಲ್ಪತರು ನಾಡಿನ ಆಯ್ಕೆ ಯಾರು ಎಂಬುದು ತಿಳಿಯಲಿದೆ.
ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ವಿ ಸೋಮಣ್ಣ ಭರ್ಜರಿ ಗೆಲುವು
ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ವಿ ಸೋಮಣ್ಣ ಭರ್ಜರಿ ಗೆಲುವು ಕಂಡಿದ್ದಾರೆ. ಬೆಂಗಳೂರಿನಿಂದ ವಲಸೆ ಬಂದು ತುಮಕೂರಿನಲ್ಲಿ ಬರೋಬ್ಬರಿ 1,75,594 ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ. ಮಾಜಿ ಸಂಸದ ಅಲ್ಲಿನವರೆ ಆದ ಮುದ್ದಹನುಮೇಗೌಡ ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ 7,20,946 ಮತಗಳನ್ನು ಪಡೆದರೇ, ಕಾಂಗ್ರೆಸ್ ಅಭ್ಯರ್ಥಿ ಎಸ್ ಪಿ ಮುದ್ದಹನುಮೇಗೌಡ 5,45,352 ಸಾವಿರ ಮತಗಳನ್ನು ಪಡೆದಿದ್ದಾರೆ.
ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಮುನ್ನಡೆ
ತುಮಕೂರಿನಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಪ್ರಸ್ತುತ ಬಿಜೆಪಿಯ ವಿ. ಸೋಮಣ್ಣ ಮುನ್ನಡೆಯಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ 1,80,361 ಮತಗಳನ್ನು ಪಡೆದಿದ್ದರೇ, ಕಾಂಗ್ರೆಸ್ ಅಭ್ಯರ್ಥಿ ಎಸ್ ಪಿ ಮುದ್ದಹನುಮೇಗೌಡ 1,39,150 ಸಾವಿರ ಮತಗಳನ್ನು ಪಡೆದಿದ್ದಾರೆ. ಇಬ್ಬರ ನಡುವೆ ಮತಗಳ ಅಂತರ 41,211.
ತುಮಕೂರು ಅಂಚೆ ಮತ ಏಣಿಕೆ ಆರಂಭ
ಅಂಚೆ ಮತ ಎಣಿಕೆ ಆರಂಭವಾಗಿದ್ದು, ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಮುನ್ನಡೆ ಕಾಯ್ದುಕೊಂಡಿದ್ದಾರೆ.

ತುಮಕೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ, ಆಯ್ಕೆಯನ್ನು ಪಕ್ಷದವರೇ ವಿರೋಧಿಸಿದ್ದು ಬಿಜೆಪಿಗೆ ತಿರುಗುಬಾಣವಾಗುವ ಸಾಧ್ಯೆತೆಯಿದೆ. ಅಭ್ಯರ್ಥಿ ಘೋಷಣೆಯಾದಾಗಲೇ ಪಕ್ಷದ ಕಾರ್ಯಕರ್ತರು ಪಕ್ಷದ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಹೊರಗಿನಿಂದ ಬಂದವರು ನಮ್ಮ ಅಭ್ಯರ್ಥಿಯಾಗಿ ಬೇಡ ಎಂದಿದ್ದರು. ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಅವರಿಗೆ ಟಿಕೆಟ್ ನೀಡಿ ಎಂದು ಬೇಡಿಕೆ ಇಟ್ಟಿದ್ದರು. ಮಾಧುಸ್ವಾಮಿ ಕೂಡ ನೇರಾನೇರವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದರು. ಇದು ಚಿಕ್ಕನಾಯಕನಹಳ್ಳಿ, ತುರುವೇಕೆರೆ, ತಿಪಟೂರು ಭಾಗಗಳಲ್ಲಿ ಬಿಜೆಪಿಗೆ ಒಳೇಟು ನೀಡಿದೆ.
ಇನ್ನು, ಕಾಂಗ್ರೆಸ್ ತನ್ನ ಮಾಜಿ ಸಂಸದ ಎಸ್ ಪಿ ಮುದ್ದಹನುಮೇಗೌಡರನ್ನು ಅಭ್ಯರ್ಥಿಯಾಗಿಸಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದಲ್ಲಿ ಮುದ್ದಹನುಮೇಗೌಡ ಅವರಿಗಿರುವ ವರ್ಚಸ್ಸಿನ ಮೇಲೆ ಮತ್ತು ಕಾಂಗ್ರೆಸ್‌ಗೆ ತನ್ನ ಪಂಚ ಗ್ಯಾರಂಟಿಗಳ ಮೇಲೆ ಇರುವ ನಂಬಿಕೆ ಅವರನ್ನು ಅಭ್ಯರ್ಥಿಯಾಗಿಸಿದೆ. ಬಿಜೆಪಿ ಒಳಗಿನ ಭಿನ್ನಾಭಿಪ್ರಾಯ ತಮಗೆ ಲಾಭವಾಗಲಿದೆ ಎಂದಿದ್ದಾರೆ.

ತುಮಕೂರು ಕ್ಷೇತ್ರದಲ್ಲಿ ಪರಿಸ್ಥಿತಿ ಹೇಗಿದೆ...?
ತುಮಕೂರು ಕ್ಷೇತ್ರದಲ್ಲಿ ಮತದಾನದ ದಿನವೂ ಕೂಡ ಜನ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡರ ಪರವಾಗಿ ಇದ್ದರು. ನಗರ ಭಾಗಗಳಲ್ಲಿ ಸಂಸದ ಬಸವರಾಜು ಅವರ ಪ್ರಭಾವ ಮತ್ತು ಲಿಂಗಾಯತ, ಒಕ್ಕಲಿಗರ ಪ್ರಭಾವದಿಂದಾಗಿ ಕೊಂಚ ಮತಗಳು ವಿ ಸೋಮಣ್ಣ ಪರವಾಗಿರಬಹುದು. ಆದರೆ, ಗ್ರಾಮೀಣ ಭಾಗಗಳಲ್ಲಿ ಪರಿಸ್ಥಿತಿ ಬೇರೆಯಿದೆ.
ಗ್ರಾಮೀಣ ಭಾಗಗಳಲ್ಲಿ ಅದರಲ್ಲೂ ಹೆಚ್ಚಾಗಿ ತುರುವೇಕೆರೆ, ಚಿಕ್ಕನಾಯಕನಹಳ್ಳಿ, ತಿಪಟೂರು ಭಾಗಗಳಲ್ಲಿ ಜೆಸಿ ಮಾಧುಸ್ವಾಮಿಗೆ ಟಿಕೆಟ್ ಕೊಡದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಬಾರಿ ಅವರನ್ನು ಕಡೆಗಣಿಸಲಾಗಿದೆ ಎಂಬ ಆರೋಪ ದೊಡ್ಡದಾಗಿತ್ತು. ಈ ಭಾಗದ ಎಲ್ಲಾ ಮತಗಳು ಛಿದ್ರವಾಗಿವೆ. ಇದು ಕಾಂಗ್ರೆಸ್‌ಗೆ ಲಾಭವಾಗಲಿದೆ.
2014 ಮತ್ತು 2019ರ ತುಮಕೂರು ಕ್ಷೇತ್ರದ ಫಲಿತಾಂಶ
2019 ರ ಚುನಾವಣೆಯಲ್ಲಿ, ಬಿಜೆಪಿ ಅಭ್ಯರ್ಥಿ ಜಿಎಸ್ ಬಸವರಾಜ್ 596,127 ಮತಗಳನ್ನು ಗಳಿಸಿ ಜಯಶೀಲರಾಗಿದ್ದರು. 582,788 ಮತಗಳನ್ನು ಗಳಿಸಿದ ಜೆಡಿಎಸ್ ಅಭ್ಯರ್ಥಿ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸೋಲು ಕಂಡಿದ್ದರು. 2014ರ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ 4,29,868 ಮತಗಳನ್ನು ಪಡೆದಿದ್ದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications