• search
  • Live TV
ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪರಂ ವರ್ಸಸ್ ಕೆಎನ್ ಆರ್ ಬೆಂಬಲಿಗರು; ತುಮಕೂರಲ್ಲಿ ಕಾಂಗ್ರೆಸ್ ಕೊತಕೊತ

By ಕುಮಾರಸ್ವಾಮಿ
|

ತುಮಕೂರು, ಜೂನ್ 3: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣ ಬೆಂಬಲಿಗರ ಮಧ್ಯೆ ಆರೋಪ-ಪ್ರತ್ಯಾರೋಪ ಗಂಭೀರ ಸ್ವರೂಪವನ್ನು ತಲುಪಿದೆ. ತುಮಕೂರು ಜಿಲ್ಲಾ ಕಾಂಗ್ರೆಸ್​ನಲ್ಲಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಆರ್.ರಾಜೇಂದ್ರ ಅವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ 10 ಪರ್ಸೆಂಟ್ ಗಿರಾಕಿ ಎಂದು ಆರೋಪ ಮಾಡಿದ್ದಾರೆ.

ತುಮಕೂರಿನಲ್ಲಿ ರಾಜಣ್ಣ ಹಾಗೂ ಮಗನ ವಿರುದ್ಧ ಸಿಡಿದೆದ್ದ ಜೆಡಿಎಸ್- ಒಕ್ಕಲಿಗರು

ಸುದ್ದಿಗಾರರೊಂದಿಗೆ ಮಾತನಾಡಿದ ರಾಜೇಂದ್ರ, ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ​ನಿಂದ ಹಣ ಪಡೆದು, ಅದರಲ್ಲಿ 10 ಪರ್ಸೆಂಟ್ ತಾನು ಇಟ್ಟುಕೊಂಡು ಹಂಚಿದ್ದಾನೆ. ಅಲ್ಲದೆ ಇತ್ತೀಚಿಗೆ ನಡೆದ ಪಾಲಿಕೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಿಂದ ಹಣ ಪಡೆದು, ಟಿಕೆಟ್ ಕೊಟ್ಟಿದ್ದಾನೆ ಎಂದು ಆರೋಪಿಸಿದರು.

ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಆರ್.ರಾಜೇಂದ್ರ ಮಾತನಾಡಿ, ಜಿಲ್ಲಾಧ್ಯಕ್ಷ ಸ್ಥಾನದಿಂದ ರಾಮಕೃಷ್ಣರನ್ನು ಬದಲಾಯಿಸಿದರೆ ಎಲ್ಲವೂ ಸರಿಹೋಗಲಿದೆ. ಮೈತ್ರಿ ಅಭ್ಯರ್ಥಿ ಸೋಲಿಗೆ ರಾಜಣ್ಣ ಕಾರಣ ಎಂದು ಆರೋಪಿಸುತ್ತಿದ್ದಾರೆ. ಹಾಗಾದರೆ ಕೋಲಾರದಲ್ಲಿ ಮೈತ್ರಿ ಅಭ್ಯರ್ಥಿ ಸೋಲಲಿಲ್ಲವೇ? ಚಿಕ್ಕಬಳ್ಳಾಪುರದಲ್ಲಿ ಮೈತ್ರಿ ಅಭ್ಯರ್ಥಿ ವೀರಪ್ಪ ಮೊಯಿಲಿ ಸೋಲಲಿಲ್ಲವೇ ಎಂದು ಪ್ರಶ್ನಿಸಿದರು. ಹಾಗಾದರೆ ಅಲ್ಲಿಯ ಕಾಂಗ್ರೆಸ್ ಮುಖಂಡರ ಮೇಲೂ ಕ್ರಮ ಕೈಗೊಳ್ಳುತ್ತಾರಾ ಎಂದು ಪ್ರಶ್ನಿಸಿದ್ದಾರೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
After lok sabha elections results war of words between KN Rajanna and G Parameshwar supporters continued in Tumakuru. Here is the latest one.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more