ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಆಸಿಡ್‌ ದಾಳಿ, 25 ಜನ ಗಾಯಾಳು

By Manjunatha
|
Google Oneindia Kannada News

ತುಮಕೂರು, ಸೆಪ್ಟೆಂಬರ್ 03: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆದ್ದು ವಿಜಯೋತ್ಸವ ಆಚರಿಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಆಸಿಡ್ ದಾಳಿ ನಡೆದಿದೆ.

ತುಮಕೂರು ನಗರಸಭೆ ಚುನಾವಣೆಗೆ 16ನೇ ವಾರ್ಡ್‌ನಿಂದ ಸ್ಪರ್ಧಿಸಿದ್ದ ಅಭ್ಯರ್ಥಿ ಇನಾಯತ್‌-ಉಲ್ಲಾ-ಖಾನ್‌ ಗೆದ್ದ ಕಾರಣ ಅದರ ವಿಜಯೋತ್ಸವ ಆಚರಿಸುತ್ತಿದ್ದ ವೇಳೆ ಏಕಾಏಕಿ ಗುಂಪಿನ ಮೇಲೆ ಆಸಿಡ್ ದಾಳಿ ನಡೆದಿದೆ.

LIVE: ಮೈಸೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಾಧ್ಯತೆLIVE: ಮೈಸೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಾಧ್ಯತೆ

ಹಠಾತ್ತನೆ ನಡೆದ ಆಸಿಡ್ ದಾಳಿಯಿಂದ ಕನಿಷ್ಟ 25 ಕಾರ್ಯಕರ್ತರು ಗಾಯಗೊಂಡಿದ್ದಾರೆ. ಎಲ್ಲರನ್ನೂ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Acid attack on congress party workers in Tumkur

ಬೈಕಿನಲ್ಲಿ ಬಂದ ಯಾರೋ ಇಬ್ಬರು ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಗುಂಪಿನತ್ತ ಆಸಿಡ್ ಎಸೆದರು ಎಂದು ಹೇಳಲಾಗುತ್ತಿದೆ.

ಸ್ಥಳೀಯ ಸಂಸ್ಥೆ ಚುನಾವಣೆ : ಕಾಂಗ್ರೆಸ್‌ ದೊಡ್ಡ ಪಕ್ಷ, ಬಿಜೆಪಿಗೆ 2ನೇ ಸ್ಥಾನ!ಸ್ಥಳೀಯ ಸಂಸ್ಥೆ ಚುನಾವಣೆ : ಕಾಂಗ್ರೆಸ್‌ ದೊಡ್ಡ ಪಕ್ಷ, ಬಿಜೆಪಿಗೆ 2ನೇ ಸ್ಥಾನ!

Acid attack on congress party workers in Tumkur

ಎಸೆದದ್ದು ಆಸಿಡ್ ಅನ್ನೋ ಅಥವಾ ಬೇರೆ ರಾಸಾಯನಿಕವನ್ನೋ ಎಂಬುದು ಖಾತ್ರಿಯಾಗಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸೋತ ಬಿಜೆಪಿ ಅಭ್ಯರ್ಥಿಯ ಬೆಂಬಲಿಗರು ಹೀಗೆ ಮಾಡಿರಬಹುದು ಎಂದು ಗಾಯಗೊಂಡ ಕಾಂಗ್ರೆಸ್ ಕಾರ್ಯಕರ್ತರು ಅನುಮಾನ ವ್ಯಕ್ತಪಡಿಸಿದ್ದಾರೆ.

English summary
Acid attack on congress party workers in Tumkur, who were celebrating their candidate's win in local elections. 25 party workers were injured. police started investigation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X