ಸಿದ್ದಗಂಗಾ ಮಠದ ಪತ್ರಿಕಾ ಪ್ರಕಟಣೆಯಲ್ಲಿ ಏನಿದೆ?

Posted By:
Subscribe to Oneindia Kannada

ತುಮಕೂರು, ಸೆಪ್ಟೆಂಬರ್ 12: "ಲಿಂಗಾಯತ ಹಾಗೂ ವೀರಶೈವ ಬೇರೆ ಅಲ್ಲ" ಎಂದು ತುಮಕೂರಿನ ಸಿದ್ದಗಂಗಾ ಮಠದಿಂದ ಮಂಗಳವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಲಾಗಿದೆ. ಅಂದ ಹಾಗೆ ಆ ಪ್ರಕಟಣೆಯಲ್ಲಿ ಏನಿದೆ ಎಂಬುದರ ಯಥಾವತ್ ಇಲ್ಲಿದೆ.

ವೀರಶೈವ- ಲಿಂಗಾಯತ ಒಂದೇ: ಸಿದ್ದಗಂಗಾ ಮಠದ ನಿಲುವು ಪ್ರಕಟ

ದಿನಾಂಕ 10-9-2017ರಂದು ಕರ್ನಾಟಕ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ಎಂ.ಬಿ.ಪಾಟೀಲ್ ರವರು ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದಾಗ ಅವರು ನಮ್ಮೊಡನೆ ವೀರಶೈವ/ ಲಿಂಗಾಯತ ಸ್ವತಂತ್ರ ಧರ್ಮದ ವಿಷಯದ ಬಗ್ಗೆ ಚರ್ಚಿಸಿದಾಗ ವೀರಶೈವ ಎಂಬ ಪದ ವಿದ್ಯಾವಂತರು ಮತ್ತು ನಗರ ಪ್ರದೇಶದಲ್ಲಿ ಬಳಕೆಯಲ್ಲಿದೆ.

Shivakumara swamiji

ಲಿಂಗಾಯಿತ ಎಂಬ ಪದ ಗ್ರಾಮೀಣ ಪ್ರದೇಶದಲ್ಲಿ ಬಳಕೆಯಲ್ಲಿದ್ದು ಈ ಎರಡು ಪದಗಳು ಒಂದೇ ಆಗಿದ್ದು ಎಲ್ಲಾ ಧಾರ್ಮಿಕ ಮುಖಂಡರು ಹಾಗೂ ಸಮಾಜಬಾಂಧವರು ಒಂದೆಡೆ ಕುಳಿತು ಸರ್ವ ಸಮ್ಮತವಾದ ನಿರ್ಧಾರ ಕೈಗೊಳ್ಳುವುದು ಸೂಕ್ತ ಎಂದು ನಮ್ಮ ಅಭಿಪ್ರಾಯ ತಿಳಿಸಿರುತ್ತೇವೆ.

Announcement

ಆದರೆ ಮಾನ್ಯ ಶ್ರೀ ಎಂ.ಬಿ.ಪಾಟೀಲ್ ರವರು ಲಿಂಗಾಯಿತ ಪದದ ಪರವಾಗಿ ಬೆಂಬೆಲ ಸೂಚಿಸಿದ್ದಾರೆ ಎಂಬಂತೆ ಮಾಧ್ಯಮಗಳಲ್ಲಿ ಪ್ರಕಟಿಸಿರುವುದು ತಿಳಿದು ಬಂದಿದೆ. ಸಮಾಜವನ್ನು ಈ ರೀತಿ ಇಬ್ಭಾಗ ಮಾಡುವ ರೀತಿಯಲ್ಲಿ ಯಾಅರೇ ಪ್ರಯತ್ನಿಸಿದರೂ ಸಮಾಜದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಸಮಾಜದ ಮುಖಂಡರೆಲ್ಲ ಕುಳಿತು ಚರ್ಚಿಸಿ ಒಮ್ಮತ ರೂಪಿಸುವುದು ಅತ್ಯಂತ ಅಗತ್ಯವಾಗಿದೆ.

(ಶ್ರೀ ಶಿವಕುಮಾರ ಸ್ವಾಮಿಗಳು)

ಶ್ರೀ ಸಿದ್ಧಗಂಗಾ ಮಠ

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Here is the complete text of Siddaganga mutt press release about Lingayat and Veerashyava. After the statement by minister M.B.Patil, on which he said, Siddaganga seer supports Lingayat as separate religion, now Shivakumar seer denies Patil statement.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ