ವಿಶ್ವದ ಅತಿದೊಡ್ಡ ಸೋಲಾರ್ ಪಾರ್ಕ್: ಮಾರ್ಚ್ 1ಕ್ಕೆ ಕಾರ್ಯಾರಂಭ

ತುಮಕೂರು, ಫೆಬ್ರವರಿ 28 : ಪಾವಗಡ ತಾಲೂಕಿನಲ್ಲಿ ನಿರ್ಮಿಸಲಾಗಿರುವ ವಿಶ್ವದ ಬೃಹತ್ ಸೋಲಾರ್ ಪಾರ್ಕ್ ಮಾರ್ಚ್ 1 ರಂದು ಉದ್ಘಾಟನೆಗೊಳ್ಳಲಿದೆ.

ಮೊದಲ ಹಂತದ ತಿರುಮಣಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ 600 ಮೆಗಾವ್ಯಾಟ್ ಸೌರ ವಿದ್ಯುತ್ ಉತ್ಪಾದನಾ ಘಟಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂದು ಬೆಳಗ್ಗೆ 11 ಗಂಟೆಗೆ ಚಾಲನೆ ನೀಡಲಿದ್ದಾರೆ.

ತಿರುಮಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಯಚರ್ಲು, ವಳ್ಳೂರು ಗ್ರಾಪಂ ವ್ಯಾಪ್ತಿಯ ವೆಂಕಟಮ್ಮನಹಳ್ಳಿ, ಕ್ಯಾತಗಾನಚೆರ್ಲು ಬಳಸಮುದ್ರ ಸೇರಿ ಒಟ್ಟು 5 ಗ್ರಾಮಗಳ 13, 000 ಎಕರೆ ಪ್ರದೇಶದಲ್ಲಿ ಕೇಂದ್ರ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ಸಹಯೋಗದಲ್ಲಿ 2,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸೌರಶಕ್ತಿ ಘಟಕ ಸ್ಥಾಪಿಸುವ ಗುರಿ ಹೊಂದಿದೆ.

Worlds biggest Solar park operations from tomorrow in Karnataka

ಈ ಪಾರ್ಕ್ 15 ಸಾವಿರ ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, ರೈತರಿಂದ 25 ವರ್ಷಗಳ ಕಾಲ ಗುತ್ತಿಗೆ ಆಧಾರದ ಮೇಲೆ ಭೂಮಿಯನ್ನು ಪಡೆಯಲಾಗಿದೆ. ಸತತ 40 ವರ್ಷಗಳಿಂದ ಬರಗಾಲಕ್ಕೆ ತುತ್ತಾಗಿರುವ ಪಾವಗಡದಲ್ಲಿ ಸ್ಥಳೀಯವಾಗಿ ಸಂಪನ್ಮೂಲ ಕ್ರೋಢೀಕರಿಸಬೇಕೆಂಬ ಉದ್ದೇಶದಿಂದ ಈ ಪಾರ್ಕ್ ನಿರ್ಮಿಸಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+