ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿಗರೇ, ದೇಶದ ರಾಜಕೀಯ ಇತಿಹಾಸ ಓದ್ಕೊಳ್ಳಿ ಎಂದ ಪರಮೇಶ್ವರ

|
Google Oneindia Kannada News

ತುಮಕೂರು, ನವೆಂಬರ್ 14: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಪ್ರಧಾನಿ ಆಗುವ ಅವಕಾಶವನ್ನು ನೆಹರು ಕಸಿದುಕೊಂಡರು ಎಂದು ಬಿಜೆಪಿ ಸುಳ್ಳು ಪ್ರಚಾರ ಮಾಡುತ್ತಿದೆ. ಬಿಜೆಪಿ ರಾಜಕೀಯ ಇತಿಹಾಸ ಓದಿದರೆ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದರೇ ನೆಹರು ಎಂಬುದು ತಿಳಿಯುತ್ತಿತ್ತು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು.

ತುಮಕೂರು ಕೆಪಿಸಿಸಿ ಕಚೇರಿಯಲ್ಲಿ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಜನ್ಮದಿನಾಚರಣೆ ಹಾಗೂ ಮಕ್ಕಳ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಕಳೆದ 70 ವರ್ಷದಲ್ಲಿ ಅಭಿವೃದ್ಧಿ ರಾಷ್ಟ್ರಗಳಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ದೇಶದ ಅಭಿವೃದ್ಧಿ ದೊಡ್ಡಮಟ್ಟದಲ್ಲಿ ಆಗಿದೆ. ಈ ಅಭಿವೃದ್ಧಿಗೆ ಅಡಿಪಾಯ ಹಾಕಿದವರೇ ನೆಹರು ಅವರು.‌ ಶಿಕ್ಷಣ, ಹಸಿರು ಕ್ರಾಂತಿ, ಕೈಗಾರಿಕೆ ಸೇರಿದಂತೆ ಎಲ್ಲ ಕ್ಷೇತ್ರವೂ ಮುಂದುವರೆದಿದೆ. ರಾಜಕೀಯ ಇತಿಹಾಸ ತಿಳಿಯದ ಬಿಜೆಪಿ‌ ನೆಹರು ಅವರ ಬಗ್ಗೆ ಅನವಶ್ಯಕ ಟೀಕೆ ಮಾಡುತ್ತಿದ್ದಾರೆ.

ನಾಲ್ಕು ಕ್ಷೇತ್ರದಲ್ಲಿ ಗೆಲುವು, ಶಿವಮೊಗ್ಗದಲ್ಲಿ ನೈತಿಕ ಗೆಲುವು: ಕುಮಾರಸ್ವಾಮಿ

ನೆಹರು ಸ್ವಾತಂತ್ರ್ಯ ಸಂದರ್ಭದಲ್ಲಿ ಸಾಕಷ್ಟು ಹೋರಾಟ ಮಾಡಿದವರು. ಅವರು ಪ್ರಧಾನಿಯಾಗಲು ಯಾವುದೇ ಲಾಭಿ ಮಾಡಲಿಲ್ಲ. ಎಲ್ಲರ ಸಹಮತದಿಂದಲೇ ಪ್ರಧಾನಿಯಾಗಿದ್ದಾರೆ. ವಲ್ಲಭಭಾಯಿ ಪಟೇಲ್ ಅವರಿಂದ ಪ್ರಧಾನಿ ಹುದ್ದೆ ಕಸಿದುಕೊಂಡರು ಎಂಬ ಹೇಳಿಕೆಯನ್ನು ಯಾರೂ ನಂಬುವುದಿಲ್ಲ ಎಂದು ಹೇಳಿದರು.

DCM suggests Bjp should read political history of the country

ಅವಹೇಳನಕಾರಿ ಹೇಳಿಕೆ ನೀಡುವ ಎಲ್ಲರ ವಿರುದ್ಧ ಕ್ರಮ: ಪರಮೇಶ್ವರ್‌

ಪ್ರಧಾನಿ ನರೇಂದ್ರ ಮೋದಿ ಕಪ್ಪು ಹಣ ಹಿಂತರುವುದಾಗಿ ಹೇಳಿ ನೋಟು ಅಮಾನ್ಯೀಕರಣ ಮಾಡಿದರು. ಆದರೆ ಇದರ ಲಾಭ ಕೇವಲ ಉದ್ಯಮಿಗಳಿಗೆ ಆಯಿತೇ ವಿನಃ ಜನಸಾಮಾನ್ಯರಿಗಲ್ಲ.‌ಕಪ್ಪು ಹಣ ಹಿಂತರುವ ಹೇಳಿಕೆಯೂ ಸುಳ್ಳಾಯಿತು. ಇದನ್ನು ಜನಸಾಮಾನ್ಯರು ನೋಡುತ್ತಿದ್ದು ಮುಂದಿನ ಚುನಾವಣೆಯಲ್ಲಿ ಪಾಠ ಕಲಿಸಲಿದ್ದಾರೆ ಎಂದರು.

English summary
Deputy chief minister Dr.G.Parameshwar has suggested that the Bjp leaders should have read political history of the country before making any senseless comments on anybody.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X