Tumkur Lok Sabha Election 2024 Results: ಒಳಗಿನವರು V/s ಹೊರಗಿನವರು ಹೋರಾಟ; ಕಲ್ಪತರು ನಾಡಲ್ಲಿ ಗೆಲುವು ಯಾರಿಗೆ?
ಬೆಂಗಳೂರು, ಮೇ. 29: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಎರಡನೇ ಹಂತದ ಚುನಾವಣೆಯಲ್ಲಿ ಮತದಾನ ನಡೆದಿದೆ. ಈ ಬಾರಿಯ ಚುನಾವಣೆ ಒಳಗಿನವರು ಮತ್ತು ಹೊರಗಿನವರು ಎಂಬ ಹಣಾಹಣಿಗೆ ಸಾಕ್ಷಿಯಾಗಿದೆ. ಮತದಾರರು ಮತ್ತು ರಾಜಕೀಯ ವಿಶ್ಲೇಷಕರು ಈ ಬಾರಿಯ ಕದನವನ್ನು ತೀವ್ರ ಕುತೂಹಲದಿಂದ ನೋಡುತ್ತಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.
ತುಮಕೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ, ಕಾಂಗ್ರೆಸ್ ಮಾಜಿ ಸಂಸದ ಎಸ್‌ಪಿ ಮುದ್ದಹನುಮೇಗೌಡ ಅವರನ್ನು ಕಣಕ್ಕಿಳಿಸಿದೆ. ಬಿಜೆಪಿ ಅಭ್ಯರ್ಥಿ ಆಯ್ಕೆಯನ್ನು ಪಕ್ಷದವರೇ ವಿರೋಧಿಸಿದ್ದು ಬಿಜೆಪಿಗೆ ತಿರುಗುಬಾಣವಾಗುವ ಮಾತು ಎಲ್ಲೆಡೆ ಕೇಳಿ ಬರುತ್ತಿದೆ. ಅಭ್ಯರ್ಥಿ ಘೋಷಣೆಯಾದಾಗಲೇ ಪಕ್ಷದ ಕಾರ್ಯಕರ್ತರು ಅಡ್ಡಿ ಪಡಿಸಿದ್ದರು. ಹೊರಗಿನಿಂದ ಬಂದವರು ನಮ್ಮ ಅಭ್ಯರ್ಥಿಯಾಗಿ ಬೇಡ ಎಂದಿದ್ದರು. ಆದರೂ ಮೂರು ಬಾರಿ ಬಿಜೆಪಿ ಸಂಸದರಾಗಿದ್ದ ಬಸವರಾಜು ಅವರ ಬೆಂಬಲದಿಂದ ವಿ ಸೋಮಣ್ಣ ಕಣಕ್ಕಿಳಿದಿದ್ದಾರೆ.

ಇನ್ನು, ಕಾಂಗ್ರೆಸ್ ತನ್ನ ಮಾಜಿ ಸಂಸದ ಎಸ್ ಪಿ ಮುದ್ದಹನುಮೇಗೌಡರನ್ನು ಅಭ್ಯರ್ಥಿಯಾಗಿಸಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದಲ್ಲಿ ಮುದ್ದಹನುಮೇಗೌಡ ಅವರಿಗಿರುವ ವರ್ಚಸ್ಸಿನ ಮೇಲೆ ಅವರನ್ನು ಅಭ್ಯರ್ಥಿಯಾಗಿಸಿದೆ. ಜೊತೆಗೆ ಗೆಲುವಿನ ಮೇಲೆ ತೀವ್ರ ವಿಶ್ವಾಸ ಇಟ್ಟುಕೊಂಡಿದೆ. ಬಿಜೆಪಿ ಒಳಗಿನ ಭಿನ್ನಾಭಿಪ್ರಾಯ ತಮಗೆ ಲಾಭವಾಗಲಿದೆ ಎಂದಿದ್ದಾರೆ. ಮಾಜಿ ಸಚಿವ ಜೆಸಿ ಮಾಧುಸ್ವಾಮಿ, ಬಿಜೆಪಿ ಅಭ್ಯರ್ಥಿಗೆ ದೊಡ್ಡ ಪೆಟ್ಟು ನೀಡಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
ಕ್ಷೇತ್ರದಲ್ಲಿ ಪರಿಸ್ಥಿತಿ ಹೇಗಿದೆ...?
ಏಪ್ರಿಲ್ 26 ರಂದು ರಾಜ್ಯದ ಮೊದಲ ಹಂತದಲ್ಲಿ ಮತದಾನ ಮುಗಿದಿದೆ. ಕ್ಷೇತ್ರದಲ್ಲಿ ಮತದಾನದ ದಿನವೂ ಕೂಡ ಜನ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಇದ್ದದ್ದನ್ನು ನೋಡಬಹುದಿತ್ತು. ತುಮಕೂರು ನಗರ ಭಾಗಗಳಲ್ಲಿ ಸಂಸದ ಬಸವರಾಜು ಅವರ ಪ್ರಭಾವ ಮತ್ತು ಲಿಂಗಾಯತ, ಒಕ್ಕಲಿಗರ ಪ್ರಭಾವದಿಂದಾಗಿ ಕೊಂಚ ಮತಗಳು ವಿ ಸೋಮಣ್ಣ ಪರವಾಗಿರಬಹುದು. ಆದರೆ, ಗ್ರಾಮೀಣ ಭಾಗಗಳಲ್ಲಿ ಪರಿಸ್ಥಿತಿ ಬೇರೆಯಿದೆ.
ಗ್ರಾಮೀಣ ಭಾಗಗಳಲ್ಲಿ ಅದರಲ್ಲೂ ಹೆಚ್ಚಾಗಿ ತುರುವೇಕೆರೆ, ಚಿಕ್ಕನಾಯಕನಹಳ್ಳಿ, ತಿಪಟೂರು ಭಾಗಗಳಲ್ಲಿ ಜೆಸಿ ಮಾಧುಸ್ವಾಮಿಗೆ ಟಿಕೆಟ್ ಕೊಡದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇಲ್ಲಿ ಚಿಕ್ಕನಾಯಕನಹಳ್ಳಿ ಭಾಗದಲ್ಲಿ ಬಿಜೆಪಿಗೆ ನೆಲೆ ಒದಗಿಸಿದ್ದು ಮಾಧುಸ್ವಾಮಿ. ಆದರೆ, ಈ ಬಾರಿ ಅವರನ್ನು ಕಡೆಗಣಿಸಲಾಗಿದೆ ಎಂಬ ಆರೋಪ ದೊಡ್ಡದಾಗಿತ್ತು. ಈ ಭಾಗದ ಎಲ್ಲಾ ಮತಗಳು ಛಿದ್ರವಾಗಿವೆ. ಇದು ಕಾಂಗ್ರೆಸ್‌ಗೆ ಲಾಭವಾಗಲಿದೆ.

ಮಹಿಳೆಯರು ಮತ್ತು ಕಾಂಗ್ರೆಸ್ ಯೋಜನೆಗಳು
ಈ ಬಾರಿ ತುಮಕೂರಿನಲ್ಲಿ ಮಾತ್ರವಲ್ಲ ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿದ್ದು ತನ್ನ ಪಂಚ ಗ್ಯಾರಂಟಿ ಯೋಜನೆಗಳನ್ನೆ. ಇದು ಚೆನ್ನಾಗಿಯೇ ಕೆಲಸ ಮಾಡಿದೆ. ಗ್ರಾಮೀಣ ಭಾಗಗಳಲ್ಲಿ ಕಾಂಗ್ರೆಸ್ ಮತ್ತು ಸಿದ್ಧರಾಮಯ್ಯ ಅವರ ಬಗೆಗಿನ ಭಾವನೆಗಳೇ ಬದಲಾಗಿವೆ. ಇಂದಿನ ಖುಷಿಗೆ ಹಣ ತಗೊಂಡು ವೋಟ್ ಹಾಕಿದರೆ, ನಾಳೆ ಸಿದ್ದರಾಮಯ್ಯ ತಿಂಗಳು ತಿಂಗಳು ಹಣ ಹಾಕುವುದನ್ನು ನಿಲ್ಲಿಸಿಬಿಡುತ್ತಾರೆ ಎಂಬ ಭಯ ಮಹಿಳೆಯರಲ್ಲಿದೆ. ಬಿಜೆಪಿ ಅಭ್ಯರ್ಥಿ ಹಣವನ್ನು ನೀರಿನಂತೆ ಚೆಲ್ಲಿದ್ದಾರೆ ಎಂಬ ವರದಿಗಳಿವೆ. ಆದರೂ ಕೂಡ ಮಹಿಳೆಯರ ಮತಗಳು ಕಾಂಗ್ರೆಸ್ ಕಡೆಗೆ ತಿರುಗಿವೆ.
2014 ಮತ್ತು 2019ರ ತುಮಕೂರು ಲೋಕಸಭಾ ಕ್ಷೇತ್ರದ ಫಲಿತಾಂಶ
2019 ರ ಚುನಾವಣೆಯಲ್ಲಿ, ಬಿಜೆಪಿ ಅಭ್ಯರ್ಥಿ ಜಿಎಸ್ ಬಸವರಾಜ್ 596,127 ಮತಗಳನ್ನು ಗಳಿಸಿ ಜಯಶೀಲರಾಗಿದ್ದರು. 582,788 ಮತಗಳನ್ನು ಗಳಿಸಿದ ಜೆಡಿಎಸ್ ಅಭ್ಯರ್ಥಿ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸೋಲು ಕಂಡಿದ್ದರು. 2014ರ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ 4,29,868 ಮತಗಳನ್ನು ಪಡೆದಿದ್ದರು. ಬಿಜೆಪಿಯ ಜಿ ಎಸ್ ಬಸವರಾಜ್ 355,827 ಮತಗಳನ್ನು ಪಡೆದರೆ, ಜೆಡಿಎಸ್‌ನ ಎ ಕೃಷ್ಣಪ್ಪ 258,683 ಮತಗಳನ್ನು ಗಳಿಸಿದ್ದರು.
-
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications