ತುಮಕೂರು: ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ, ಮೂವರು ಸಾವು
ತುಮಕೂರು, ಜೂನ್ 05: ದ್ವಿಚಕ್ರ ಚಾಹನ ಮುಖಾಮುಖಿಯಾಗಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಣಿವೆನಹಳ್ಳಿಯಲ್ಲಿ ಮಂಗಳವಾರ ನಡೆದಿದೆ.
ವಳ್ಳೂರು ಗ್ರಾಮದ ಮುತ್ಯಾಲಪ್ಪ(27), ಆಂಧ್ರದ ತಗರಗುಂಟೆ ಗ್ರಾಮದ ಹನುಮಂತಪ್ಪ(45), ನವೀನ್ (22) ಮೃತರು. ಮತ್ತೋರ್ವ ಗಂಭೀರ ಗಾಯಗೊಂಡಿದ್ದು, ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವೆಂಕಟಾಪುರದಲ್ಲಿ ನಡೆಯುತ್ತಿದ್ದ ಮಾರಿ ಹಬ್ಬಕ್ಕೆಂದು ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಪಾವಗಡ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.












Click it and Unblock the Notifications