ತವರು ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದ ರೈಲ್ವೆ ಸಚಿವ ವಿ. ಸೋಮಣ್ಣ

ತುಮಕೂರು, ಜುಲೈ 16: ತುಮಕೂರು ಸಂಸದ, ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ತವರು ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ಈ ಕುರಿತು ಸಚಿವರ ಕಛೇರಿಯ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

ತುಮಕೂರು ಜಿಲ್ಲೆಯ 5 ಮೇಲ್ಸೇತುವೆಗಳಿಗೆ ಅನುಮೋದನೆ ನೀಡಲಾಗಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ ವಿ. ಸೋಮಣ್ಣ ಕೇಂದ್ರದಲ್ಲಿ ಜಲ ಶಕ್ತಿ ಮತ್ತು ರೈಲ್ವೆ ಖಾತೆಯ ರಾಜ್ಯ ಸಚಿವರಾಗಿ ಪ್ರಧಾನಿ ನರೇಂದ್ರ ಮೋದಿ ಸಂಪುಟ ಸೇರಿದ್ದಾರೆ.

V Somanna Gifted 5 Railway Over Bridges To Tumakuru

ಜುಲೈ 15ರಂದು ರೈಲ್ವೆ ಸಚಿವಾಲಯ ತುಮಕೂರು ಜಿಲ್ಲೆಯ 5 ಮೇಲ್ಸೇತುವೆಗಳಿಗೆ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. 350 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ 5 ಮೇಲ್ಸೇತುವೆಗಳ ಕಾಮಗಾರಿಯನ್ನು ಇಲಾಖೆ ಕೈಗೆತ್ತಿಕೊಳ್ಳಲಿದೆ.

ಇದರ ಸಂಪೂರ್ಣ ವೆಚ್ಚವನ್ನು ರೈಲ್ವೆ ಇಲಾಖೆ ಭರಿಸಲಿದ್ದು, ರಾಜ್ಯಸರ್ಕಾರದ ಯಾವುದೇ ಪಾಲು ಇರುವುದಿಲ್ಲವೆಂದು ಸಚಿವರ ಕಛೇರಿ ಪ್ರಕಟಣೆ ತಿಳಿಸಿದೆ. ಯಾವ-ಯಾವ ಸೇತುವೆಗಳು ಎಂದು ಮಾಹಿತಿ ನೀಡಲಾಗಿದೆ.

ಮೇಲ್ವೇತುವೆ ನಿರ್ಮಾಣದ ಸ್ಥಳಗಳು: ಕ್ಯಾತಸಂದ್ರ ನಿಲ್ದಾಣ-ಮೈದಾಳ ಗೇಟ್ ನಡುವೆ ಮೇಲ್ಸೇತುವೆ.(ಎಲ್.ಸಿ. 35). ಯೋಜನಾ ವೆಚ್ಚ 57.3 ಕೋಟಿ ರೂ.ಗಳು. ಬಡ್ಡಿಹಳ್ಳಿ ಗೇಟ್ ಅಗ್ನಿಶಾಮಕ ದಳದ ಬಳಿ (ಎಲ್.ಸಿ.38), 89.03 ಕೋಟಿ ರೂ.ಗಳು.

ಬಟ್ಟವಾಡಿ ಗೇಟ್ (ಎಲ್.ಸಿ.39) ಮೇಲ್ಸೇತುವೆ. ಯೋಜನಾ ವೆಚ್ಚ 97.69 ಕೋಟಿ. ರೂ.ಗಳು.
ಹರೆಯೂರು ರಸ್ತೆ (ಮಲ್ಲಸಂದ್ರ ಗೇಟ್) (ಎಲ್.ಸಿ.46) 55.99 ಕೋಟಿ ರೂ.ಗಳು. ತುಮಕೂರು ಮೈಸೂರು ರಸ್ತೆಯ ನಿಟ್ಟೂರು ರೈಲು ನಿಲ್ದಾಣ ಹತ್ತಿರ (ಎಲ್.ಸಿ.58) 50.57 ಕೋಟಿ ರೂ.ಗಳು.

ಈ ಮೇಲ್ಸೇತುವೆಗಳ ನಿರ್ಮಾಣದಿಂದ ರಸ್ತೆ ಹಾಗೂ ರೈಲು ಸಾರಿಗೆ ಇನ್ನಷ್ಟು ಸುಗಮವಾಗಿಲಿದೆ ಮತ್ತು ಸುರಕ್ಷಿತವಾಗಲಿದೆ. ಈ ಕಾಮಗಾರಿಗಳಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಅಗತ್ಯ ಕ್ರಮಕೈಗೊಂಡು ಅತೀ ಶೀಘ್ರದಲ್ಲಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಈ ಸೌಲಭ್ಯವನ್ನು ರಾಜ್ಯದ ಜನತೆಗೆ ಒದಗಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಖಾತೆಯ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮತ್ತು ಇಲಾಖೆಯ ಅಧಿಕಾರಿಗಳಿಗೆ ತುಂಬು ಹೃದಯದ ಧನ್ಯವಾದಗಳನ್ನು ಕೇಂದ್ರ ಸಚಿವ ಸೋಮಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆಲವು ರೈಲು ಯೋಜನೆಗಳನ್ನು ರಾಜ್ಯ, ಕೇಂದ್ರ ಸರ್ಕಾರದ ವೆಚ್ಚ ಹಂಚಿಕೆಯ ಆಧಾರದ ಮೇಲೆ ಕೈಗೊಳ್ಳಲಾಗುತ್ತದೆ. ಆದರೆ ತುಮಕೂರು ಕ್ಷೇತ್ರದ 5 ಯೋಜನೆಗಳ ವೆಚ್ಚವನ್ನು ರೈಲ್ವೆ ಇಲಾಖೆಯೇ ಭರಿಸಲಿದೆ, ರಾಜ್ಯ ಸರ್ಕಾರದ ಯಾವುದೇ ಅನುದಾನ ನೀಡುತ್ತಿಲ್ಲ.

ಆದರೆ 2024ರ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಅವಕಾಶ ನೀಡಿತು. ಚುನಾವಣೆಯಲ್ಲಿ ಅವರು 7,20,946 ಮತಗಳನ್ನು ಪಡೆದು ಕಾಂಗ್ರೆಸ್‌ನ ಎಸ್. ಪಿ. ಮುದ್ದಹನುಮೇಗೌಡ ಸೋಲಿಸಿ ಸಂಸದರಾಗಿ ಆಯ್ಕೆಯಾದರು. ಪ್ರಧಾನಿ ನರೇಂದ್ರ ಮೋದಿ 3.0 ಸಂಪುಟದಲ್ಲಿ ಅವರಿಗೆ ಸಚಿವ ಸ್ಥಾನವನ್ನು ನೀಡಲಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+