ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಮಕೂರು : ವರದಿಗಾರನ ಮೇಲೆ ಹಲ್ಲೆ ಪ್ರಕರಣದ ಬಗ್ಗೆ ಸಿಐಡಿ ತನಿಖೆ

|
Google Oneindia Kannada News

ತುಮಕೂರು, ಡಿಸೆಂಬರ್ 05 : ಖಾಸಗಿ ಮಾಧ್ಯಮದ ಜಿಲ್ಲಾ ವರದಿಗಾರನ ಮೇಲೆ ನಡೆದ ಹಲ್ಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಪತ್ರಕರ್ತರ ನಿಯೋಗ ಸಿಐಡಿ ತನಿಖೆಗೆ ಒತ್ತಾಯಿಸಿತ್ತು.

ತುಮಕೂರಿನಲ್ಲಿ ಬಿಜೆಪಿ ಮುಖಂಡನಿಂದ ವರದಿಗಾರನ ಮೇಲೆ ಹಲ್ಲೆತುಮಕೂರಿನಲ್ಲಿ ಬಿಜೆಪಿ ಮುಖಂಡನಿಂದ ವರದಿಗಾರನ ಮೇಲೆ ಹಲ್ಲೆ

ಬಿಟಿವಿಯ ತುಮಕೂರು ಜಿಲ್ಲಾ ವರದಿಗಾರ ವಾಗೀಶ್ ಮೇಲೆ ಬಿಜೆಪಿ ಮುಖಂಡರು ಶನಿವಾರ ಹಲ್ಲೆ ನಡೆಸಿದ್ದದರು. ಈ ಘಟನೆಯನ್ನು ಖಂಡಿಸಿ ವಿವಿಧ ಜಿಲ್ಲೆಗಳಲ್ಲಿ ಪತ್ರಕರ್ತರು ಪ್ರತಿಭಟನೆ ನಡೆಸಿದ್ದರು. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು.

ಸಿದ್ಧಿ ಚಿಟ್ ಫಂಡ್ ವಂಚನೆ ಪ್ರಕರಣ ಸಿಐಡಿಗೆ ಹಸ್ತಾಂತರಸಿದ್ಧಿ ಚಿಟ್ ಫಂಡ್ ವಂಚನೆ ಪ್ರಕರಣ ಸಿಐಡಿಗೆ ಹಸ್ತಾಂತರ

Journalist attacked by BJP worker, order for CID probe

ಸೋಮವಾರ ಪತ್ರಕರ್ತರ ನಿಯೋಗ ಅಖಿಲ ಭಾರತ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ಅವರ ನೇತೃತ್ವದಲ್ಲಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿ ಮಾಡಿದ್ದರು, ಸಿಐಡಿ ತನಿಖೆಗೆ ಆಗ್ರಹಿಸಿದ್ದರು.

ಅಕ್ರಮ ಗಣಿಗಾರಿಕೆ ಕುರಿತು ವರದಿ ಮಾಡಲು ಹೋಗಿದ್ದ ವಾಗೀಶ್ ಅವರ ಮೇಲೆ ತುಮಕೂರು ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹೆಬ್ಬಾಕ ರವಿಶಂಕರ್, ಮಹಾನಗರ ಪಾಲಿಕೆ ಬಿಜೆಪಿ ಸದಸ್ಯ ಬಾವಿಕಟ್ಟೆ ನಾಗಣ್ಣ ಹಲ್ಲೆ ನಡೆಸಿದ್ದರು.

ಪತ್ರಕರ್ತರ ಮೇಲಿನ ಹಲ್ಲೆ ಪ್ರಕರಣಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು, ಗೃಹ ಸಚಿವರನ್ನು ಒತ್ತಾಯಿಸಲಾಗಿತ್ತು. ಸರ್ಕಾರ ಸೋಮವಾರ ಪ್ರಕರಣದ ಸಿಐಡಿ ತನಿಖೆಗೆ ಆದೇಶ ನೀಡಿದೆ.

English summary
Criminal Investigation Department (CID) probe ordered into the recent attack on a journalist by BJP workers in Tumakuru, Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X