ಸಿದ್ದರಾಮಯ್ಯಗೆ ತಾಕತ್ತಿದ್ದರೆ ಹಂದಿಮಾಂಸ ತಿಂದು ಮಸೀದಿ ಪ್ರವೇಶಿಸಲಿ: ಸೊಗಡು

Posted By:
Subscribe to Oneindia Kannada

ತುಮಕೂರು, ಅಕ್ಟೋಬರ್ 24: "ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಂಸದೂಟ ಮಾಡಿ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಹೋಗಿ, ನನ್ನ ಆಹಾರ ಪದ್ಧತಿ ಎಂದು ಸಮರ್ಥನೆ ಮಾಡಿಕೊಂಡಿರುವುದು ಆಸ್ತಿಕ ಜನರ ಮನಸಿಗೆ ನೋವುಂಟು ಮಾಡಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ.

ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇಗುಲ ಪ್ರವೇಶ ಮಾಡಿದ್ದು ತಪ್ಪೆ?

ತುಮಕೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಬೇಡರ ಕಣ್ಣಪ್ಪನನ್ನು ಉದಾಹರಣೆ ತೆಗೆದುಕೊಂಡಿರುವ ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ಹಂದಿ ತಿಂದು ಮಸೀದಿ ಒಳಗೆ ಹೋಗಲಿ. ಆ ನಂತರ ಇದು ಕೂಡ ನನ್ನ ಆಹಾರ ಪದ್ಧತಿ ಎಂದು ಸಮರ್ಥನೆ ಮಾಡಿಕೊಳ್ಳಲಿ ನೋಡೋಣ ಎಂದು ಪಂಥಾಹ್ವಾನ ನೀಡಿದರು.

If Siddaramaiah has guts, after eating pork ask him to enter mosque: Sogadu Shivanna

ಧರ್ಮಸ್ಥಳದ ಮಂಜುನಾಥನಿಗೆ ರಾಜ್ಯ, ರಾಷ್ಟ್ರ ಹಾಗೂ ವಿದೇಶಗಳಲ್ಲಿ ಕೋಟ್ಯಂತರ ಭಕ್ತರಿದ್ದಾರೆ. ಅವರ ಭಾವನೆಗಳಿಗೆ ವಿರುದ್ಧವಾಗಿ ಮುಖ್ಯಮಂತ್ರಿ ನಡೆದುಕೊಂಡಿದ್ದಾರೆ. ಆದ್ದರಿಂದ ಸಿದ್ದರಾಮಯ್ಯ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಲಾಭಕ್ಕೋಸ್ಕರ ಯಾರನ್ನು ಬೇಕಾದರೂ ನಾಶ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಡಿಯೂರಪ್ಪ ಮಿಷನ್-150ಈಗ ಮಿಷನ್-50 : ಸಿದ್ದರಾಮಯ್ಯ ವ್ಯಂಗ್ಯ

ಬಂಟ್ವಾಳದಲ್ಲಿ ಭಾನುವಾರ ಮಾಂಸದೂಟ ಸೇವಿಸಿದ್ದ ಸಿದ್ದರಾಮಯ್ಯ ಮತ್ತು ಇತರ ಸಂಪುಟ ಸಹೋದ್ಯೋಗಿಗಳು ಆ ನಂತರ ಧರ್ಮಸ್ಥಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ಮಂಜುನಾಥನ ದೇವಾಲಯಕ್ಕೆ ಭೇಟಿ ನೀಡಿದ್ದರು. ಮಾಂಸದೂಟ ಮಾಡಿದ ನಂತರ ದೇವಾಲಯಕ್ಕೆ ಹೋಗಿದ್ದು ತಪ್ಪು ಎಂಬ ವಿವಾದ ಎದ್ದಿತ್ತು. ಇದೇ ವೇಳೆ ಮುಖ್ಯಮಂತ್ರಿ ಇದನ್ನು ಸಮರ್ಥಿಸಿಕೊಂಡಿದ್ದರು. ಅವರ ಪರವಾದ ಅಭಿಪ್ರಾಯಗಳೂ ವ್ಯಕ್ತವಾಗಿದ್ದವು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
If chief minister Siddaramaiah has guts, after eating pork ask him to enter mosque, former minister Sogadu Shivanna challenges in press meet at Tumakuru.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ