ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಮಕೂರು ಬಿಜೆಪಿ ಅಭ್ಯರ್ಥಿ ಆಯ್ಕೆ : ಅಮಿತ್‌ ಶಾ ಕೈಗೆ ವರದಿ!

|
Google Oneindia Kannada News

Recommended Video

lok sabha election 2019: ತುಮಕೂರು ಬಿಜೆಪಿ ಅಭ್ಯರ್ಥಿ ಆಯ್ಕೆ : ಅಮಿತ್‌ ಶಾ ಕೈಗೆ ವರದಿ! | Oneindia Kannada

ತುಮಕೂರು, ಮಾರ್ಚ್ 20 : ತುಮಕೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರು?. ಅಭ್ಯರ್ಥಿಯನ್ನು ಅಂತಿಮಗೊಳಿಸಲು ಬಿಜೆಪಿ ಎದುರಾಳಿ ಯಾರು? ಎನ್ನುವುದನ್ನು ಕಾದು ನೋಡುತ್ತಿದೆ. ಏಪ್ರಿಲ್ 18ರಂದು ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.

ದೆಹಲಿಯಲ್ಲಿ ಮಂಗಳವಾರ ಬಿಜೆಪಿ ಚುನಾವಣಾ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ತುಮಕೂರು ಕ್ಷೇತ್ರದ ಬಗ್ಗೆ ವಿವರವಾದ ಚರ್ಚೆ ನಡೆಯಿತು. ಯಾರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಬೇಕು ಎಂಬ ಗೊಂದಲ ಇನ್ನೂ ಮುಂದುವರೆದಿದೆ.

ದೇವೇಗೌಡರು ಸ್ಪರ್ಧೆ ಮಾಡಿದರೆ ಹೆದರುವುದಕ್ಕೆ ನಾನು ಸೀರೆ ಉಟ್ಟಿಲ್ಲ: ಜಿಎಸ್ ಬಿದೇವೇಗೌಡರು ಸ್ಪರ್ಧೆ ಮಾಡಿದರೆ ಹೆದರುವುದಕ್ಕೆ ನಾನು ಸೀರೆ ಉಟ್ಟಿಲ್ಲ: ಜಿಎಸ್ ಬಿ

ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಜಿ.ಎಸ್.ಬಸವರಾಜ್, ಬಿ.ಸುರೇಶ್ ಗೌಡ ಮತ್ತು ಎಂ.ಆರ್.ಹುಲಿನಾಯ್ಕರ್ ಅವರ ಹೆಸರುಗಳನ್ನು ಅಂತಿಮಗೊಳಿಸಿ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗಿದೆ. ಆದರೆ, ಅಭ್ಯರ್ಥಿ ಯಾರು? ಎಂಬುದು ಅಂತಿಮವಾಗಿಲ್ಲ.

ದೇವೇಗೌಡರಿಗೆ ಗಂಗೆ ಶಾಪ ಇದೆ, ತುಮಕೂರಲ್ಲಿ ಸ್ಪರ್ಧಿಸಿದರೆ ಸೋಲು ಖಚಿತ: ಸುರೇಶ್ ಗೌಡದೇವೇಗೌಡರಿಗೆ ಗಂಗೆ ಶಾಪ ಇದೆ, ತುಮಕೂರಲ್ಲಿ ಸ್ಪರ್ಧಿಸಿದರೆ ಸೋಲು ಖಚಿತ: ಸುರೇಶ್ ಗೌಡ

ತುಮಕೂರು ಕ್ಷೇತ್ರದ ಹಾಲಿ ಸಂಸದರು ಕಾಂಗ್ರೆಸ್‌ನ ಮುದ್ದ ಹನುಮೇಗೌಡ. ಆದರೆ, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಪಕ್ಷ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಎಚ್.ಡಿ.ದೇವೇಗೌಡರು ತುಮಕೂರಿನಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ...

ತುಮಕೂರು ಕೈತಪ್ಪಿದ್ದಕ್ಕೆ ಪರಮೇಶ್ವರ್ ಗರಂ, ಸಭೆಯಿಂದ ದೂರತುಮಕೂರು ಕೈತಪ್ಪಿದ್ದಕ್ಕೆ ಪರಮೇಶ್ವರ್ ಗರಂ, ಸಭೆಯಿಂದ ದೂರ

ಅಮಿತ್ ಶಾ ಕೈಗೆ ವರದಿ

ಅಮಿತ್ ಶಾ ಕೈಗೆ ವರದಿ

ಪಕ್ಷ, ಸಂಘ ಪರಿವಾರ ಮತ್ತು ಸಂಸ್ಥೆಯೊಂದರಿಂದ ಯಾರಿಗೆ ಟಿಕೆಟ್ ನೀಡಬೇಕು ಎಂದು ರಾಜ್ಯದ 28 ಕ್ಷೇತ್ರದಲ್ಲಿಯೂ ಬಿಜೆಪಿ ಸಮೀಕ್ಷೆ ಮಾಡಿಸಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಕೈಗೆ ಮೂರು ಸಮೀಕ್ಷೆಗಳ ವರದಿ ಹೋಗಿದೆ. ಅವರು ತುಮಕೂರಿನಲ್ಲಿ ಯಾರು ಅಭ್ಯರ್ಥಿ? ಎಂದು ತೀರ್ಮಾನ ಕೈಗೊಳ್ಳಲಿದ್ದಾರೆ.

ಲೆಕ್ಕಾಚಾರವೇನು?

ಲೆಕ್ಕಾಚಾರವೇನು?

ಜಾತಿ ಆಧಾರದ ಮೇಲೆ ಲಿಂಗಾಯತರು, ಒಕ್ಕಲಿಗರು, ಕುರುಬರು ಇವರಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂಬ ಲೆಕ್ಕಾಚಾರ ನಡೆಯುತ್ತಿದೆ. ಸಮೀಕ್ಷೆಗಳ ವರದಿಯನ್ನು ಆಧರಿಸಿ ಯಾರನ್ನು ಅಭ್ಯರ್ಥಿ ಮಾಡಬೇಕು? ಎಂದು ತೀರ್ಮಾನಿಸಲಾಗುತ್ತದೆ.

ಇಬ್ಬರ ಹೆಸರು ಮುಂಚೂಣಿಯಲ್ಲಿ

ಇಬ್ಬರ ಹೆಸರು ಮುಂಚೂಣಿಯಲ್ಲಿ

ಜಿ.ಎಸ್.ಬಸವರಾಜ್, ಬಿ.ಸುರೇಶ್ ಗೌಡ ಮತ್ತು ಎಂ.ಆರ್.ಹುಲಿನಾಯ್ಕರ್ ಅವರ ಹೆಸರುಗಳನ್ನು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗಿದೆ. ಆದರೆ, ಜಿ.ಎಸ್.ಬಸವರಾಜ್ ಮತ್ತು ಬಿ.ಸುರೇಶ್ ಗೌಡ ಅವರ ಹೆಸರು ಮುಂಚೂಣಿಯಲ್ಲಿದೆ.

ದೇವೇಗೌಡರ ನಡೆ ಏನು?

ದೇವೇಗೌಡರ ನಡೆ ಏನು?

ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬಿಟ್ಟುಕೊಟ್ಟಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದು ಇನ್ನೂ ಅಂತಿಮವಾಗಿಲ್ಲ. ಪಕ್ಷದ ಮೂಲಗಳ ಮಾಹಿತಿ ಪ್ರಕಾರ ಅವರು ತುಮಕೂರಿನಿಂದ ಕಣಕ್ಕಿಳಿಯಲಿದ್ದಾರೆ. ಗುರುವಾರ ಅವರು ಈ ಕುರಿತು ಅಂತಿಮ ಘೋಷಣೆ ಮಾಡಲಿದ್ದಾರೆ.

2014ರ ಫಲಿತಾಂಶ

2014ರ ಫಲಿತಾಂಶ

2014ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮುದ್ದಹನುಮೇಗೌಡ ಅವರು 429868 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿ ಅಭ್ಯರ್ಥಿಯಾಗಿದ್ದ ಜಿ.ಎಸ್.ಬಸವರಾಜ್ ಅವರು 355827 ಮತ ಪಡೆದಿದ್ದರು. ಜೆಡಿಎಸ್‌ನ ಎ.ಕೃಷ್ಣಪ್ಪ ಅವರು 258683 ಮತ ಪಡೆದಿದ್ದರು.

English summary
3 leaders name in the race for Tumakuru BJP ticket for Lok sabha elections 2019. BJP will final name after Congress and JD(S) announced the candidate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X