ಶಿವಕುಮಾರ ಸ್ವಾಮೀಜಿಗಳಿಗೆ ಶುಭ ಕೋರಿದ ಮೋದಿ

Posted By:
Subscribe to Oneindia Kannada

ತುಮಕೂರು, ಏಪ್ರಿಲ್ 01 : 109 ವರ್ಷ ತುಂಬಿದ ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳು ಇನ್ನೂ ನೂರೆಂಟು ಕಾಲ ಬಾಳಲಿ ಎಂಬ ಆಶಯದೊಂದಿಗೆ ಏ.1ರಂದು ಅವರ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ.

ಶುಕ್ರವಾರ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಶಿವಕುಮಾರ ಶ್ರೀಗಳ 109ನೇ ಹುಟ್ಟು ಹಬ್ಬದ ಅಂಗವಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮುಂಜಾನೆ 3 ಗಂಟೆಗೆ ಶ್ರೀಗಳು ಶಿವಪೂಜೆ ನೆರವೇರಿಸಿದ್ದಾರೆ. ಬೆಳಗ್ಗೆ 8.30ರ ನಂತರ ಸಾರ್ವಜನಿಕರಿಗೆ ದರ್ಶನ ನೀಡಲಿದ್ದಾರೆ. [ಲೋಕ ಜಂಗಮ: ಸಿದ್ದಗಂಗಾಶ್ರೀ ಸಾಕ್ಷ್ಯಚಿತ್ರ ಲೋಕಾರ್ಪಣೆ]

siddaganga seer

ಶ್ರೀಗಳ ಹುಟ್ಟುಹಬ್ಬವನ್ನು ಸ್ಮರಣೀಯಗೊಳಿಸಲು ಅಭಿವಂದನಾ ಸಮಿತಿ ತಯಾರಿ ಮಾಡಿಕೊಂಡಿದೆ. ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಭಕ್ತರು ಶ್ರೀ ಮಠಕ್ಕೆ ಆಗಮಿಸಿದ್ದಾರೆ. [ನೂರೆಂಟು ವಸಂತ ಕಂಡ ತ್ರಿವಿಧ ದಾಸೋಹಿಗೆ ಕೋಟಿ ವಂದನೆ]

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡಾ.ಶಿವಕುಮಾರ ಸ್ವಾಮೀಜಿಗಳಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ.

ಮಠಕ್ಕೆ ಮುಖ್ಯಮಂತ್ರಿಗಳ ಭೇಟಿ : ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. [ಶಿವಕುಮಾರ ಶ್ರೀಗಳಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ]

ಚಿತ್ರಗಳು ಶ್ರೀಗಳನ್ನು ಭೇಟಿ ಮಾಡಿದ ಸಿದ್ದರಾಮಯ್ಯ

ಸದ್ದಿಲ್ಲದೇ ಸಾಧನೆ ಮಾಡಿದರು : 01.04.1908ರಲ್ಲಿ ಜನಿಸಿದ ಡಾ.ಶಿವಕುಮಾರ ಸ್ವಾಮೀಜಿ ಅವರು, ವಿರಕ್ತಾಶ್ರಮ ದೀಕ್ಷೆ ಪಡೆದು 1930ರಲ್ಲಿ ಸಿದ್ಧಗಂಗಾ ಕ್ಷೇತ್ರ ಪ್ರವೇಶಿಸಿದರು. ಅಂದಿನಿಂದ ಸಿದ್ಧಗಂಗಾ ಮಠಕ್ಕೆ ಹೊಸ ಬೆಳಕು ಮೂಡಿಬಂತು.

ಜಂಗಮ ಮೂರ್ತಿಗಳಾದ ಶಿವಕುಮಾರ ಮಹಾಸ್ವಾಮಿಗಳು ಉದ್ಧಾನ ಶಿವಯೋಗಿಗಳ ಅಣತಿಯಂತೆ 1941ರಲ್ಲಿ ಸಿದ್ಧಗಂಗಾ ಮಠದ ಉತ್ತರಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡರು. ನಂತರ ಸಿದ್ಧಗಂಗಾ ಕ್ಷೇತ್ರದ ಸ್ವರೂಪ ಆಮೂಲಾಗ್ರವಾಗಿ ಬದಲಾವಣೆಯಾಯಿತು. [ಶ್ರೀಗಳ ಬಗ್ಗೆ ಓದಿ]

-
-
-
-

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The 109th birthday of the Tumakuru Siddaganga mutt, Dr. Shivakumara Swamiji was celebrated on the premises of the mutt on Friday, April 1, 2016.
Please Wait while comments are loading...