ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅವಹೇಳನಕಾರಿ ಹೇಳಿಕೆ ನೀಡುವ ಎಲ್ಲರ ವಿರುದ್ಧ ಕ್ರಮ: ಪರಮೇಶ್ವರ್‌

|
Google Oneindia Kannada News

ತುಮಕೂರು, ನವೆಂಬರ್ 14: ಟಿಪ್ಪು ಜಯಂತಿ ವಿರುದ್ಧ ಮಾತನಾಡಿದ ಪತ್ರಕರ್ತ ಸಂತೋಶ್ ತಮ್ಮಯ್ಯ ಬಂಧನದ ಬಗ್ಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ನಾವು ಯಾರನ್ನೂ ಟಾರ್ಗೆಟ್ ಮಾಡಿಲ್ಲ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪು ಜಯಂತಿ ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮ ಅದರ ಬಗ್ಗೆ ಯಾರು ಬೇಕಾದರೂ ಟೀಕೆ ಟಿಪ್ಪಣಿ ಮಾಡಬಹುದು ಆದರೆ ಅವಹೇಳನಕಾರಿಯಾಗಿ ಮಾತನಾಡುವುದು ಸರಿ ಅಲ್ಲ ಎಂದಿದ್ದಾರೆ.

ಪರಂ, ಎಚ್ ಡಿಕೆ ವಿರುದ್ಧ ಮೈಸೂರಲ್ಲಿ ಕಿಡಿ ಕಾರಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ಪರಂ, ಎಚ್ ಡಿಕೆ ವಿರುದ್ಧ ಮೈಸೂರಲ್ಲಿ ಕಿಡಿ ಕಾರಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್

ಯಾರೇ ಅವಹೇಳನಕಾರಿಯಾಗಿ ಮಾತನಾಡಿದರೂ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ನಾವೇ ಸೂಚಿಸಿದ್ದೆವು, ಅದರಂತೆ ಪೊಲೀಸರು ಕಾರ್ಯ ನಿರ್ವಹಿಸುತ್ತಿದ್ದಾರೆ, ಆದರೆ ನಾವು ಯಾರನ್ನೂ ಉದ್ದೇಶಪೂರ್ವಕವಾಗಿ ಟಾರ್ಗೆಟ್ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

Action against everyone who talk derogatory: Parameshwar

ಭಗವಾನ್‌ ಅವರು ಹಿಂದೂ ದೇವರುಗಳ ಬಗ್ಗೆ ಅವಮಾನಕರ ರೀತಿಯಲ್ಲಿ ಮಾತನಾಡುತ್ತಿರುವ ಬಗ್ಗೆ ಮಾತನಾಡಿದ ಅವರು, ಅವರು ಆ ರೀತಿ ಮಾತನಾಡಿದರೆ ಅವರ ಮೇಲೂ ಕ್ರಮ ಕೈಗೊಳ್ಳಲಾಗುವುದು ಎಂದು ಪರಮೇಶ್ವರ್ ಹೇಳಿದ್ದಾರೆ.

ಟಿಪ್ಪು ಜಯಂತಿಗೆ ಕೈಕೊಟ್ಟ ಸಿಎಂ, ಡಿಸಿಎಂ ವಿರುದ್ಧ ಸಿದ್ದರಾಮಯ್ಯ ಟ್ವೀಟ್‌ಟಿಪ್ಪು ಜಯಂತಿಗೆ ಕೈಕೊಟ್ಟ ಸಿಎಂ, ಡಿಸಿಎಂ ವಿರುದ್ಧ ಸಿದ್ದರಾಮಯ್ಯ ಟ್ವೀಟ್‌

ಟಿಪ್ಪು ಜಯಂತಿ ಆಚರಣೆ ವಿರುದ್ಧ ಪತ್ರಕರ್ತ ಸಂತೋಶ್ ತಮ್ಮಯ್ಯ ಅವರು ಕೊಡಗಿನಲ್ಲಿ ಇತ್ತೀಚೆಗೆ ಸಭೆಯೊಂದರಲ್ಲಿ ಮಾತನಾಡಿದ್ದರು ನಂತರ ಅವರನ್ನು ಬಂಧಿಸಲಾಗಿತ್ತು. ಬಂಧನದ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ನಿನ್ನೆ ಅವರಿಗೆ ಜಾಮೀನು ದೊರೆತಿದೆ.

English summary
Home minister G Parameshwar said government will take action against everyone who talk derogatory. He also said government not aiming on any individual people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X