ತುಮಕೂರು: ಬಾಲಕಿಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ಸಾವು

Posted By:
Subscribe to Oneindia Kannada

ತುಮಕೂರು, ಜನವರಿ 01: ಇಂದು (ಜನವರಿ 1) ಹೊಸ ವರ್ಷ ಹಿನ್ನೆಲೆಯಲ್ಲಿ ಒಳ್ಳೆಯದಾಗಲಿ ಎಂದು ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ತೆರಳುತ್ತಿದ್ದವರು ಮಸಾಣ ಸೇರಿದ್ದಾರೆ.

ಕಾರಿಗೆ ಅಡ್ಡ ಬಂದ ಬಾಲಕಿಯನ್ನು ಉಳಿಸಲು ಹೋಗಿ ಒಂದೇ ಕುಟುಂಬದ ಐದು ಜನರು ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಗವಿಮಠದ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ.

5 killed and 3 injured as car rams into canter at Kunigal in Tumakuru

ಸಿದ್ದೋಜಿರಾವ್, ಉಷಾಭಾಯಿ, ಕೀರ್ತನಾ, ಹಿತೇಶ್, ಭುವನಾ ಮೃತ ದುರ್ದೈವಿಗಳು. ಕಾರಿಗೆ ಅಡ್ಡ ಬಂದ ಬಾಲಕಿಯನ್ನು ರಕ್ಷಿಸಲು ಹೋಗಿ ನಿಂತಿದ್ದ ಟ್ಯಾಂಕರ್ ಹಿಂಬದಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಒಂದೇ ಕುಟಂಬದ ಐವರು ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

ಇಂದು ಹೊಸ ವರ್ಷ ಹಿನ್ನೆಲೆಯಲ್ಲಿ ಕೊರಟಗೆರೆಯ ಗೊರವನಹಳ್ಳಿ ಲಕ್ಷ್ಮೀ ದೇವಸ್ಥಾನನಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಕುಣಿಗಲೆ ಪೊಲೀಸ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
5 killed and 3 injured as car rams into canter at Kunigal in Tumakuru, on january 01.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ