ಕುಣಿಗಲ್‌ನಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಇಬ್ಬರು ದಾರುಣ ಸಾವು, ನಾಲ್ವರು ಗಂಭೀರ

ತುಮಕೂರು, ಮೇ 25: ನಿಂತಿದ್ದ ಬಸ್‌ಗೆ ವೇಗವಾಗಿ ಬಂದ ಟೆಪೋ ಟ್ರಾವಲ್ಸ್‌ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ಕುಣಿಗಲ್‌ ತಾಲೂಕಿನ ರಾಜ್ಯ ಹೆದ್ದಾರಿ 33 ಹುಲಿಯೂರುದುರ್ಗ ಹೋಬಳಿ ಡಿ.ಹೊಸಹಳ್ಳಿ ಗ್ರಾಮದ ಬಳಿ ನಡೆದಿದೆ.

ರಾಯಚೂರು ಜಿಲ್ಲೆ ಸಿಂಧನೂರು ನಿವಾಸಿಗಳಾದ ಟಿಟಿ ಚಾಲಕ ವೀರೇಶ್ (30) ಹಾಗೂ ಶಶಿಕಲಾ( 69) ಮೃತ ದುರದೈವಿಗಳು ಎಂದು ಗುರುತಿಸಲಾಗಿದೆ.

Two People Died After Tempo Traveller Collides Bus In Kunigal

ಮೃತ ಶಶಿಕಲಾ ಹಾಗೂ ಅವರ ಕುಟುಂಬದ 11 ಮಂದಿ ಸಿಂಧನೂರಿನಿಂದ ಮೈಸೂರು ಜಿಲ್ಲೆ ಪ್ರವಾಸಕ್ಕೆ ಬುಧವಾರ ರಾತ್ರಿ 10 ಗಂಟೆಗೆ ಹೊರಟರು, ಕುಣಿಗಲ್ ಮಾರ್ಗವಾಗಿ ಮೈಸೂರಿಗೆ ಹೊಗಬೇಕಾದರೆ ಗುರುವಾರ ಬೆಳಗ್ಗೆ ಡಿ.ಹೊಸಹಳ್ಳಿ ಗ್ರಾಮದ ಬಳಿ ನಿಂತಿದ್ದ ಖಾಸಗಿ ಬಸ್‌ಗೆ ಚಾಲಕನ ನಿಯಂತ್ರಣ ತಪ್ಪಿ ಟಿಟಿ ಗಾಡಿ ಡಿಕ್ಕಿ ಹೊಡೆದಿದೆ.

ಅಪಘಾತದ ಭೀಕರತೆಗೆ ಚಾಲಕ ವೀರೇಶ್ ಸ್ಥಳದಲ್ಲೇ ಮೃತಪಟ್ಟಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ ಶಶಿಕಲಾ ಕೊನೆಯುಸಿರೆಳೆದಿದ್ದಾರೆ. ಇನ್ನು ಘಟನೆಯಲ್ಲಿ ದಿಲೀಪ್ ಕುಮಾರ್, ಆನಂದ್ ಕುಮಾರ್, ಪ್ರಿಯಾ ಹಾಗೂ ಪ್ರತೀಕ್ಷಾ ಗಂಭೀರ ಗಾಯಗೊಂಡಿದ್ದು, ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತ ಸ್ಥಳಕ್ಕೆ ಹುಲಿಯೂರು ದುರ್ಗ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದು, ಘಟನೆಯ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

Two People Died After Tempo Traveller Collides Bus In Kunigal

ಕಲಬುರಗಿಯಲ್ಲಿ ಭೀಕರ ಅಪಘಾತ: ಯುವಕ ಸ್ಥಳದಲ್ಲೇ ಸಾವು

ಕಲಬುರಗಿ: ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸೇಡಂ ತಾಲೂಕಿನ ಕೊಡಂಗಲ್‌ನಲ್ಲಿ ನಡೆದಿದೆ. ಕಲಬುರಗಿಯ ಕುರಕುಂಟಾದ ಸಿಸಿಐ ಕಾಲೋನಿಯ ಇಂದಿರಾ ನಗರದ ನಿವಾಸಿ ಶಂಕರ್‌ ರಾಠೋಡ್‌( 30) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಮೃತ ಶಂಕರ್‌ ರಾಠೋಡ್‌ ಸೇಡಂ ಕಡೆಯಿಂದ ಕುರಕುಂಟಾದ ಕಡೆಗೆ ತೆರಳುವ ವೇಳೆ ಏಕಾಏಕಿ ವೇಗವಾಗಿ ಬಂದ ಲಾರಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಶಂಕರ್‌ ರಾಠೋಡ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಸೇಡಂ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಸ್ಥಳಾಂತರಿಸಿದ್ದಾರೆ. ಸೇಡಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+