ಅ.22ಕ್ಕೆ ತುಮಕೂರಿನಲ್ಲಿ ಉಲುಚುಕಮ್ಮೆ ಬ್ರಾಹ್ಮಣ ಸಭಾ ಸಮಾವೇಶ

ತುಮಕೂರು, ಅಕ್ಟೋಬರ್ 17: ತುಮಕೂರು ಜಿಲ್ಲಾ ಉಲುಚುಕಮ್ಮೆ ಬ್ರಾಹ್ಮಣ ಸಭಾದಿಂದ ಇದೇ ತಿಂಗಳ 22ರ ಭಾನುವಾರದಂದು ಬೆಳಗ್ಗೆ 10ಕ್ಕೆ ನಗರದ ಬಿ.ಎಚ್.ರಸ್ತೆಯಲ್ಲಿರುವ ಶೃಂಗೇರಿ ಶಂಕರ ಮಠದಲ್ಲಿ ಉಲುಚುಕಮ್ಮೆ ಬ್ರಾಹ್ಮಣ ಸಭಾ ಬಾಂಧವರ ಸಮಾವೇಶ ಹಾಗೂ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿದೆ.

ಸಭಾದ ಗೌರವಾಧ್ಯಕ್ಷೆ ಇಂದಿರಮ್ಮ ಸುಂದರರಾವ್ ಹಾಗೂ ಅಧ್ಯಕ್ಷರಾದ ಆರ್.ವಾಸುದೇವಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಉದ್ಯಮಿ ಬಿ.ವಿ.ಜಗದೀಶ್, ಲೆಕ್ಕ ಪರಿಶೋಧಕ ಕೆ.ಎಸ್.ಮಾಧವಮೂರ್ತಿ ಹಾಗೂ ಹರಿಕಥಾ ವಿದ್ವಾಂಸರು- ಕೀರ್ತನಕಾರರಾದ ನಿಟ್ಟೂರು ಮೋಹನ್ ಕುಮಾರ್ ಅವರಿಗೆ ಸನ್ಮಾನವನ್ನು ಆಯೋಜಿಸಲಾಗಿದೆ.

Uluchukamme Brahmin convention in Tumakuru on October 22nd

ಉಲುಚುಕಮ್ಮೆ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ವಿ.ಮಂಜುನಾಥ್, ಶಂಕರ ಸೇವಾ ಸಮಿತಿಯ ಎನ್.ಶಂಕರ್, ತುಮಕೂರು ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಹಾಗೂ ಕೌನ್ಸಿಲರ್ ಎನ್.ಆರ್.ನಾಗರಾಜರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ಮೂಲಕ ತಿಳಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಬೆಳಗ್ಗೆ ಉಪಾಹಾರ ಹಾಗೂ ಮಧ್ಯಾಹ್ನ ಭೋಜನದ ವ್ಯವಸ್ಥೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+