ಸಿದ್ದರಾಮಯ್ಯ ಅವರದ್ದು ಪಿಕ್ ಪಾಕೆಟ್ ಸರ್ಕಾರ: ಎಚ್ಡಿಕೆ

By: ತುಮಕೂರು ಪ್ರತಿನಿಧಿ
Subscribe to Oneindia Kannada

ತುಮಕೂರು, ಡಿಸೆಂಬರ್ 08: ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನರ ಜೇಬಿಗೆ ಕತ್ತರಿ ಹಾಕಿ ಹಲವು ಭಾಗ್ಯಗಳನ್ನು ಕೊಟ್ಟಿದೆ. 10 ರೂಗೆ ದೊರಕುವ ಮದ್ಯವನ್ನು ಅರುವತ್ತು ರೂಗೆ ಏರಿಸಿ ವಸೂಲಿಗೆ ನಿಂತಿದೆ. ಇದು ಪಿಕ್ ಪಾಕೆಟ್ ಸರ್ಕಾರ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ತುಮಕೂರಿನಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಅವರಿಗೆ ಕೆಟ್ಟು ಹೋಗಿರುವ ಬಸ್ಸಿನ ಜವಾಬ್ದಾರಿ ವಹಿಸಲಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಓಡುವ ಬಸ್ಸಿನ ನಿರ್ವಹಣೆಯ ಜವಾಬ್ದಾರಿ ಹೊತ್ತಿದ್ದಾರೆ.

Congress is running a pickpocket Government : HD Kumaraswamy

ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ಕಾರ್ಯಕ್ರಮದ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಕೆಪಿಸಿಸಿ ಅಧ್ಯಕ್ಷ ಡಾ ಜಿ ಪರಮೇಶ್ವರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತ್ಯೇಕವಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಜನರ ಬಳಿ ಕೊಂಡೊಯ್ಯಲು ಪ್ರಚಾರಕ್ಕೆ ಮುಂದಾಗಿರುವುದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೀವ್ರ ಲೇವಡಿ ಮಾಡಿದ್ದಾರೆ.

ಸರ್ಕಾರದ ಕಾರ್ಯಕ್ರಮಗಳ ಸಭೆ ಸಮಾರಂಭಗಳಿಗೆ ಟೆಂಡರ್ ಕರೆದಿರುವುದು ದೇಶದಲ್ಲಿ ಇದೇ ಮೊದಲ ಸರ್ಕಾರ. ಸಭೆ ಸಮಾರಂಭಗಳಲ್ಲಿ ಸಿ ಎಮ್ ಮನಬಂದಂತೆ ಹಣ ಘೋಷಣೆ ಮಾಡುತ್ತಿದ್ದಾರೆ. ಆದರೆ, ಅದಕ್ಕೆಲ್ಲ ಹಣ ಎಲ್ಲಿದೆ ಎಂದು ಪ್ರಶ್ನಿಸಿದರಲ್ಲದೆ
ರಾಮನಗರ ನನ್ನ ಕರ್ಮ ಭೂಮಿ. ಹಾಗಾಗಿ ಅಲ್ಲಿಂದಲೇ ನನ್ನ ಸ್ಪರ್ಧೆ ಖಚಿತ ಡಿಸೆಂಬರ್ ಹದಿನೈದರಂದು ಬಿಡುಗಡೆಯಾಗಲಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರೂ ಇರಲಿದೆ ಎಂದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
JDS state president HD Kumaraswamy alleged that Congress is running a pickpocket government in Karnataka and public is suffering due to price hike of essential commodities. Kumawaraswamy was in Tumakuru looking after the preparation of JDS convention of minority communities.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ