ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತ್ರಿವಿಧ ದಾಸೋಹಿ ಸಿದ್ದಗಂಗಾಶ್ರೀಗಳಿಗೆ ಟ್ವಿಟ್ಟರ್ ನಲ್ಲಿ ನಮನ

By Mahesh
|
Google Oneindia Kannada News

ಬೆಂಗಳೂರು, ಏಪ್ರಿಲ್ 01: ನಡೆದಾಡುವ ದೇವರು, ಕಾಯಕ ಯೋಗಿ, ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ 111ನೇ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ರಾಜಕಾರಣಿಗಳು ಸೇರಿದಂತೆ ಗಣ್ಯಾತಿಗಣ್ಯರು ಶ್ರೀಗಳಿಗೆ ಶುಭಹಾರೈಸಿದ್ದಾರೆ.

ಮುಂಜಾನೆ 6 ಗಂಟೆಗೆ ಶ್ರೀಗಳು ಶಿವಪೂಜೆ ನೆರವೇರಿಸಿದ್ದಾರೆ. ಬೆಳಗ್ಗೆ 8.30ರ ನಂತರ ಸಾರ್ವಜನಿಕರಿಗೆ ದರ್ಶನ ನೀಡಿದ್ದಾರೆ. ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಭಕ್ತರು ಶ್ರೀ ಮಠಕ್ಕೆ ಆಗಮಿಸಿದ್ದಾರೆ.

Birthday Wishes Siddaganga Matha Dr Shivakumara Swamiji

ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಶ್ರೀಗಳಿಗೆ ಶುಭಹಾರೈಸಿ, ಆಶೀರ್ವಾದ ಬೇಡಿದ್ದಾರೆ.

witter-tweet" data-lang="en">

ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಸುದೀರ್ಘ ಆಯುಷ್ಯ ಮತ್ತು ಆರೋಗ್ಯಕ್ಕಾಗಿ ಸದಾ ಪ್ರಾರ್ಥಿಸುತ್ತೇನೆ. ತಮ್ಮ ಸಾನ್ನಿಧ್ಯದಿಂದ ಭಕ್ತರನ್ನು ಅನುಗ್ರಹಿಸುತ್ತಾ, ಸಮಾಜಕ್ಕೆ ಅವರ ಮಾರ್ಗದರ್ಶನ ನಿರಂತರವಾಗಿರಲಿ. pic.twitter.com/fUaTnKBIVM

— Narendra Modi (@narendramodi) April 1, 2018
01.04.1908ರಲ್ಲಿ ಜನಿಸಿದ ಡಾ.ಶಿವಕುಮಾರ ಸ್ವಾಮೀಜಿ ಅವರು, ವಿರಕ್ತಾಶ್ರಮ ದೀಕ್ಷೆ ಪಡೆದು 1930ರಲ್ಲಿ ಸಿದ್ಧಗಂಗಾ ಕ್ಷೇತ್ರ ಪ್ರವೇಶಿಸಿದರು.

ಮೀಜಿಯವರು 111ನೇ ಜನ್ಮದಿನೋತ್ಸವ ಆಚರಣೆ ಮಾಡಿಕೊಳ್ಳುತ್ತಿರುವುದು ಅತ್ಯಂತ ಸಂತಸ ನೀಡಿದೆ. ನಿಮ್ಮ ಸೇವೆ ಹೀಗೆ ನಿರಂತರ ಸಾಗಲಿ.

— Siddaramaiah (@siddaramaiah) April 1, 2018

ಅಂದಿನಿಂದ ಸಿದ್ಧಗಂಗಾ ಮಠಕ್ಕೆ ಹೊಸ ಬೆಳಕು ಮೂಡಿಬಂತು. ಜಂಗಮ ಮೂರ್ತಿಗಳಾದ ಶಿವಕುಮಾರ ಮಹಾಸ್ವಾಮಿಗಳು ಉದ್ಧಾನ ಶಿವಯೋಗಿಗಳ ಅಣತಿಯಂತೆ 1941ರಲ್ಲಿ ಸಿದ್ಧಗಂಗಾ ಮಠದ ಉತ್ತರಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡರು. ನಂತರ ಸಿದ್ಧಗಂಗಾ ಕ್ಷೇತ್ರದ ಸ್ವರೂಪ ಆಮೂಲಾಗ್ರವಾಗಿ ಬದಲಾವಣೆಯಾಯಿತು.

ಪ್ರತಿದಿನವೂ ಶ್ರೀಗಳು ಬೆಳಗಿನ ನಾಲ್ಕುಗಂಟೆಗೆ ಎದ್ದು ಸ್ನಾನಮಾಡಿ, ಪೂಜಾಕೋಣೆಯಲ್ಲಿ ಒಂದು ತಾಸಿಗೂ ಹೆಚ್ಚು ಸಮಯ ಧ್ಯಾನದಲ್ಲಿ ತಲ್ಲೀನರಾಗುತ್ತಾರೆ.


ನಂತರ ಇಷ್ಟಲಿಂಗ ಪೂಜೆ. ದೂರದಿಂದ ಸ್ವಾಮಿಗಳ ದರ್ಶನಕಾಗಿ ಬರುವ ಭಕ್ತರಿಗೆ ತ್ರಿಪುಂಢ್ರ ಭಸ್ಮವನ್ನು ಕೊಟ್ಟು ತಾವೂ ಧರಿಸಿ, ಪೂಜೆಯನ್ನು ಮುಗಿಸುತ್ತಾರೆ. ನಂತರ ಆಹಾರ ಸೇವನೆ, ಮುಂಜಾನೆ ಆರೂವರೆಗಂಟೆಗೆ. ಒಂದು ಅಕ್ಕಿ-ಇಡ್ಲಿ, ಸ್ವಲ್ಪ ಹೆಸರುಬೇಳೆ-ತೊವ್ವೆ, 'ಸಿಹಿ' ಹಾಗೂ 'ಖಾರ ಚಟ್ನಿ' ಸೇವನೆ. ಎರಡು ತುಂಡು ಸೇಬು. ಇದರ ಬಳಿಕ, 'ಬೇವಿನ-ಚಕ್ಕೆ ಕಷಾಯ' ಸೇವನೆಯಾಗುತ್ತದೆ.

ರಾತ್ರಿ ಹತ್ತೂವರೆಗೆ ಸ್ವಾಮೀಜಿ ಮಲಗುವ ವೇಳೆ ಪುಸ್ತಕ ಓದಿ ಮಲಗುವ ಹವ್ಯಾಸವಿಟ್ಟುಕೊಂಡಿದ್ದಾರೆ. ಇದು ಕನಿಷ್ಠ ಅರ್ಧತಾಸಾದರೂ ನಡೆಯುತ್ತದೆ. ಹನ್ನೊಂದು ಗಂಟೆಗೆ ಮಲಗುತ್ತಾರೆ. ಓದಿನೊಂದಿಗೆ ಆರಂಭವಾಗುವ ಶ್ರೀಗಳ ದಿನಚರಿ, ಓದಿನೊಂದಿಗೆ ಮುಕ್ತಾಯವಾಗುತ್ತದೆ.

ಹಲವು ದಿನಗಳಲ್ಲಿ, ಕೆಲವಾರು ಧಾರ್ಮಿಕ ಸಮಾರಂಭಗಳಲ್ಲಿ ಪಾಲ್ಗೊಳ್ಳುತ್ತಾರೆ. ಆಹ್ವಾನಿಸುವ ಭಕ್ತರ ಮನೆಗಳಿಗೂ ಭೇಟಿನೀಡುತ್ತಾರೆ. ದೂರದ ಊರುಗಳಿಗೂ ಓಡಾಡುತ್ತಾರೆ. ಪ್ರಸಾದ ಸ್ವೀಕರಿಸುವ ವೇಳೆಯಲ್ಲಿ ಮಾತ್ರ ಬಿಸಿನೀರು ಸೇವಿಸುತ್ತಾರೆ. ಬಾಕಿ ಸಂದರ್ಭದಲ್ಲಿ ಏನನ್ನೂ ಸೇವಿಸುವುದಿಲ್ಲ.

English summary
The 111th birthday of the Tumakuru Siddaganga matha, Dr. Shivakumara Swamiji is being celebrated on the premises of the math on April 1, 2018. PM Modi, CM Siddaramaiah and other tweeted wishing the seer.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X