ತುಮಕೂರಲ್ಲಿ ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ, ಕಾಲುಗಳೂ ಕಾಣೆ

ತುಮಕೂರು, ಡಿಸೆಂಬರ್ 27: ತುಮಕೂರಿನಲ್ಲೂ ದೇಶವೇ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದೆ. ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿದೆ.

ಅಪರಿಚಿತ ಮಹಿಳೆಯನ್ನು ಹತ್ಯೆ ಮಾಡಿ ಸುಟ್ಟು ಹಾಕಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ನೆಲಹಾಳ್ ಬಳಿ ಬೆಳಕಿಗೆ ಬಂದಿದೆ.ಸ್ಥಳೀಯರು ನಿರ್ಜನ ಪ್ರದೇಶದಲ್ಲಿ ಕುರಿ ಮೇಯಿಸಲು ಹೋಗಿದ್ದಾರೆ. ಆಗ ಮಹಿಳೆಯ ಶವ ಪತ್ತೆಯಾಗಿದೆ.

ನೆಲಹಾಳ್ ಸಮೀಪದ ನಿರ್ಜನ ಪ್ರದೇಶದಲ್ಲಿ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತ ದೇಹ ಪತ್ತೆಯಾಗಿದೆ. ತಕ್ಷಣ ಅವರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.

Unknown Woman Found Dead In Tumkur

ಈಗಾಗಲೇ ಮೃತ ದೇಹದ ಎದೆ ಭಾಗ, ಕಾಲುಗಳು ಸೇರಿದಂತೆ ಇತರೆ ಕಡೆ ನಾಯಿ ಮತ್ತು ಹಂದಿಗಳು ತಿಂದು ಹಾಕಿವೆ. ಹೀಗಾಗಿ ಕೊಲೆಯಾದ ಮಹಿಳೆಯ ಗುರುತು ಪತ್ತೆಯಾಗಿಲ್ಲ.
ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಎಸ್‌ಪಿ ಕೋನ ವಂಶಿಕೃಷ್ಣ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬೇರೆಡೆ ಕೊಲೆ ಮಾಡಿ ಇಲ್ಲಿ ಮೃತದೇಹ ತಂದು ಸುಟ್ಟುಹಾಕಿರುವ ಸಾಧ್ಯತೆ ಇದೆ. ಸದ್ಯಕ್ಕೆ ಈ ಕುರಿತು ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕೊಲೆಗಾರರಿಗಾಗಿ ಬಲೆ ಬೀಸಿದ್ದಾರೆ. ಮಹಿಳೆ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಕೆಲ ದಿನಗಳ ಹಿಂದಷ್ಟೇ ಹೈದರಾಬಾದಿನಲ್ಲಿ ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬಳಿಕ ಬೆಂಕಿ ಹಚ್ಚಿ ಸುಟ್ಟಿದ್ದ ಹೃದಯ ವಿದ್ರಾವಕ ಘಟನೆಯನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+