ಪಿಎನ್ ಬಿ ವಂಚನೆಗೆ ಕೇಂದ್ರದ ಕುಮ್ಮಕ್ಕು, ಯುವ ಕಾಂಗ್ರೆಸ್ ನಿಂದ ಸಂಪು

ತುಮಕೂರು, ಫೆಬ್ರವರಿ 27: ಇಲ್ಲಿನ ಬಿ.ಎಚ್.ರಸ್ತೆಯಲ್ಲಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಎದುರು ಮಂಗಳವಾರ ಯುವ ಕಾಂಗ್ರೆಸ್ ನ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬ್ಯಾಂಕ್ ಗೆ ಸಾವಿರಾರು ಕೋಟಿ ರುಪಾಯಿ ವಂಚನೆ ಮಾಡಿದ ಉದ್ಯಮಿ ನೀರವ್ ಮೋದಿ ಹಾಗೂ ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ವಿರುದ್ಧ ಘೋಷಣೆ ಕೂಗಿದರು.

ಕೇಂದ್ರ ಸರಕಾರದ ಕುಮ್ಮಕ್ಕಿನಿಂದಲೇ ಹೀಗೆ ಸಾವಿರಾರು ಕೋಟಿ ರುಪಾಯಿಯ ವಂಚನೆ ಮಾಡಲಾಗಿದೆ ಎಂದು ಆರೋಪಿಸಿದ ಪ್ರತಿಭಟನಾನಿರತರು, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕೂಡ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬ್ಯಾಂಕ್ ನ ಎದುರು ನೀರವ್ ಮೋದಿಯ ಭಾವಚಿತ್ರವನ್ನು ಸುಟ್ಟು ಪ್ರತಿಭಟನೆ ನಡೆಸಿದರು.

ಸರಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಹತ್ತು ಸಾವಿರ ಕೋಟಿಗೂ ಹೆಚ್ಚು ವಂಚನೆ ಆಗಿದೆ ಎಂಬ ಅಂಶ ಇತ್ತೀಚೆಗೆ ಬೆಳಕಿಗೆ ಬಂದಿತು. ಈ ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸಿದ್ದು, ವಜ್ರದ ವ್ಯಾಪಾರಿ ನೀರವ್ ಮೋದಿ ಹಾಗೂ ಪಿಎನ್ ಬಿಯ ಹಲವರ ವಿರುದ್ಧ ದೂರು ದಾಖಲಾಗಿದೆ.

Youth Congress protest against PNB in Tumakuru

ಬ್ಯಾಂಕ್ ನ ಜನರಲ್ ಮ್ಯಾನೇಜರ್ ಹುದ್ದೆಯಲ್ಲಿರುವವರು ಸೇರಿದಂತೆ ನಿವೃತ್ತ ಹಾಗೂ ಉದ್ಯೋಗಿಗಳನ್ನು ಬಂಧಿಸಲಾಗಿದೆ. ಈ ವಂಚನೆಯ ಪ್ರಕರಣ ಆಳ-ಅಗಲ ಬಹಳ ಇದೆ ಎಂಬ ಗುಮಾನಿ ಇರುವುದರಿಂದ ಮಂಗಳವಾರ ಪಿಎನ್ ಬಿ ಷೇರುಗಳ ಬೆಲೆಯಲ್ಲಿ ಶೇಕಡ 12ರಷ್ಟು ಕುಸಿತ ಕಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+