ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅನ್ನಭಾಗ್ಯ ಅಕ್ಕಿ ಕಡಿತಕ್ಕೆ ಸಂಸದ ಡಿ.ಕೆ.ಸುರೇಶ್ ಅಸಮಾಧಾನ

By Manjunatha
|
Google Oneindia Kannada News

ತುಮಕೂರು, ಜುಲೈ 6: ಬಜೆಟ್‌ನಲ್ಲಿ ರೈತರ ಸಾಲಮನ್ನಾ ಮಾಡಿರುವುದು ಸಂತಸಕರ ಆದರೆ ಅನ್ನಭಾಗ್ಯದ ಅಕ್ಕಿಯ ಪ್ರಮಾಣಕ್ಕೆ ಕಡಿವಾಣ ಹಾಕಿರುವುದರಿಂದ ಜನರಿಗೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ನಭಾಗ್ಯದ ಅಕ್ಕಿ ಪ್ರಮಾಣದಲ್ಲಿ ಕಡಿಮೆ ಮಾಡಿರುವುದು ಉತ್ತಮ ನಡೆಯಲ್ಲ, ಈ ನಿರ್ಣಯ ವಪಾಸ್ಸು ತೆಗೆದುಕೊಳ್ಳುವಂತೆ ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡುತ್ತೇನೆ ಎಂದರು.

ಕರ್ನಾಟಕ ಬಜೆಟ್ 2018 : ಕುಮಾರಸ್ವಾಮಿ ಆಯವ್ಯಯದ Highlightsಕರ್ನಾಟಕ ಬಜೆಟ್ 2018 : ಕುಮಾರಸ್ವಾಮಿ ಆಯವ್ಯಯದ Highlights

ರೈತರ ಹಾಗೂ ರಾಜ್ಯದ ಜನರ ಹಿತ ಕಾಪಾಡಲು ಪೆಟ್ರೋಲ್, ಡೀಸೆಲ್ ಹಾಗೂ ವಿದ್ಯುತ್ ದರ ಏರಿಕೆ ಅನಿವಾರ್ಯವಾಗಿತ್ತು, ಕೇಂದ್ರ ಸರ್ಕಾರ ಸರಿಯಾಗಿ ಅನುದಾನ ನೀಡಿದ್ದರೆ ಈ ರೀತಿ ಆಗುತ್ತಿರಲಿಲ್ಲ ಎಂದು ಬೆಲೆ ಏರಿಕೆಯನ್ನು ಸುರೇಶ್ ಅವರು ಸಮರ್ಥಿಸಿಕೊಂಡರು.

DK Suresh unhappy with Annabhagyas rice cut off decision

ರಾಜ್ಯದ ಜನರು ಮೈತ್ರಿ ಸರ್ಕಾರದ ಮೇಲೆ ವಿಶ್ವಾ ಇಟ್ಟಿದ್ದಾರೆ ಆ ವಿಶ್ವಾಸವನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಸರ್ಕಾರ ಇದೆ ಎಂದ ಅವರು, ಬಜೆಟ್ ಕಡತಕ್ಕೆ ಅನುಮೋದನೆ ಸಿಗುವ ಮೊದಲು ಅನ್ನಭಾಗ್ಯ ಅಕ್ಕಿ ಕಡಿತದ ಬಗ್ಗೆ ಕುಮಾರಸ್ವಾಮಿ ಅವರು ಪುನರ್‌ ಪರಿಶೀಲನೆ ಮಾಡಬೇಕು ಎಂದರು.

English summary
Congress MP DK Suresh unhappy with CM Kumaraswamy decision to cut off the rice quantity of Annabhagya scheme. He said Cm Kumaraswamy should re think on his decision.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X