ತುಮಕೂರು ನಗರದಲ್ಲಿ ಸ್ಥಾಪನೆಯಾಗಲಿದೆ 4 ಇಂದಿರಾ ಕ್ಯಾಂಟೀನ್

Posted By: Gururaj
Subscribe to Oneindia Kannada

ತುಮಕೂರು, ಅಕ್ಟೋಬರ್ 25 : ಕರ್ನಾಟಕ ಸರ್ಕಾರ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುತ್ತದೆ ಎಂದು ಘೋಷಣೆ ಮಾಡಿದೆ. ತುಮಕೂರು ನಗರದಲ್ಲಿ 4 ಕಡೆ ಇಂದಿರಾ ಕ್ಯಾಂಟೀನ್ ನಿರ್ಮಾಣಗೊಳ್ಳಲಿದೆ.

ತುಮಕೂರು ಮಹಾನಗರ ಪಾಲಿಕೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರ ನಗರದಲ್ಲಿ ಎಲ್ಲಿ ಕ್ಯಾಂಟೀನ್ ನಿರ್ಮಾಣ ಮಾಡಬಹುದು? ಎಂದು ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿವೆ. ಗುರುತಿಸಿರುವ ಸ್ಥಳಕ್ಕೆ ಸರ್ಕಾರ ಒಪ್ಪಿಗೆ ಸೂಚಿಸಿದರೆ ಕ್ಯಾಂಟೀನ್ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗುತ್ತದೆ.

ರಾಜ್ಯಾದ್ಯಂತ 246 ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಒಪ್ಪಿಗೆ

4 Indira canteen to set up at Tumakuru

ಈಗಾಗಲೇ ಬೆಂಗಳೂರು ನಗರದಲ್ಲಿ ಇಂದಿರಾ ಕ್ಯಾಂಟೀನ್ ಯೋಜನೆ ಯಶಸ್ವಿಯಾಗಿದೆ. 5 ರೂ.ಗೆ ಬೆಳಗಿನ ಉಪಹಾರ, 10 ರೂ.ಗೆ ಊಟ ನೀಡಲಾಗುತ್ತಿದೆ. ತುಮಕೂರು ನಗರದಲ್ಲಿನ 4 ಕ್ಯಾಂಟೀನ್‌ಗಳಲ್ಲಿ ಕನಿಷ್ಠ 1000 ಜನರಿಗೆ ಊಟ, ಉಪಹಾರ ಪೂರೈಸಿದರೆ ಅನುಕೂಲವಾಗುತ್ತದೆ ಎಂಬುದು ಜನರ ಅಭಿಪ್ರಾಯವಾಗಿದೆ.

ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪನೆ

ಜನಸಂದಣಿ ಇರುವ ಪ್ರದೇಶ, ನಿವೇಶನ, ಕಟ್ಟಡ ಲಭ್ಯವಿರುವ ಪ್ರದೇಶ ಹೀಗೆ ವಿವಿಧ ವಿಷಯಗಳ ಆಧಾರದ ಮೇಲೆ ಸಮೀಕ್ಷೆ ನಡೆಸಿ 4 ಕ್ಯಾಂಟೀನ್ ನಿರ್ಮಾಣಕ್ಕೆ ಸ್ಥಳಗಳನ್ನು ಅಂತಿಮಗೊಳಿಸಲಾಗಿದೆ. ಸರ್ಕಾರ ಇದಕ್ಕೆ ಒಪ್ಪಿದರೆ ಮುಂದಿನ ಕೆಲಸಗಳು ಆರಂಭವಾಗಲಿವೆ.

ಇಂದಿರಾ ಕ್ಯಾಂಟೀನ್ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ ಮಾರ್ಷಲ್!

ಕರ್ನಾಟಕ ಸರ್ಕಾರ ಪ್ರತಿ ಜಿಲ್ಲೆ ಮತ್ತು ತಾಲೂಕು ಕೇಂದ್ರದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲು ಒಪ್ಪಿಗೆ ನೀಡಿದೆ. 2018ರ ಜನವರಿ 1ರಂದು 246 ಕ್ಯಾಂಟೀನ್‌ಗಳು ರಾಜ್ಯಾದ್ಯಂತ ಬಾಗಿಲು ತೆರೆಯಲಿವೆ. ನವೆಂಬರ್ 17ರೊಳಗೆ ಸ್ಥಳಗಳನ್ನು ಗುರುತಿಸುವಂತೆ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka government approved to open Indira Canteens across the state. 4 Indira canteen will come up at Tumakuru city. Canteens operational from 1st Jan 2018.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ