ತುಮಕೂರು : ಗೊರವನಹಳ್ಳಿ ದೇವಾಲಯ ಜಿಲ್ಲಾಡಳಿತದ ವಶಕ್ಕೆ
ತುಮಕೂರು, ಮಾ.8 : ತುಮಕೂರು ಜಿಲ್ಲೆಯ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮೀ ದೇವಾಲಯವನ್ನು ಜಿಲ್ಲಾಡಳಿತ ತನ್ನ ವಶಕ್ಕೆ ಪಡೆದಿದೆ. ಮಧುಗಿರಿ ಉಪವಿಭಾಗಾಧಿಕಾರಿ ಅನಿತಾ ಲಕ್ಷ್ಮೀ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ದೇವಾಲಯದ ನಿರ್ವಹಣೆ ಕುರಿತು ಭಕ್ತರು ಮತ್ತು ಟ್ರಸ್ಟ್ ನಡುವೆ ಕೆಲವು ದಿನಗಳಿಂದ ಜಟಾಪಟಿ ನಡೆದಿತ್ತು.
ತುಮಕೂರು ಜಿಲ್ಲಾಧಿಕಾರಿ ಸತ್ಯಮೂರ್ತಿ ಅವರು ದೇವಾಲಯದ ಟ್ರಸ್ಟ್ ಹಾಗೂ ದೇವಸ್ಥಾನಕ್ಕೆ ಸಂಬಂಧಪಟ್ಟ ಎಲ್ಲಾ ಸ್ಥಿರಾಸ್ತಿ ಹಾಗೂ ಚರಾಸ್ಥಿಗಳನ್ನು ವಶಕ್ಕೆ ಪಡೆದು ಆದೇಶ ಹೊರಡಿಸಿದ್ದಾರೆ. ದೇವಾಲಯದ ಆಡಳಿತಾಧಿಕಾರಿ ಅನಿತಾ ಲಕ್ಷ್ಮೀ ಹಾಗೂ ಕೊರಟಗೆರೆ ತಹಶೀಲ್ದಾರ್ ಏಕೇಶ್ ಬಾಬು ನೇತೃತ್ವದ ತಂಡ ಶನಿವಾರ ದೇವಾಲಯಕ್ಕೆ ಭೇಟಿ ನೀಡಿತ್ತು.

ದೇವಾಲಯದ ಆಡಳಿತ ಕಚೇರಿ ಬೀಗವನ್ನು ಪಡೆದುಕೊಂಡಿರುವ ಆಡಳಿತಾಧಿಕಾರಿಗಳು ಹುಂಡಿಯನ್ನು ಒಡೆದು ಎಣಿಕೆ ಕಾರ್ಯ ಮಾಡಿದ್ದಾರೆ. ಶನಿವಾರ ಸುಮಾರು 14 ಲಕ್ಷ ರೂ. ಹಣ ಮತ್ತು 8.14 ಕೆಜಿ ಚಿನ್ನ, 90 ಕೆಜಿ ಬೆಳ್ಳಿ ಪತ್ತೆಯಾಗಿದೆ. ಸರ್ಕಾರದ ಅಧಿಕೃತ ಮೌಲ್ಯಮಾಪಕ ವೇದಮೂರ್ತಿ ಆಚಾರ್ ನೇತೃತ್ವದಲ್ಲಿ ಎಣಿಕೆ ಕಾರ್ಯ ನಡೆಯುತ್ತಿದೆ. [ಗೊರವನಹಳ್ಳಿ ದೇವಸ್ಥಾನ ಮುಜರಾಯಿ ಇಲಾಖೆಗೆ?]
ಜಿಲ್ಲಾಧಿಕಾರಿಗಳ ವಿರುದ್ಧ ಆಕ್ರೋಶ : ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮೀ ದೇವಾಲಯವನ್ನು ವಶಕ್ಕೆ ಪಡೆದಿರುವ ಜಿಲ್ಲಾಡಳಿತದ ವಿರುದ್ಧ ದೇವಾಲಯದ ಟ್ರಸ್ಟ್ ಅಧ್ಯಕ್ಷ ಶ್ರೀರಂಗಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ನೋಟಿಸ್ ನೀಡದೆ ಏಕಾಏಕಿ ಈ ಕ್ರಮ ಕೈಗೊಂಡಿರುವುದು ಕಾನೂನುಬಾಹಿರ. ಇದರ ವಿರುದ್ಧ ಕಾನೂನು ಹೋರಾಟ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ. [ಈಡೇನಹಳ್ಳಿ ಗ್ರಾಮಸ್ಥರನ್ನು ಒಂದುಗೂಡಿಸಿದ ಹನುಮಂತ]
ದೇವಾಲಯದ ವಿವಾದವೇನು : ಸುಮಾರು 30 ವರ್ಷಗಳ ಹಿಂದೆ ದೇವಾಲಯವನ್ನು ನಿರ್ಮಾಣ ಮಾಡಲಾಗಿದೆ. 14 ಮಂದಿ ಧರ್ಮದರ್ಶಿಗಳನ್ನು ಒಳಗೊಂಡ ಮಹಾಲಕ್ಷ್ಮೀ ಚಾರಿಟಬಲ್ ಟ್ರಸ್ಟ್ ದೇವಾಲಯದ ಉಸ್ತುವಾರಿ ನೋಡಿಕೊಳ್ಳುತ್ತಿತ್ತು. [ಮಠಗಳಿಗೆ ನಿಯಂತ್ರಣ ಹಾಕುವ ವಿಧೇಯಕ ವಾಪಸ್]
ಆದರೆ, ಟ್ರಸ್ಟ್‌ನಲ್ಲಿ ಸ್ಥಳೀಯರು ಕಡಿಮೆ ಇದ್ದು, ಬೆಂಗಳೂರು ಮತ್ತು ತುಮಕೂರಿನ ವ್ಯಕ್ತಿಗಳು ಧರ್ಮದರ್ಶಿಗಳಾಗಿದ್ದಾರೆ. ಸ್ಥಳೀಯರು ಕಟ್ಟಿ ಬೆಳೆಸಿದ ದೇವಾಲಯವನ್ನು ಪ್ರಭಾವಿ ಮಠವೊಂದಕ್ಕೆ ಹಸ್ತಾಂತರ ಮಾಡುವ ಹುನ್ನಾರ ನಡೆಯುತ್ತಿದೆ ಎಂಬ ಆರೋಪವೂ ಕೇಳಿಬರುತ್ತಿದೆ.
ಸ್ಥಳೀಯರು ಮತ್ತು ಟ್ರಸ್ಟ್ ನಡುವೆ ಈ ವಿಚಾರದಲ್ಲಿ ಗಲಾಟೆಗಳು ನಡೆದು ವಿವಾದ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಟ್ರಸ್ಟ್ ವಿರುದ್ಧ ಅವ್ಯವಹಾರದ ಆರೋಪಗಳೂ ಕೇಳಿ ಬಂದಿತ್ತು. ಆದ್ದರಿಂದ ತಿಂಗಳ ಹಿಂದೆ ದೇವಸ್ಥಾನದ ಆಡಳಿತ ಕಚೇರಿಗೆ ಸ್ಥಳೀಯ ಗ್ರಾಮಸ್ಥರು ಬೀಗ ಹಾಕಿದ್ದರು.
ಈ ಎಲ್ಲಾ ಆರೋಪಗಳ ಹಿನ್ನಲೆಯಲ್ಲಿ ಶನಿವಾರ ಜಿಲ್ಲಾಧಿಕಾರಿಗಳು ದೇವಾಲಯವನ್ನು ವಶಕ್ಕೆ ಪಡೆದು, ಆಡಳಿತಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ದೇವಾಲಯದ ಆಡಳಿತ ಮಂಡಳಿ ಈ ಕ್ರಮವನ್ನು ಖಂಡಿಸಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications