ತುಮಕೂರು: ಸಂಕ್ರಾತಿ ಹಬ್ಬದ ದಿನವೇ ಭೀಕರ ಅಪಘಾತ, ಬೆಂಗಳೂರು ಮೂಲದ ಇಬ್ಬರು ಸ್ಥಳದಲ್ಲೇ ಸಾವು
ತುಮಕೂರು, ಜನವರಿ 15: ಅಪರಿಚಿತ ವಾಹನ ಡಿಕ್ಕಿಯಾಗಿ ಬೆಂಗಳೂರಿನ ಆವಲಹಳ್ಳಿ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿರಾ ತಾಲೂಕಿನ ಕುಂಟೇಗೌಡನಹಳ್ಳಿ ಗೇಟ್ ಬಳಿ ನಡೆದಿದೆ. ನಗರದ ಆವಲಹಳ್ಳಿ ಮೂಲದ ಚ ಮೃತ ದುರ್ದೈವಿಗಳು.
ಮಹೇಶ್ (38) ಹಾಗೂ ಉಮೇಶ್ (40) ನಿನ್ನೆ ತಡರಾತ್ರಿ ಬೆಂಗಳೂರಿನಿಂದ ಶಿರಾ ಕಡೆಗೆ ತೆರಳುತ್ತಿದ್ದರು. ಈ ವೇಳೆ ಕಾರು ಪಂಚರ್ ಆಗಿದೆ. ಹೀಗಾಗಿ ಇಬ್ಬರು ಕಾರಿನಿಂದ ಇಳಿದು ಟೈರ್ ಬದಲಿಸುತ್ತಿದ್ದರು. ಆಗ ಹಿಂಬಂದಿಯಿಂದ ಬಂದ ಅಪರಿಚಿತ ವಾಹನ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನು ಘಟನಾ ಸ್ಥಳಕ್ಕೆ ಕಳ್ಳಂಬೆಳ್ಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹೇಶ್ ಹಾಗೂ ಉಮೇಶ್ ಎರಡು ಮೃತದೇಹಗಳನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಕ್ರಾಂತಿ ದಿನವೇ ಭೀಕರ ಅಪಘಾತದಿಂದ ಇಬ್ಬರು ಸಾವನ್ನಪ್ಪಿದ್ದು, ಹಬ್ಬದ ಸಂಭ್ರಮವಿರಬೇಕಾದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಶಂಕರ್ ಹಾಗೂ ಮಹದೇವು ಮೃತ ದುರ್ದೈವಿಗಳು.
ಮೃತರು ಬೆಂಗಳೂರಿನ ಐಸಿಐಸಿಐ ಬ್ಯಾಂಕ್‌ನ ಉದ್ಯೋಗಿಗಳಾಗಿದ್ದು, ಮೂವರು ಕೆಲಸ ಮುಗಿಸಿ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಶಿಂಷಾ ನದಿ ಸೇತುವೆ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ, ಬಳಿಕ ಕ್ಯಾಮೆರಾ ಇದ್ದ ಕಂಬಕ್ಕೂ ಡಿಕ್ಕಿ ಹೊಡೆದು, ಡಿವೈಡರ್ ಪಕ್ಕದ ರಸ್ತೆಗೆ ಪಲ್ಟಿಯಾಗಿದೆ.
ಅಪಘಾತದ ಭೀಕರತೆಗೆ ಶಂಕರ್ ಹಾಗೂ ಮಹದೇವು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ. ಇನ್ನು ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಮದ್ದೂರು ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮದ್ದೂರು ಸಂಚಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications