ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜಕೀಯ ನಿವೃತ್ತಿ ಘೋಷಿಸಿದ ತುಮಕೂರು ಸಂಸದ ಬಸವರಾಜು

|
Google Oneindia Kannada News

ತುಮಕೂರು, ಜನವರಿ 14: ನಾನು ಇನ್ನು ಮುಂದೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳುವ ಮೂಲಕ ರಾಜಕೀಯ ನಿವೃತ್ತಿಯನ್ನು ತುಮಕೂರು ಸಂಸದ ಜಿಎಸ್‌ ಬಸವರಾಜು ಘೋಷಿಸಿದ್ದಾರೆ.

ಮಕರ ಸಂಕ್ರಾಂತಿ ವಿಶೇಷ ಪುಟ

ತುಮಕೂರು ಜಿಲ್ಲೆ ತಿಪಟೂರಿನಲ್ಲಿ ನಡೆದ ಶ್ರೀ ಗುರುಸಿದ್ದರಾಮೇಶ್ವರರ 850ನೇ ಜಯಂತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸದ ಬಸವರಾಜು, ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಕೂಡ ಇದ್ದರು.

Kodi Mutt Seer Prediction : ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಬಗ್ಗೆ ಕೋಡಿಮಠದ ಶ್ರೀಗಳ ಭವಿಷ್ಯವಾಣಿKodi Mutt Seer Prediction : ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಬಗ್ಗೆ ಕೋಡಿಮಠದ ಶ್ರೀಗಳ ಭವಿಷ್ಯವಾಣಿ

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರ ವಿರುದ್ಧ ಗೆಲುವು ಸಾಧಿಸಿದ್ದ ಜಿಎಸ್‌ ಬಸವರಾಜು ಅವರು ನಿಮ್ಮ ಜೊತೆ ನೀರಾವರಿ ಯೋಜನೆಗಳ ಅನುಷ್ಠಾನ ಸಂದರ್ಭದಲ್ಲಿ ಇರುತ್ತೇನೆ. ಆದರೆ ಚುನಾವಣೆಗೆ ಇನ್ನೆಂದು ಸ್ಪರ್ಧೆ ಮಾಡುವುದಿಲ್ಲ ಎಂದು ತಿಳಿಸಿದರು. ಆ ಸಂದರ್ಭದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಕೂಡ ಇದ್ದರು.

Tumkur MP GS Basavaraju Basavaraju announced his political retirement

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ವಿರುದ್ಧ ಗೆಲುವು ಸಾಧಿಸಿದ್ದರು. ಇನ್ನು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿರುವ ತುಮಕೂರು ಮಾಜಿ ಸಂಸದ ಎಸ್‌ಪಿ ಮುದ್ದಹನುಮೇಗೌಡರಿಗೆ ಕುಣಿಗಲ್‌ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಕೈತಪ್ಪಿದ್ದರೆ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಎಸ್‌ಪಿಎಂ ಆಗುತ್ತಾರೆ ಎಂಬ ಚರ್ಚೆ ನಡೆಯುತ್ತಿದೆ.

ಜಿಎಸ್‌ ಬಸವರಾಜು ಅವರು ತಮ್ಮ ರಾಜಕೀಯ ಜೀವನವನ್ನು ಕಾಂಗ್ರೆಸ್‌ನೊಂದಿಗೆ ಪ್ರಾರಂಭಿಸಿದ್ದರು. ಈಗ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರಾಗಿದ್ದಾರೆ. ಅವರು 2019 ರ ಭಾರತೀಯ ಸಾರ್ವತ್ರಿಕ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸುಮಾರು 15,000 ಮತಗಳ ಅಂತರದಿಂದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನು ಸೋಲಿಸಿದ್ದರು.

ಅವರು ತುಮಕೂರಿನಿಂದ ಐದು ಬಾರಿ ಲೋಕಸಭೆಗೆ ಚುನಾಯಿತರಾಗಿದ್ದರು. 1984, 1989 ಮತ್ತು 1999 ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರಾಗಿ ಮತ್ತು 2009 ಮತ್ತು 2019 ರಲ್ಲಿ ಬಿಜೆಪಿ ಸದಸ್ಯರಾಗಿ ಆಯ್ಕೆಯಾಗಿದ್ದರು. 2004ರ ಚುನಾವಣೆಯಲ್ಲಿ ಅವರು ತುಮಕೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಅಭ್ಯರ್ಥಿಗಳ ಹಿಂದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೂರನೇ ಸ್ಥಾನ ಪಡೆದರು. ಈ ಸೋಲಿನ ನಂತರ ಅವರು ಬಿಜೆಪಿ ಸೇರಿದರು. 2014ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸೋತಿದ್ದರು.

English summary
Tumkur MP GS Basavaraju has announced his retirement from politics saying that he will not contest any election again.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X